19 C
Bangalore
Sunday, December 15, 2019

ಮತ್ತೆ ಅಧಿಕಾರದತ್ತ ಹಸೀನಾ

Latest News

ಅಗ್ರಿಗೋಲ್ಡ್ ಹಣ ಸಮಸ್ಯೆ ಸರಿಪಡಿಸಿ

ರಬಕವಿ/ಬನಹಟ್ಟಿ: ಅಗ್ರಿಗೋಲ್ಡ್ ಸಂಸ್ಥೆಯಿಂದ ವಂಚನೆಗೊಳಗಾದ ರಾಜ್ಯದ ಗ್ರಾಹಕರ ಸಮಸ್ಯೆ ಪರಿಹರಿಸಲು ಸರ್ಕಾರ ಮಧ್ಯಸ್ಥಿಕೆ ವಹಿಸಬೇಕೆಂದು ಅಗ್ರಿಗೋಲ್ಡ್ ಕಂಪನಿಯಿಂದ ವಂಚಿತಗೊಂಡ ಗ್ರಾಹಕರು ಶನಿವಾರ ತೇರದಾಳ...

ಸ್ವಚ್ಛತೆಗೆ ಪೊರಕೆ ಹಿಡಿದ ಸೈನಿಕರು

ಬಾಗಲಕೋಟೆ: ಈ ಊರಲ್ಲಿ ಹೆಜ್ಜೆ ಇಟ್ಟಲ್ಲೆಲ್ಲ ಗಲೀಜು. ಚರಂಡಿ ವ್ಯವಸ್ಥೆ ಕೇಳಲೇ ಬೇಡಿ. ರಸ್ತೆ ಮಧ್ಯೆ ಹರಿಯುವ ಕೊಳಚೆ ನೀರು. ಕೊಳಚೆಯಲ್ಲಿ ಬಿದ್ದು...

ರಾಹುಲ್​ ಗಾಂಧಿಯನ್ನು ಉದ್ಧವ್​ ಠಾಕ್ರೆ ಸಾರ್ವಜನಿಕವಾಗಿ ಥಳಿಸಲಿ; ಸಾವರ್ಕರ್​ ಮೊಮ್ಮಗ ರಂಜಿತ್​ ಆಕ್ರೋಶ

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಸಾರ್ವಜನಿಕವಾಗಿ ರಾಹುಲ್ ​ಗಾಂಧಿಯನ್ನು ಥಳಿಸಬೇಕು ಎಂದು ಸಾವರ್ಕರ್​ ಅವರ ಮೊಮ್ಮಗ ರಂಜಿತ್​ ಸಾರ್ವಕರ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕ ಸಭೆಯಲ್ಲಿ ರಾಹುಲ್​...

ಡಿಎಆರ್ ತಂಡಕ್ಕೆ ಚಾಂಪಿಯನ್ ಪಟ್ಟ

ಬಾಗಲಕೋಟೆ: ಜಿಲ್ಲಾ ಪೊಲೀಸ್ ಇಲಾಖೆ ಹಮ್ಮಿಕೊಂಡಿದ್ದ ಪೊಲೀಸ್ ವಾರ್ಷಿಕ ಕ್ರೀಡಾಕೂಟದಲ್ಲಿ ಬಾಗಲಕೋಟೆ ಡಿಎಆರ್ ವಿಭಾಗದ ತಂಡ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿತು. ಪುರುಷರ ವಿಭಾಗದಲ್ಲಿ...

ಟೋಲ್ ಪ್ಲಾಜಾ ಬಂದ್‌ಗೆ ಒತ್ತಾಯಿಸಿ ಪ್ರತಿಭಟನೆ

ಮೈಸೂರು: ಮೈಸೂರು-ಊಟಿ ಹೆದ್ದಾರಿಯಲ್ಲಿರುವ ಟೋಲ್ ಪ್ಲಾಜಾವನ್ನು ಬಂದ್ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ...

