More

    ಬಾಂಗ್ಲಾ ಚುನಾವಣೆ: ನ್ಯಾಯಸಮ್ಮತವಲ್ಲ ಎಂದ ಅಮೇರಿಕಾ

    ವಾಷಿಂಗ್ಟನ್: ಬಾಂಗ್ಲಾದೇಶದಲ್ಲಿ ನಡೆದ ಸಾರ್ವತ್ರಿಕ ಚುನಾವಣೆ ಮುಕ್ತ ಅಥವಾ ನ್ಯಾಯಸಮ್ಮತವಾಗಿರಲಿಲ್ಲ ಎಲ್ಲಾ ಪಕ್ಷಗಳು ಮತದಾನದಲ್ಲಿ ಭಾಗವಹಿಸಿಲ್ಲ ಎಂದು ಅಮೇರಿಕಾ ವಿಷಾದ ವ್ಯಕ್ತಪಡಿಸಿದೆ.
    ಬಾಂಗ್ಲಾದೇಶದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಧಾನಿ ಮತ್ತು ಅವಾಮಿ ಲೀಗ್ ಮುಖ್ಯಸ್ಥೆಯಾದ ಶೇಖ್ ಹಸೀನಾ ಗೆಲುವು ಸಾಧಿಸಿದ ಬೆನ್ನಲ್ಲೇ ಅಲ್ಲಿ ಚುನಾವಣೆ ದಿನದಂದು ನಡೆದ ಹಿಂಸಾಚಾರ ಮತ್ತು ಅಕ್ರಮಗಳ ವರದಿಗಳ ಬಗ್ಗೆ ಅಮೇರಿಕಾ ಕಳವಳ ವ್ಯಕ್ತಪಡಿಸಿವೆ.

    ಇದನ್ನೂ ಓದಿ: ಬರೋಬ್ಬರಿ 2.50 ಲಕ್ಷ ರೂ.ಗೆ ಏರಿಕೆಯಾಯ್ತು ಹುಂಜದ ಬೆಲೆ!
    ಚುನಾವಣೆಯ ಸಮಯ ಮತ್ತು ಅದರ ಹಿಂದಿನ ತಿಂಗಳು ನಡೆದ ಹಿಂಸಾಚಾರವನ್ನು ಅಮೇರಿಕಾ ಖಂಡಿಸುತ್ತದೆ. ಹಿಂಸಾಚಾರದ ವರದಿಗಳನ್ನು ವಿಶ್ವಾಸಾರ್ಹವಾಗಿ ತನಿಖೆ ಮಾಡಲು ಮತ್ತು ಅಪರಾಧಿಗಳನ್ನು ಹೊಣೆಗಾರರನ್ನಾಗಿ ಬಾಂಗ್ಲಾದೇಶ ಸರ್ಕಾರವನ್ನು ನಾವು ಪ್ರೋತ್ಸಾಹಿಸುತ್ತೇವೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

    ಬಾಂಗ್ಲಾದೇಶದಲ್ಲಿ ಚುನಾವಣಾ ದಿನದಂದು ಸಾವಿರಾರು ವಿರೋಧ ಪಕ್ಷಗಳ ಸದಸ್ಯರನ್ನು ಬಂಧಿಸಲಾಗಿದ್ದು, ಚುನಾವಣೆಯಲ್ಲಿ ಅಕ್ರಮಗಳ ಬಗ್ಗೆ ವರದಿಯಾಗಿದೆ. ಈ ಚುನಾವಣೆಗಳು ಮುಕ್ತ ಅಥವಾ ನ್ಯಾಯಯುತವಾಗಿಲ್ಲ ಎಂಬ ಅಭಿಪ್ರಾಯವನ್ನು ಯುನೈಟೆಡ್ ಸ್ಟೇಟ್ಸ್ ಇತರ ವೀಕ್ಷಕರೊಂದಿಗೆ ಹಂಚಿಕೊಳ್ಳುತ್ತದೆ. ದೇಶದ ಎಲ್ಲಾ ಪಕ್ಷಗಳು ಚುನಾವಣೆಯಲ್ಲಿ ಭಾಗವಹಿಸಲಿಲ್ಲ ಎಂದು ವಿಷಾದಿಸುತ್ತೇವೆ ಎಂದಿದ್ದಾರೆ.

    ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಧಾನಿ ಮತ್ತು ಅವಾಮಿ ಲೀಗ್ ಮುಖ್ಯಸ್ಥೆಯಾದ ಶೇಖ್ ಹಸೀನಾ ಗೆಲುವಿನ ನಗೆ ಬೀರಿದ್ದಾರೆ. 76 ವರ್ಷದ ಶೇಖ್ ಹಸೀನಾ 249,965 ಮತಗಳನ್ನು ಪಡೆದರೆ, ಅವರ ಹತ್ತಿರದ ಪ್ರತಿಸ್ಪರ್ಧಿ ಮತ್ತು ಬಾಂಗ್ಲಾದೇಶ ಸುಪ್ರೀಂ ಪಾರ್ಟಿಯ ಎಂ ನಿಜಾಮ್ ಉದ್ದೀನ್ ಲಷ್ಕರ್ ಕೇವಲ 469 ಮತಗಳನ್ನು ಮಾತ್ರ ಪಡೆದಿದ್ದಾರೆ.

    ಹಿಂಸಾಚಾರದ ವರದಿಗಳನ್ನು ವಿಶ್ವಾಸಾರ್ಹವಾಗಿ ತನಿಖೆ ಮಾಡಲು ಮತ್ತು ಅಪರಾಧಿಗಳನ್ನು ಹೊಣೆಗಾರರನ್ನಾಗಿ ಮಾಡಲು ಬಾಂಗ್ಲಾದೇಶ ಸರ್ಕಾರವನ್ನು ಬೆಂಬಲಿಸುತ್ತೇವೆ. ಹಿಂಸೆಯನ್ನು ತಿರಸ್ಕರಿಸುವಂತೆ ಎಲ್ಲಾ ರಾಜಕೀಯ ಪಕ್ಷಗಳನ್ನು ಒತ್ತಾಯಿಸುತ್ತೇವೆ ಎಂದು ಹೇಳಿದರು.

    ಬಾಂಗ್ಲಾದೇಶದ ಪ್ರಧಾನಿಯಾಗಿ 5ನೇ ಬಾರಿಗೆ ಆಯ್ಕೆಯಾದ ಶೇಖ್ ಹಸೀನಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದರು. ದೇಶದ ನಿರಂತರ ಪ್ರಗತಿ, ಶಾಂತಿ ಸಮೃದ್ಧಿಗೆ ಸರ್ಕಾರ ಶ್ರಮಿಸಲಿ. ಹೊಸ ಸರ್ಕಾರಕ್ಕೆ ನಮ್ಮ ಬೆಂಬಲ ಮುಂದುವರೆಯುತ್ತದೆ ಎಂದು ಪ್ರಧಾನಿ ಮೋದಿ ಪತ್ರದಲ್ಲಿ ಕೋರಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts