

ನವದೆಹಲಿ: ಹಿಂಸಾಚಾರ ಪೀಡಿತ ಬಾಂಗ್ಲಾದೇಶದಿಂದ ಗುಜರಾತ್ನ 14 ವೈದ್ಯಕೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಗಿದೆ ಎಂದು ಗುಜರಾತ್ ಸರ್ಕಾರ ಸೋಮವಾರ ತಿಳಿಸಿದೆ.
14 ವಿದ್ಯಾರ್ಥಿಗಳ ಪೈಕಿ 7 ಮಂದಿ ಭರೂಚ್ ನವರು, ಅಹಮದಾಬಾದ್ ಮತ್ತು ಭಾವನಗರದ ಇಬ್ಬರು, ಅಮ್ರೇಲಿ, ಮೆಹ್ಸಾನಾ ಮತ್ತು ಪಟಾನ್ ಜಿಲ್ಲೆಗಳಿಂದ ತಲಾ ಒಬ್ಬರು ವಿದ್ಯಾರ್ಥಿಗಳು ತವರಿಗೆ ಮರಳಿದ್ದಾರೆ. ಇನ್ನೂ ಬಾಂಗ್ಲಾದೇಶದಲ್ಲಿ ಮೆಹ್ಸಾನಾ ಮತ್ತು ಪಟನ್ ಜಿಲ್ಲೆಗಳಿಂದ ತಲಾ ಒಬ್ಬರು ವಿದ್ಯಾರ್ಥಿಗಳು ತವರಿಗೆ ಮರಳಿದ್ದಾರೆ. ಇನ್ನೂ ಬಾಂಗ್ಲಾದಲ್ಲಿ ಸಿಲುಕಿರುವ 11 ಮಂದಿ ವಿದ್ಯಾರ್ಥಿಗಳನ್ನು ಕರೆತರುವ ಪ್ರಯತ್ನ ನಡೆಯುತ್ತಿವೆ ರಾಜ್ಯ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಸರ್ಕಾರಿ ನೌಕರಿಗಳಲ್ಲಿ ಮೀಸಲಾತಿ ವಿರೋಧಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಯು ಬಾಂಗ್ಲಾದಲ್ಲಿ ಮೀಸಲಾತಿ ಹಿಂಸಾಚಾರ ರೂಪ ಪಡೆದುಕೊಂಡಿದೆ. ಬಾಂಗ್ಲಾದೇಶದಲ್ಲಿ ಸಿಲುಕಿಕೊಂಡಿದ್ದ ವಿದ್ಯಾರ್ಥಿಗಳ ಪೋಷಕರು ಆತಂಕದಲ್ಲಿದ್ದರು. ಹೀಗಾಗಿ ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಅವರು ರಾಜ್ಯ ಸರ್ಕಾರ ಸಂಸ್ಥೆ ಎನ್ಆರ್ಜಿ ಫೌಂಡೇಶನ್ಗೆ ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳನ್ನು ಪತ್ತೆ ಹಚ್ಚಲು ಸೂಚಿಸಿದ್ದಾರೆ ಎಂದು ಸರ್ಕಾರ ಹೇಳಿದೆ.
ಎನ್ಆರ್ಜಿ ಫೌಂಡೇಶನ್ ವಿದ್ಯಾರ್ಥಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಸಹಾಯವಾಣಿಅನ್ನು ಸ್ಥಾಪಿಸಿತ್ತು. ವೈದ್ಯಕೀಯ ವಿದ್ಯಾರ್ಥಿಗಳ ಪೋಷಕರ ಮಾಹಿತಿ ಆಧರಿಸಿ, ವಿದೇಶಾಂಗ ವ್ಯವಹಾರಗಳ ಸಚಿವಾಲಯದೊಂದಿಗೆ ಮಾತುಕತೆ ನಡೆಸಿ 14 ವಿದ್ಯಾರ್ಥಿಗಳು ಕರೆತರಲಾಗಿದ್ದು ಉಳಿದವರನ್ನು ತವರಿಗೆ ಕರೆತರುವ ಪ್ರಯತ್ನ ನಡೆಯುತ್ತಿದೆ ರಾಜ್ಯ ಸರ್ಕಾರ ತಿಳಿಸಿದೆ. ಬಾಂಗ್ಲಾದೇಶದಲ್ಲಿರುವ ಭಾರತೀಯರು ವಿದ್ಯಾರ್ಥಿಗಳಿಗೆ ಹೊರಗೆ ಹೋಗದಂತೆ ಮನೆಯೊಳಗೆ ಇರುವಂತೆ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಸಲಹೆ ನೀಡಿದೆ.
ಕಳೆದ ಕೆಲ ದಿನಗಳಿಂದ ಬಾಂಗ್ಲಾದೇಶ ಹೊತ್ತಿ ಉರಿಯಲು ಕಾರಣವಾದ ಉದ್ಯೋಗ ಕೋಟಾ ಮರುಜಾರಿ ಆದೇಶವನ್ನು ಉನ್ನತ ನ್ಯಾಯಾಲಯ ಹಿಂಪಡೆದಿದೆ. ಉದ್ಯೋಗ ಕೋಟಾ ಮರುಜಾರಿ ಆದೇಶವನ್ನು ಖಂಡಿಸಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ಸಂಘರ್ಷಕ್ಕೆ ಎಡೆ ಮಾಡಿತ್ತು. ಪೊಲೀಸರು ಮತ್ತು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ನಡುವೆ ರಾಷ್ಟ್ರವ್ಯಾಪಿ ನಡೆದ ಘರ್ಷಣೆಯಲ್ಲಿ 151ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.ಗಲಭೆಯನ್ನು ನಿಯಂತ್ರಿಸಲು ಪೊಲೀಸರಿಗೆ ಸಾಧ್ಯವಾಗದಿದ್ದಾಗ ಸೈನಿಕರು ಬಾಂಗ್ಲಾದೇಶದಾದ್ಯಂತ ನಗರಗಳಲ್ಲಿ ಗಸ್ತು ತಿರುಗುತ್ತಿದ್ದಾರೆ. ಗುರುವಾರದಿಂದ ರಾಷ್ಟ್ರವ್ಯಾಪಿ ಇಂಟರ್ನೆಟ್ ಬಂದ್ ಮಾಡಲಾಗಿದೆ. ಇತ್ತ ಭಾರತೀಯರು ಬಾಂಗ್ಲಾ ತೊರೆದು ಸ್ವದೇಶ ಮರಳುತ್ತಿದ್ದಾರೆ. ಇಷ್ಟೆಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಬಾಂಗ್ಲಾದೇಶ ಉನ್ನತ ಕೋರ್ಟ್ ತನ್ನ ಆದೇಶವನ್ನು ಹಿಂಪಡೆದಿದೆ.