ಢಾಕಾ: ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಭಾನುವಾರ ಮತದಾನ ನಡೆದಿದ್ದು, ಹಾಲಿ ಪ್ರಧಾನಿ ಶೇಖ್ ಹಸೀನಾ ಬೃಹತ್ ಮುನ್ನಡೆ ಸಾಧಿಸಿದ್ದಾರೆ. ಅವರ ಪಕ್ಷ ಕೂಡ ಮುನ್ನಡೆ ಕಾಯ್ದುಕೊಂಡಿರುವ ಕಾರಣ ಶೇಖ್ ಹಸೀನಾ ನಾಲ್ಕನೇ ಬಾರಿಗೆ ಬಾಂಗ್ಲಾ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸುವುದು ಬಹುತೇಕ ಖಚಿತವಾಗಿದೆ.

ಬೆಳಗ್ಗೆ ಮತದಾನ ಆರಂಭವಾಗುತ್ತಿದ್ದಂತೆ ಹಲವೆಡೆ ಭಾರಿ ಪ್ರಮಾಣದ ಹಿಂಸಾಚಾರ ನಡೆದಿದೆ. ವಿವಿಧ ಪ್ರಕರಣಗಳಲ್ಲಿ ಒಟ್ಟೂ 17 ಜನರು ಮೃತಪಟ್ಟಿದ್ದಾರೆ. ನೂರಾರು ಜನರು ಗಾಯಗೊಂಡಿದ್ದಾರೆ. ಮತದಾನದ ವೇಳೆ ತಮ್ಮ ಕಾರ್ಯಕರ್ತರು ಮತ್ತು ಅಭ್ಯರ್ಥಿಗಳನ್ನು ಗುರಿಯಾಗಿಸಿಕೊಂಡು ಆಡಳಿತಾರೂಢ ಅವಾಮಿ ಲೀಗ್​ನ ಕಾರ್ಯಕರ್ತರು ದಾಳಿ ನಡೆಸಿದರು.

ಮತಗಟ್ಟೆಗಳನ್ನು ವಶಪಡಿಸಿ ಕೊಂಡು ಭಾರಿ ಅಕ್ರಮ ಎಸಗಿದ್ದಾಗಿ ಪ್ರತಿಪಕ್ಷ ಬಾಂಗ್ಲಾದೇಶ ನ್ಯಾಷನ ಲಿಸ್ಟ್ ಪಾರ್ಟಿ (ಬಿಎನ್​ಪಿ) ಆರೋಪಿಸಿದೆ. ಈ ಹಿನ್ನೆಲೆಯಲ್ಲಿ ಬಿಎನ್​ಪಿ ನೇತೃತ್ವದ ಮೈತ್ರಿಕೂಟ ಮತದಾನ ಪ್ರಕ್ರಿಯೆ ಬಹಿಷ್ಕರಿಸುವುದಾಗಿ ಘೋಷಿಸಿತ್ತು. ಮರುಚುನಾವಣೆಗೂ ಆಗ್ರಹಿಸಿದೆ. ಭಾನುವಾರ ಬೆಳಗ್ಗೆ 8 ಗಂಟೆಗೆ ಆರಂಭವಾದ ಮತದಾನ ಸಂಜೆ 4 ಗಂಟೆಗೆ ಮುಕ್ತಾಯವಾಯಿತು. ಢಾಕಾ ಕೇಂದ್ರಕ್ಕೆ ಆಗಮಿಸಿದ ಪ್ರಧಾನಿ ಶೇಖ್ ಹಸೀನಾ ಹಕ್ಕು ಚಲಾಯಿಸಿದರು. ಈ ಕ್ಷೇತ್ರದಲ್ಲಿ ಹಸೀನಾ ಅವರ ಸಹೋದರ ಸಂಬಂಧಿ ಫಜ್ಲೆ ನೂರ್ ತಪೋಶ್ ಅವಾಮಿ ಲೀಗ್​ನಿಂದ ಕಣಕ್ಕಿಳಿದಿದ್ದಾರೆ. ಚುನಾವಣೆ ಸಂಬಂಧಿತ ಗಲಭೆಗಳಲ್ಲಿ ಅವಾಮಿ ಲೀಗ್ ಕಾರ್ಯಕರ್ತರೇ ಹೆಚ್ಚಿನ ಸಂಖ್ಯೆಯಲ್ಲಿ ಮೃತಪಟ್ಟಿದ್ದಾರೆ. ಚತ್ತೋಗ್ರಾಮ್ಲ್ಲಿ ಬಿಎನ್​ಪಿ ಕಾರ್ಯಕರ್ತನನ್ನು ಅವಾಮಿ ಲೀಗ್ ಕಾರ್ಯಕರ್ತರು ಹತ್ಯೆ ಮಾಡಿದ್ದಾರೆ.

