

ಢಾಕಾ: ಎರಡನೇ ಏಕದಿನ ಪಂದ್ಯದಲ್ಲೂ ರೋಚಕ ಜಯ ಗಳಿಸುವ ಮೂಲಕ ಬಾಂಗ್ಲಾದೇಶ ತಂಡ ಸರಣಿ ಕೈವಶ ಮಾಡಿಕೊಂಡಿದೆ. ಈ ಮೂಲಕ ಸರಣಿಯಲ್ಲಿ 2-0 ಅಂತರ ಕಾಯ್ದುಕೊಂಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ 271 ರನ್ ಕಲೆ ಹಾಕಿತು.
272 ರನ್ಗಳ ಗುರಿ ಬೆನ್ನು ಹತ್ತಿದ ಟೀಂ ಇಂಡಿಯಾ ಆರಂಭಿಕ ಆಘಾತ ಅನುಭವಿಸಿತು. ಇನಿಂಗ್ಸ್ ಆರಂಭಿಸಿದ ಕೊಹ್ಲಿ ಕೇವಲ 5 ರನ್ಗಳಿಸಿ ಬೌಲ್ಡ್ ಆದರು. ಇದರ ಬೆನ್ನಲ್ಲೇ ಶಿಖರ್ ಧವನ್ 8 ರನ್ ಗಳಿಸಿ ಮುಸ್ತಫಿಜುರ್ ರೆಹಮಾನ್ ಎಸೆತದಲ್ಲಿ ಕ್ಯಾಚ್ ನೀಡಿ ವಿಕೆಟ್ ಒಪ್ಪಿಸಿದರು.
3ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್ 82 ರನ್ ಗಳಿಸಿ ತಂಡಕ್ಕೆ ನೆರವಾದರು. ಆದರೆ ಮತ್ತೊಂದೆಡೆ ವಾಷಿಂಗ್ಟನ್ ಸುಂದರ್ (11) ಕೆಎಲ್ ರಾಹುಲ್ (14) ಬೇಗನೆ ಇನ್ನಿಂಗ್ಸ್ ಆಧರಿಸುವಲ್ಲಿ ವಿಫಲರಾದರು. ಟೀಮ್ ಇಂಡಿಯಾಗೆ ಆಸರೆಯಾಗಿದ್ದ ಶ್ರೇಯಸ್ ಅಯ್ಯರ್-ಅಕ್ಷರ್ ಪಟೇಲ್ ಜೋಡಿ. 5ನೇ ವಿಕೆಟ್ಗೆ 107 ರನ್ಗಳ ಜೊತೆಯಾಟವಾಡಿತು. ಅಕ್ಷರ್ ಪಟೇಲ್ (56) ಅರ್ಧಶತಕ ಸಿಡಿಸಿ ಮಿಂಚಿದರು. ಬಳಿಕ ಬಂದ ಶಾರ್ದೂಲ್ ಠಾಕೂರ್ (7) ಹಾಗೂ ದೀಪಕ್ ಚಹರ್ (11) ಒಬ್ಬರ ಹಿಂದೆ ಒಬ್ಬರಂತೆ ವಿಕೆಟ್ ಒಪ್ಪಿಸಿದರು. 1
ಫೀಲ್ಡಿಂಗ್ ವೇಳೆ ಗಾಯಗೊಂಡಿದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೊನೆಯಲ್ಲಿ ಬ್ಯಾಟಿಂಗ್ಗೆ ಆಗಮಿಸಿದರು. ಇಬಾದತ್ ಹೊಸೇನ್ ಓವರ್ನಲ್ಲಿ 2 ಸಿಕ್ಸ್ ಹಾಗೂ 1 ಫೋರ್ನೊಂದಿಗೆ ಅಬ್ಬರಿಸಿದ ರೋಹಿತ್ ಶರ್ಮಾ ಟೀಮ್ ಇಂಡಿಯಾದ ಗೆಲುವನ್ನು ಜೀವಂತವಾಗಿರಿಸಿದರು. ಆದರೆ 48ನೇ ಓವರ್ನಲ್ಲಿ ಮುಸ್ತಫಿಜುರ್ ರೆಹಮಾನ್ ಮೇಡನ್ ಓವರ್ ಮಾಡಿದರು. ಬ್ಯಾಟಿಂಗ್ ಮಾಡುತ್ತಿದ್ದ ಬೌಲರ್ ಸಿರಾಜ್ ಪರದಾಡುವಂತಾಯಿತು.
50ನೇ ಓವರ್ನ ಕೊನೆಯ ಎಸೆತವನ್ನು ಯಾರ್ಕರ್ ಎಸೆಯುವ ಮೂಲಕ ಮುಸ್ತಫಿಜುರ್ ರೆಹಮಾನ್ ಬಾಂಗ್ಲಾದೇಶ್ ತಂಡಕ್ಕೆ 5 ರನ್ಗಳ ಜಯ ತಂದುಕೊಟ್ಟರು. ಕೊನೆಯಲ್ಲಿ ಬಂದು 28 ಎಸೆತಗಳಲ್ಲಿ 51 ರನ್ ಸಿಡಿಸಿದ ರೋಹಿತ್ ಶರ್ಮಾ ಹೋರಾಟದ ಫಲವಾಗಿಯೂ ಟೀಂ ಇಂಡಿಯಾ ಗೆಲುವು ಸಾಧಿಸುವಲ್ಲಿ ಎಡವಿತು.(ಏಜೆನ್ಸೀಸ್)