1.5 ಕೋಟಿ ರೂ. ದುರ್ಬಳಕೆ ಮಾಡಿಕೊಂಡು ಪರಾರಿಯಾದ ಬ್ಯಾಂಕ್​ ಮ್ಯಾನೇಜರ್​!

Crime
Published on

ಉತ್ತರಕನ್ನಡ: ರಾಷ್ಟ್ರೀಕೃತ ಬ್ಯಾಂಕ್​ವೊಂದರ ಮ್ಯಾನೇಜರ್​ ಒಂದೂವರೆ ಕೋಟಿ ರೂಪಾಯಿ ದುರ್ಬಳಕೆ ಮಾಡಿಕೊಂಡಿದ್ದಲ್ಲದೆ, ಪರಾರಿಯಾಗಿ ತಲೆಮರೆಸಿಕೊಂಡಿರುವ ಪ್ರಕರಣವೊಂದು ವರದಿಯಾಗಿದೆ.

ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಈ ಮಹಾಮೋಸ ನಡೆದಿದ್ದು, ಬ್ಯಾಂಕ್ ಮ್ಯಾನೇಜರ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ಭಟ್ಕಳದ ಬಜಾರ್​ನಲ್ಲಿನ ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದ ಶಾಖೆಯ ಮ್ಯಾನೇಜರ್ ಅನೂಪ್​ ಪೈ ಆರೋಪಿ.

ಮೂಲತಃ ಮಂಗಳೂರಿನ ಬೋಳಪು ಗುಡ್ಡೆ ಕಾವೂರು ನಿವಾಸಿಯಾಗಿರುವ ಅನೂಪ್​ ಪೈ, ಬ್ಯಾಂಕ್​ನ ಸಿಸ್ಟಮ್ ಸಸ್ಪೆನ್ಸ್ ಖಾತೆಗೆ ಖರ್ಚು ಹಾಕಿ ಹಣ ದುರ್ಬಳಕೆ ಮಾಡಿಕೊಂಡಿರುವ ಆರೋಪ ಎದುರಿಸುತ್ತಿದ್ದಾರೆ.

ದೂರಿನ ಮೇರೆಗೆ ಭಟ್ಕಳ ನಗರ ಠಾಣೆಯ ಪೊಲೀಸರು ಅನೂಪ್​ ವಾಸವಿದ್ದ ಭಟ್ಕಳ ರೈಲ್ವೆ ಸ್ಟೇಷನ್ ರಸ್ತೆ ಸಮೀಪದ ಬಾಡಿಗೆ ಮನೆಗೆ ಭೇಟಿ ನೀಡಿದ್ದು, ಈ ವೇಳೆ ಅನೂಪ್​ ಪರಾರಿಯಾಗಿ ತಲೆಮರೆಸಿಕೊಂಡಿರುವುದು ಗಮನಕ್ಕೆ ಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net