ಚುನಾವಣೆ ಬಹಿಷ್ಕಾರ

ಬಿಎನ್​ಪಿಯ 6 ಅಭ್ಯರ್ಥಿಗಳು ಸೇರಿ ಒಟ್ಟು 7 ಅಭ್ಯರ್ಥಿಗಳು ಚುನಾವಣೆ ಪ್ರಕ್ರಿಯೆಯನ್ನು ಬಹಿಷ್ಕರಿಸುವುದಾಗಿ ಘೋಷಿಸಿದರು. ಮತಗಟ್ಟೆಗಳನ್ನು ವಶಪಡಿಸಿಕೊಂಡಿರುವ ಅವಾಮಿ ಲೀಗ್ ಕಾರ್ಯಕರ್ತರು ಭಾರಿ ಅಕ್ರಮ ಎಸಗುತ್ತಿರುವುದಾಗಿ ಆರೋಪಿಸಿ ದರು. ಇದೇ ಕಾರಣ ನೀಡಿ ಬಿಎನ್​ಪಿ ಮತ್ತು ಮೈತ್ರಿಕೂಟದ ಎಲ್ಲ 13 ಪಕ್ಷಗಳು ಕೂಡ ಚುನಾವಣೆಯನ್ನು ಬಹಿಷ್ಕರಿಸಿರುವುದಾಗಿ ಹೇಳಿದೆ.

ಹಸೀನಾಗೆ ಭಾರಿ ಗೆಲುವು

ಸಂಜೆ 4 ಗಂಟೆಗೆ ಮತದಾನ ಮುಕ್ತಾಯವಾದ ಬಳಿಕ ಮತ ಎಣಿಕೆ ಕಾರ್ಯ ಆರಂಭವಾಯಿತು. ಗಾಯ್ಬಂಧನಾ-5 ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಪ್ರಧಾನಿ ಶೇಖ್ ಹಸೀನಾ ಒಟ್ಟು 2,29,539 ಮತಗಳನ್ನು ಗಳಿಸಿ ಗೆದ್ದಿರುವುದಾಗಿ ಚುನಾವಣಾಧಿಕಾರಿಗಳು ಘೋಷಿಸಿದರು. ಇವರ ವಿರುದ್ಧ ಸ್ಪರ್ಧಿಸಿದ್ದ ಬಿಎನ್​ಪಿಯ ಎಸ್.ಎಂ. ಜಿಲಾನಿ ಅವರಿಗೆ ಕೇವಲ 123 ಮತ ಲಭಿಸಿದೆ.

ಮೊದಲ ಬಾರಿಗೆ ಇವಿಎಂ ಬಳಕೆ

ಬಾಂಗ್ಲಾದೇಶದ ಚುನಾವಣೆಯ ಮತದಾನ ಪ್ರಕ್ರಿಯೆಯಲ್ಲಿ ಇದೇ ಮೊದಲ ಬಾರಿಗೆ ವಿದ್ಯುನ್ಮಾನ ಮತಯಂತ್ರಗಳನ್ನು ಬಳಸಲಾಗಿತ್ತು. ಕೆಲವು ಕಡೆ ತಾಂತ್ರಿಕ ದೋಷ ಕಂಡುಬಂದಿದ್ದರಿಂದ ಮತದಾರರು ಅಸಮಾಧಾನ ವ್ಯಕ್ತಪಡಿಸಿದರು. ಢಾಕಾ, ಚಿತ್ತಗಾಂಗ್, ರಂಗ್​ಪುರ್, ಖುಲ್ನಾ, ಸಾತ್ಕರ ಮತಕ್ಷೇತ್ರಗಳಲ್ಲಿ ಇವಿಎಂ ಬಳಕೆಯಾಯಿತು. ಒಟ್ಟು 21,24,554 ಮತದಾರರು ಇವಿಎಂ ಮೂಲಕ ತಮ್ಮ ಹಕ್ಕು ಚಲಾಯಿಸಿದರು.

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...