ಬಾಂಗ್ಲಾದಲ್ಲಿ ಹಿಂಸಾತ್ಮಕ ಪ್ರತಿಭಟನೆ; ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ

ಢಾಕಾ: ಕಳೆದ ತಿಂಗಳನಿಂದ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾತ್ಮಕವಾಗಿ ತೀವ್ರ ರೂಪ ಪಡೆದಕೊಂಡ ನಂತರ  ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿ, ಢಾಕಾವನ್ನು ತೊರೆದಿದ್ದಾರೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿವೆ. ಶೇಖ್ ಹಸೀನಾ ಮಿಲಿಟರಿ ಹೆಲಿಕಾಪ್ಟರ್‌ನಲ್ಲಿ ತನ್ನ ಕಿರಿಯ ಸಹೋದರಿ ಶೇಖ್ ರೆಹಾನಾ ಅವರೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಿಶೇಷ ಸೇನಾ ಹೆಲಿಕಾಪ್ಟರ್‌ನಲ್ಲಿ ಭಾರತಕ್ಕೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. 

ಇದನ್ನು ಓದಿ: ಬಾಂಗ್ಲಾದಲ್ಲಿ ಹಿಂಸಾತ್ಮಕ ಪ್ರತಿಭಟನೆ: ನಟಿ ಸೋನಮ್​ ಕಪೂರ್​​​ ಹೇಳಿದ್ದು ಹೀಗೆ​​​ 

ಲಕ್ಷಾಂತರ ಪ್ರತಿಭಟನಾಕಾರರು ಕರ್ಫ್ಯೂ ಅನ್ನು ಧಿಕ್ಕರಿಸಿ ಸೋಮವಾರ ರಾಜಧಾನಿಯ ಬೀದಿಗಳಲ್ಲಿ ಪ್ರತಿಭಟನೆ ನಡೆಸಿದ್ದಾರೆ. ನಂತರ ಢಾಕಾದಲ್ಲಿರುವ ಪ್ರಧಾನ ಮಂತ್ರಿ ಶೇಖ್ ಹಸೀನಾ ಅವರ ನಿವಾಸಕ್ಕೆ ಸಾವಿರಾರು ಬಾಂಗ್ಲಾದೇಶಿ ಪ್ರತಿಭಟನಾಕಾರರು ಮುತ್ತಿಗೆ ಹಾಕಿದ್ದಾರೆ. ಪ್ರಧಾನಿ ಅವರ ನಿವಾಸಕ್ಕೆ ಪ್ರತಿಭಟನೆಕಾರರು ಮುತ್ತಿಗೆ ಹಾಕುವ ಮತ್ತು ಸಂಭ್ರಮಾಚರಣೆ ಮಾಡುವ ದೃಶ್ಯಗಳನ್ನು ಸ್ಥಳಿಯ ಚಾನೆಲ್ ಪ್ರಸಾರ ಮಾಡಿದೆ.

ಪ್ರಧಾನಿ ಶೇಖ್ ಹಸೀನಾ ಅವರ ಪುತ್ರ ಸಜೀಬ್ ವಾಜೇದ್ ನಮ್ಮ ಜನರನ್ನು ಸುರಕ್ಷಿತವಾಗಿರಿಸುವುದು ಮತ್ತು ನಮ್ಮ ದೇಶವನ್ನು ಸುರಕ್ಷಿತವಾಗಿರಿಸುವುದು, ಸಂವಿಧಾನವನ್ನು ಕಾಪಾಡುವುದು ನಿಮ್ಮ ಕರ್ತವ್ಯವಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಮಾಡಿದ ಪೋಸ್ಟ್​ನಲ್ಲಿ ತಿಳಿಸಿದ್ದಾರೆ.

ಸರ್ಕಾರಿ ಉದ್ಯೋಗದಲ್ಲಿನ ಮೀಸಲಾತಿ ವ್ಯವಸ್ಥೆಯನ್ನು ರದ್ದುಗೊಳಿಸಬೇಕೆಂದು ವಿದ್ಯಾರ್ಥಿ ಗುಂಪುಗಳಿಂದ ಜುಲೈನಲ್ಲಿ ಪ್ರಾರಂಭವಾದ ಪ್ರತಿಭಟನೆ ಹಿಂಸಾತ್ಮಕ ರೂಪವನ್ನು ಪಡೆದುಕೊಂಡಿದೆ. ಪ್ರತಿಭಟನಾಕಾರರನ್ನು ಚದುರಿಸಲು ಭಾನುವಾರ ಪೊಲೀಸರು ಅಶ್ರುವಾಯು ಮತ್ತು ರಬ್ಬರ್ ಬುಲೆಟ್‌ಗಳನ್ನು ಬಳಸಿದರು. ಆ ಸಮಯದಲ್ಲಿ ಕನಿಷ್ಠ 91ಮಂದಿ ಮೃತಪಟ್ಟಿದ್ದಾರೆ ಮತ್ತು 100 ಜನರು ಗಾಯಗೊಂಡಿದ್ದಾರೆ. ಸರ್ಕಾರ ಭಾನುವಾರ ಸಂಜೆಯಿಂದ ರಾಷ್ಟ್ರವ್ಯಾಪಿ ಕರ್ಫ್ಯೂ ವಿಧಿಸಿತು. ಸೋಮವಾರದಿಂದ ಮೂರು ದಿನಗಳ ಸಾರ್ವತ್ರಿಕ ರಜೆಯನ್ನು ಘೋಷಿಸಿತು. ರೈಲು ಸೇವೆಗಳನ್ನು ಸ್ಥಗಿತಗೊಳಿಸಿತ್ತು. (ಏಜೆನ್ಸೀಸ್​​)

ಅಬಕಾರಿ ನೀತಿ ಪ್ರಕರಣ; ಬಂಧನ ಪ್ರಶ್ನಿಸಿ ಸಿಎಂ ಕೇಜ್ರಿವಾಲ್​​ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಕೋರ್ಟ್​​​​

Share This Article

ಮಧ್ಯಾಹ್ನ, ರಾತ್ರಿ ಊಟದಲ್ಲಿ ಜಾಸ್ತಿ ಉಪ್ಪು ಸೇವಿಸಿದ್ರೆ ಕ್ಯಾನ್ಸರ್‌ ಬರೋದು ಪಕ್ಕಾ! ಇರಲಿ ಎಚ್ಚರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…

ಮಕ್ಕಳಿಗೆ ಬಾಳೆಹಣ್ಣು ಕೊಡುವ ಮುನ್ನ ಈ ವಿಚಾರಗಳು ನಿಮಗೆ ಗೊತ್ತಿರಲಿ ಇಲ್ಲದಿದ್ರೆ ಆರೋಗ್ಯ ಕೆಡಬಹುದು ಎಚ್ಚರ!

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…

ತೂಕ ಕಳೆದುಕೊಂಡಿದ್ದೀರಾ? ಲಘುವಾಗಿ ಪರಿಗಣಿಸಬೇಡಿ, ನಿಮಗೆ ಈ ಆರೋಗ್ಯ ಸಮಸ್ಯೆಗಳಿರಬಹುದು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…