ಬಂಜಾರು ಕಾಲನಿ ಪ್ರಕರಣ ವಾಪಸ್ : ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಮನವಿ

New Project (22)
Published on

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಶತಮಾನಗಳಿಂದ ವಾಸಿಸುತ್ತಿರುವ ಆದಿವಾಸಿ ಮಲೆಕುಡಿಯ ಸಮುದಾಯಕ್ಕೆ ವಿದ್ಯುತ್, ರಸ್ತೆ ಸೇರಿದಂತೆ ಮೂಲಸೌಕರ್ಯಗಳನ್ನು ಒದಗಿಸಬೇಕು. ಮಲೆಕುಡಿಯ, ಕೊರಗ, ಮರಾಠಿ ನಾಯ್ಕ ಕಾಲನಿಗಳಿಗೆ ಮೂಲಸೌಕರ್ಯ ಮತ್ತು ಬಂಜಾರು ಮಲೆಕುಡಿಯ ಕಾಲನಿಯ ಜಮೀನು ಮೇಲೆ ರಾಜ್ಯ ಸರ್ಕಾರ ಹಾಕಿರುವ ಪ್ರಕರಣ ವಾಪಸ್ ಪಡೆಯಲು ರಾಜ್ಯ ಸರ್ಕಾರದ ಗಮನ ಸೆಳೆಯಬೇಕು ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರಿಗೆ ಬೆಳ್ತಂಗಡಿಯಲ್ಲಿ ಮನವಿ ಸಲ್ಲಿಸಲಾಯಿತು.

ಆದಿವಾಸಿಗಳ ಸಮಸ್ಯೆಗಳ ಬಗ್ಗೆ ಮುಂದಿನ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆಯಲಾಗುವುದು. ಒಂದು ಹಂತದ ಸಭೆ ನಡೆಸಿದ್ದು, ಆದಿವಾಸಿಗಳ ಸರ್ವಾಂಗೀಣ ಅಭಿವೃದ್ಧಿಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಬಗ್ಗೆ ನಿರಂತರವಾಗಿ ಸರ್ಕಾರದ ಗಮನ ಸೆಳೆಯುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಭರವಸೆ ನೀಡಿದರು.

ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕ ಶೇಖರ್ ಲಾಯಿಲ, ಪ್ರಧಾನ ಕಾರ್ಯದರ್ಶಿ ಜಯಾನಂದ ಪಿಲಿಕಲ, ಉಪಾಧ್ಯಕ್ಷೆ ಪುಷ್ಪ ಕಾಟಾಜೆ ನೆರಿಯ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಯುವ ಕಾಂಗ್ರೆಸ್ ಮುಖಂಡರಾದ ಪ್ರವೀಣ್ ಫರ್ನಾಂಡೀಸ್ ಹಳ್ಳಿಮನೆ, ನವೀನ್ ಗೌಡ ಸವಣಾಲು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net