More

    ಶ್ರಮಪಟ್ಟರೆ ಗುರಿ ಮುಟ್ಟಲು ಸಾಧ್ಯ- ಗಾಂಧಿ ನಗರ ಶಾಲೆಯಲ್ಲಿ ನವೀಕೃತ ಕಂಪ್ಯೂಟರ್ ಲ್ಯಾಬ್ ಉದ್ಘಾಟಿಸಿ ಬ್ಯಾಂಕ್ ಆಫ್ ಬರೋಡ ಮಹಾ ಪ್ರಬಂಧಕಿ ಗಾಯತ್ರಿ ಆರ್

    ಮಂಗಳೂರು: ವಿದ್ಯಾರ್ಥಿಗಳು ಬ್ಯಾಂಕಿನ ಸೌಲಭ್ಯವನ್ನು ಪಡೆದು ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಹಾಗೂ ನಾಯಕರಾಗಿ ಬೆಳೆಯಲು ಸಾಧ್ಯ. ವಿದ್ಯಾರ್ಥಿಗಳು ಶ್ರಮಪಟ್ಟರೆ ತಮ್ಮ ಜೀವನದ ಗುರಿ ಮುಟ್ಟಲು ಸಾಧ್ಯವಾಗುತ್ತದೆ ಎಂದು ಬ್ಯಾಂಕ್ ಆಫ್ ಬರೋಡ ಮಹಾ ಪ್ರಬಂಧಕಿ ಗಾಯತ್ರಿ ಆರ್ ಕರೆನೀಡಿದ್ದಾರೆ

    ಗಾಂಧಿನಗರದ ದ.ಕ ಜಿ.ಪಂ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನವೀಕೃತ ಕಂಪ್ಯೂಟರ್ ಲ್ಯಾಬ್ ನ ಕೊಠಡಿಯನ್ನು ಉದ್ಘಾಟಿಸಿ ಮಾತನಾಡಿದರು.

    ಬ್ಯಾಂಕ್ ಆಫ್ ಬರೋಡಾ ಶಿಕ್ಷಣ, ಸಾಮಾಜಿಕ ಚಟುವಟಿಕೆಗಳಿಗೆ ತನ್ನದೇ ಆದ ಕೊಡುಗೆ ನೀಡುತ್ತಾ ಬಂದಿದೆ. ಗಾಂಧಿನಗರ ಶಾಲೆಯ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಲ್ಯಾಬ್ ನಿರ್ಮಾಣದ ಅಗತ್ಯವಿದೆ ಎನ್ನುವ ಬಗ್ಗೆ ನನ್ನ ಗಮನಕ್ಕೆ ಬಂದಾಗ ಬ್ಯಾಂಕ್ ನ ಸಿಎಸ್‌ಆರ್ ನಿಧಿಯಿಂದ ನೆರವು ನೀಡಲಾಗಿದೆ. ವಿದ್ಯಾರ್ಥಿಗಳ ಕಂಪ್ಯೂಟರ್ ಕಲಿಕೆಗೆ ಈ ಲ್ಯಾಬ್ ಪೂರಕವಾಗುತ್ತದೆ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಈ ಲ್ಯಾಬ್ ಸದುಪಯೋಗ ವಾಗಲಿ ಎಂದರು.

    ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪಾಲಿಕೆ ಸದಸ್ಯೆ ಸಂಧ್ಯಾಆಚಾರ್, ನಾವು ಮಾಡುವ ಯಾವುದೇ ಕೆಲಸವೂ ಪರರಿಗೆ ಇಷ್ಟವಾಗಿ ಅವರಿಗೆ ಖುಷಿಯನ್ನು ತಂದುಕೊಟ್ಟರೆ ಅದುವೇ ನಮ್ಮ ಜೀವನದ ನಿಜವಾದ ಸಾರ್ಥಕ್ಯ. ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣವೆಂಬುವುದು ಬಹುಮುಖ್ಯ ಘಟ್ಟ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಗಳು ಶಿಕ್ಷಣವನ್ನು ಕಡ್ಡಾಯವಾಗಿ ಪಡೆಯಲೇಬೇಕು. ಅಂತೆಯೇ ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸಬೇಕು ಎಂದರು.

    .ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಬ್ಯಾಂಕ್ ಆಫ್ ಬರೋಡದ ಕ್ಷೇತ್ರಿಯ ಪ್ರಬಂಧಕರಾದ ಸಂಜಯ್ ವಾಲಿ, ಎಸ್.ಸಿ.ಡಿ.ಎಂ.ಸಿ ಅಧ್ಯಕ್ಷ ಮನೋಜ್ ಕುಮಾರ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ದೀಪಕ್ ಸುವರ್ಣ, ಶಿಕ್ಷಣ ಇಲಾಖೆಯ ಸಮನ್ವಯಾಧಿಕಾರಿ ಉಸ್ಮಾನ್, ಬ್ಯಾಂಕ್ ಆಫ್ ಬರೋಡದ ಪ್ರಬಂಧಕ ಪಿ.ಎಸ್.ಪಾಟ್ಕರ್, ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ಮೊದಲಾವರು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಯಶೋದ ಬಿ ಸ್ವಾಗತಿಸಿದರು, ಶಿಕ್ಷಕಿ ಇಂದುಮತಿ ವಂದಿಸಿದರು. ದೈಹಿಕ ಶಿಕ್ಷಕ ಸುರೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

    ———————-

    ಬ್ಯಾಂಕ್ ಆಫ್ ಬರೋಡಾ ಶಿಕ್ಷಣ, ಸಾಮಾಜಿಕ ಚಟುವಟಿಕೆಗಳಿಗೆ ತನ್ನದೇ ಆದ ಕೊಡುಗೆ ನೀಡುತ್ತಾ ಬರುತ್ತಿದ್ದು, ಶಿಕ್ಷಣ ಕ್ಷೇತ್ರಕ್ಕೆ ಅನೇಕ ಕೊಡುಗೆ ನೀಡುತ್ತಿದೆ. ವಿದ್ಯಾರ್ಥಿಗಳು ತಮ್ಮಲ್ಲಿ ಅಡಗಿರುವ ಪ್ರತಿಭೆಗಳಿಗೆ ಸೂಕ್ತವಾದ ವೇದಿಕೆಯನ್ನು ಕಲ್ಪಿಸಿಕೊಳ್ಳಬೇಕು. ವಿದ್ಯಾರ್ಥಿ ಜೀವನದಲ್ಲಿಯೇ ತಮ್ಮ ಆಸಕ್ತಿಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದರೆ ಮುಂದಿನ ಜೀವನ ಸುಲಭ.

    ಗಾಯತ್ರಿ ಆರ್, ಬ್ಯಾಂಕ್ ಆಫ್ ಬರೋಡ ಮಹಾ ಪ್ರಬಂಧಕಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts