ಬಾಂಗ್ಲಾದೇಶವಾಗಿಸಲು ಹೆಚ್ಚಿನ ಸಮಯ ಹಿಡಿಯುವುದಿಲ್ಲ; ಅರೆಸ್ಟ್ ವೇಳೆ ಲೈಂಗಿಕ ಕಿರುಕುಳ ಆರೋಪಿ ಹೇಳಿಕೆ ವೈರಲ್

UP Accused
Published on

ಬರೇಲಿ: ಮಾಜಿ ಸೈನಿಕರ ಕುಟುಂಬಸ್ಥರಿಗೆ ಉದ್ಯೋಗದಲ್ಲಿ ಮೀಸಲಾತಿ ವಿರೋಧಿಸಿ ಬಾಂಗ್ಲಾದೇಶದಾದ್ಯಂತ ನಡೆದ ಹಿಂಸಾಚಾರದಲ್ಲಿ 650ಕ್ಕೂ ಹೆಚ್ಚು ಜನರು ಬಲಿಯಾಗಿದ್ದು, ಸಾಮಾನ್ಯ ಸ್ಥಿತಿಗೆ ಮರಳುತ್ತಿದೆ. ಆದರೆ, ಬಾಂಗ್ಲಾದೇಶದಲ್ಲಾಂತೆ ಇಲ್ಲಾಗಲೂ ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ ಎಂದು ಲೈಂಗಿಕ ಕಿರುಕುಳ ನೀಡಿದ ಆರೋಪಿಯೋರ್ವ ಹೇಳಿರುವ ಘಟನೆ ಉತ್ತರಪ್ರದೇಶದ ಬರೇಲಿಯಲ್ಲಿ ನಡೆದಿದೆ.

ಘಟನೆಯೂ ಬರೇಲಿಯ ಅಯೋನ್ಲಾ ಗ್ರಾಮದಲ್ಲಿ ನಡೆದಿದ್ದು, ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿ ಶಾಲೆಯಿಂದ ವಾಪಸ್​ ಆಗುತ್ತಿದ್ದ ವೇಳೆ ಆರೋಪಿಗಳಾದ ಆಮೀರ್​ ಹಾಗೂ ಫೈಜಾನ್​ ಬಾಲಕಿಯನ್ನು ಅಡ್ಡಗಟ್ಟಿದ್ದು, ಆಕೆಗೆ ಗನ್​ ತೋರಿಸಿ ಇಸ್ಲಾಂಗೆ ಮತಾಂತರವಾಗು ಇಲ್ಲಾಂದರೆ ಎಂದು ಹೇಳಿ ನಡು ರಸ್ತೆಯಲ್ಲೇ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ವೇಳೆ ಬಾಲಕಿ ಜೋರಾಗಿ ಕೂಗಿಕೊಂಡಿದ್ದು, ಸ್ಥಳೀಯರು ಆಕೆಯ ನೆರವಿಗೆ ಧಾವಿಸಿದ್ದಾರೆ.

ಈ ವೇಳೆ ಓರ್ವ ಆರೋಪಿ ಓಡಿ ಹೋಗಿದ್ದು, ಮತ್ತೋರ್ವ ಆರೋಪಿ ಸಾರ್ವಜನಿಕರಿಗೆ ಗನ್​ ತೋರಿಸಿ ಇದು ಅಯೋನ್ಲಾ ನಮ್ಮನ್ನು ಹಿಡಿದರೆ ಇದನ್ನು ಬಾಂಗ್ಲಾದೇಶವಾಗಿ ಪರಿವರ್ತಿಸಲು ಹೆಚ್ಚಿನ ಸಮಯ ಹಿಡಿಯುವುದಿಲ್ಲ ಎಂದು ಸಾರ್ವಜನಿಕರಿಗೆ ಅವಾಜ್​ ಹಾಕಿದ್ದಾನೆ. ವಿಚಾರ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು, ಆತನ ಕತ್ತಿನ ಪಟ್ಟಿ ಹಿಡಿದು ಎಳೆದೊಯ್ದಿದ್ದಾರೆ. ಅರೆಸ್ಟ್​ ವೇಳೆಯೂ ಆರೋಪಿ ತನ್ನ ಹೇಳಿಕೆಯನ್ನು ಪುನರುಚ್ಛರಿಸಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

ಸಂತ್ರಸ್ತೆಯ ಸಹೋದರ ನೀಡಿದ ದೂರನ್ನು ಆಧರಿಸಿ ಪೊಲೀಸರು ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ್ದು, ಇನ್ನೋರ್ವನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಘಟನೆ ಸಂಬಂಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಆರೋಪಿಗಳ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net