More

    ಬ್ಯಾಂಕ್​ನಲ್ಲಿ 2.69 ಕೋಟಿ ರೂ. ಲಪಟಾಯಿಸಿದ್ದ ಅಸಿಸ್ಟೆಂಟ್​ ಮ್ಯಾನೇಜರ್​; ತಲೆಮರೆಸಿಕೊಂಡಿದ್ದವ ಕೊನೆಗೂ ಸಿಕ್ಕಿಬಿದ್ದ..

    ಉತ್ತರಕನ್ನಡ: ಬ್ಯಾಂಕ್​ನಲ್ಲಿ ಕೋಟ್ಯಂತರ ರೂಪಾಯಿಯನ್ನು ಲಪಟಾಯಿಸಿ ತಲೆಮರೆಸಿಕೊಂಡಿದ್ದ ಅಸಿಸ್ಟೆಂಟ್ ಮ್ಯಾನೇಜರ್ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ಆರೋಪಿಯನ್ನು ಪೊಲೀಸರು ಹುಬ್ಬಳ್ಳಿಯಲ್ಲಿ ಬಂಧಿಸಿದ್ದಾರೆ.

    ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ ಬ್ಯಾಂಕ್ ಆಫ್ ಬರೋಡ ಶಾಖೆಯಲ್ಲಿ ಈ ಪ್ರಕರಣ ನಡೆದಿತ್ತು. ಅಸಿಸ್ಟೆಂಟ್ ಮ್ಯಾನೇಜರ್ ಆಗಿದ್ದ ಕುಮಾರ್ ಬೋನಾಲ್ ಎಂಬಾತ ಬ್ಯಾಂಕ್​ನಿಂದಲೇ 2.69 ಕೋಟಿ ರೂ. ಲಪಟಾಯಿಸಿದ್ದ.

    ಆಂಧ್ರಪ್ರದೇಶ ಮೂಲದ ಈತ ಇನ್ನೊಬ್ಬ ಉದ್ಯೋಗಿಯ ಲಾಗಿನ್​ ದುರ್ಬಳಕೆ ಮಾಡಿಕೊಂಡು 2.69 ಕೋಟಿ ರೂ. ಲಪಟಾಯಿಸಿದ್ದ. ಈ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಹುಬ್ಬಳ್ಳಿಯಲ್ಲಿ ಪತ್ತೆ ಹಚ್ಚಿ ಬಂಧಿಸಿದ್ದಾರೆ.

    ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಕುಮಾರ್ ಬೋನಾಲ್, ತಾನು ಲಪಟಾಯಿಸಿದ್ದ ಹಣವನ್ನು ಆನ್​ಲೈನ್ ಗೇಮ್​​ನಲ್ಲಿ ಕಳೆದುಕೊಂಡಿರುವುದಾಗಿ ಪ್ರಾಥಮಿಕ ತನಿಖೆ ವೇಳೆ ತಿಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    ರಾಜ್ಯಾದ್ಯಂತ ಮಕ್ಕಳ ಕಳ್ಳರು?; ಜನರ ಕೈಗೆ ಸಿಕ್ಕಿಹಾಕಿಕೊಂಡ ಇಬ್ಬರ ಪೈಕಿ ಒಬ್ಬನ ಜೇಬಲ್ಲಿದ್ದವು ಮಕ್ಕಳ ಫೋಟೋಗಳು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts