More

    ಮೀಸಲಾತಿ ವಿರೋಧಿಸಿ ಭುಗಿಲೆದ್ದ ಹೋರಾಟ– ಬಿಎಸ್​ವೈ ನಿವಾಸದ ಮೇಲೆ ಕಲ್ಲು ತೂರಾಟ

    ಶಿವಮೊಗ್ಗ: ಕಳೆದ ಎರಡು ದಿನಗಳ ಹಿಂದೆ ರಾಜ್ಯ ಸರ್ಕಾರ ಮೀಸಲಾತಿ ಪ್ರಕಟ ಮಾಡಿದೆ. ರಾಜ್ಯ ಸರ್ಕಾರದ ಈ ಕ್ರಮವನ್ನು ವಿರೋಧಿಸಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಬಂಜಾರ ಸಮುದಾಯದವರು ಪ್ರತಿಭಟನೆ ನಡೆಸಿದ್ದಾರೆ.

    ನಗರದ ಮಾಳರಕೇರಿ ಬಡಾವಣೆಯಲ್ಲಿನ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ನಿವಾಸದ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ. ಯಡಿಯೂರಪ್ಪ ಜನ್ಮ ದಿನದ ಅಂಗವಾಗಿ ಶಿಕಾರಿಪುರ ತಾಲೂಕಿನಾದ್ಯಂತ ಸೀರೆ ವಿತರಣೆ ಮಾಡಲಾಗಿತ್ತು. ಇಂದು ಆ ಸೀರೆಗಳನ್ನು ಪ್ರತಿಭಟನೆಗೆ ತೆಗೆದುಕೊಂಡು ಬಂದಿದ್ದ ಪ್ರತಿಭಟನಕಾರರು ಸೀರೆಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಇದನ್ನೂ ಓದಿರಸ್ತೆ ಮಾಲಿನ್ಯದಿಂದಾಗಿ ರಕ್ತದೊತ್ತಡ ಹೆಚ್ಚುವ ಸಾಧ್ಯತೆ ಇದೆ!

    ಸದಾಶಿವ ಆಯೋಗದ ವರದಿಯಿಂದ ಬಂಜಾರ ಸಮುದಾಯಕ್ಕೆ ಅನ್ಯಾಯವಾಗಲಿದೆ. ಕಳೆದ ಎರಡು ದಿನಗಳ ಹಿಂದೆ ರಾಜ್ಯ ಸರ್ಕಾರ ಮೀಸಲಾತಿ ಪ್ರಕಟ ಮಾಡಿದೆ. ಹೀಗಾಗಿ ಈ ವರದಿ ಜಾರಿಗೊಳಿಸದಂತೆ ಆಗ್ರಹಿಸಿದ್ದಾರೆ. ಪ್ರತಿಭಟನಕಾರರು‌ ಶಿಕಾರಿಪುರದ ಮಾಳೇರ ಕೇರಿಯಲ್ಲಿರುವ ಯಡಿಯೂರಪ್ಪ ಮನೆಗೆ ಕಲ್ಲು ತೂರಿ ಪ್ರತಿಭಟಿಸುತ್ತಿದ್ದಾರೆ. ಕಲ್ಲು ತೂರಾಟದಿಂದಾಗಿ ಯಡಿಯೂರಪ್ಪ ಮನೆಯ ಗಾಜುಗಳು ಪುಡಿಪುಡಿಯಾಗಿದೆ ಎನ್ನಲಾಗಿದೆ.

    ಇದನ್ನೂ ಓದಿಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್​​ನತ್ತ ಮುಖ ಮಾಡಿದ ಗುಬ್ಬಿ ಶ್ರೀನಿವಾಸ್‌
    ಬಂಜಾರ, ಲಂಬಾಣಿ, ಬೋವಿ, ಕೊರಮ ಕೊರಚ ಸಮುದಾಯದವರ ಪ್ರತಿಭಟನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಆದರೂ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ ಪರಿಣಾಮ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಶಿಕಾರಿಪುರ ಪಟ್ಟಣದಾದ್ಯಂತ ಸೆಕ್ಷನ್ 144 ಜಾರಿ ಮಾಡಲಾಗಿದೆ.

    ಗಂಡು ಮಗು ಆಗಿಲ್ಲವೆಂದು ಪತ್ನಿ ಮೇಲೆ ಹಲ್ಲೆ; ತಲೆ ಮರೆಸಿಕೊಂಡ ಪತಿ, ಮಾವ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts