23.2 C
Bangalore
Saturday, December 14, 2019

ಬ್ಯಾಂಕ್ ವಿಲೀನ

Latest News

ಫೆಬ್ರವರಿ 1 ರಂದು ಕೇಂದ್ರ ಬಜೆಟ್​, ಜನವರಿ 31 ರಂದು ಆರ್ಥಿಕ ಸಮೀಕ್ಷೆ ಮಂಡಣೆ ಸಾಧ್ಯತೆ

ನವದೆಹಲಿ: ಹಣಕಾಸು ಸಚಿವಾಲಯದ ಮೂಲಗಳ ಪ್ರಕಾರ 2020-21 ಸಾಲಿನ ಕೇಂದ್ರ ಮುಂಗಡ ಪತ್ರ ಫೆಬ್ರವರಿ 1 ರಂದು ಮಂಡಣೆಯಾಗುವ ಸಾಧ್ಯತೆಯಿದೆ. ಅಂತೆಯೇ ಆರ್ಥಿಕ...

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಯಾದಗಿರಿ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಯನ್ನು ಕೊಡಿಸುವುದು ಪೋಷಕರ ಕರ್ತವ್ಯ ಕೂಡ ಆಗಿದೆ ಎಂದು ಕಿರಿಯ...

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ...

16 ಯುವಕರ ಮೇಲೆ ಪ್ರಕರಣ ದಾಖಲು

ಬಾದಾಮಿ: ದ್ವಿಚಕ್ರ ವಾಹನಕ್ಕೆ ಹಾದು ಹೋಗಲು ಅವಕಾಶ ನೀಡಲಿಲ್ಲ ಎಂಬ ಕ್ಷುಲಕ ಕಾರಣಕ್ಕೆ ಇಬ್ಬರು ಯುವಕರ ಮಧ್ಯೆ ಆರಂಭವಾದ ಜಗಳ ಶನಿವಾರ ವಿಕೋಪಕ್ಕೆ...

ಮೆಟ್ರೋಗೆ ಹಾರಿ ಗಂಡ ಮೃತಪಟ್ಟ ಒಂದು ಗಂಟೆಯಲ್ಲೇ ಮನೆಯಲ್ಲಿ ನೇಣು ಬಿಗಿದುಕೊಂಡ ಹೆಂಡತಿ, ಮಗಳು!

ನವದೆಹಲಿ: ಗಂಡ ಮೆಟ್ರೋಗೆ ಹಾರಿ ಮೃತಪಟ್ಟ ಗಂಟೆಯೊಳಗೆ ಮನೆಯಲ್ಲಿ ಹೆಂಡತಿ ಮತ್ತು ಮಗಳು ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ. ದೆಹಲಿಯ ಜವಹರ ಲಾಲ್​ ನೆಹರು ಮೆಟ್ರೋ ನಿಲ್ದಾಣದಲ್ಲಿ ಬೆಳಗ್ಗೆ...

ನವದೆಹಲಿ: ಕರ್ನಾಟಕ ಮೂಲದ ವಿಜಯಾ ಬ್ಯಾಂಕ್, ಮಹಾರಾಷ್ಟ್ರದ ದೇನಾ ಬ್ಯಾಂಕ್ ಮತ್ತು ಗುಜರಾತ್ ಮೂಲದ ಬ್ಯಾಂಕ್ ಆಫ್ ಬರೋಡಾ (ಬಿಒಬಿ)ಗಳನ್ನು ವಿಲೀನಗೊಳಿಸುವುದಾಗಿ ಕೇಂದ್ರ ಸರ್ಕಾರ ಸೋಮವಾರ ಅಧಿಕೃತವಾಗಿ ಘೋಷಿಸಿದೆ. ಈ ಮೂರೂ ಬ್ಯಾಂಕ್​ಗಳ ವಿಲೀನದ ನಂತರ ದೇಶದ ಮೂರನೇ ಅತಿ ದೊಡ್ಡ ಬ್ಯಾಂಕ್ ಎಂಬ ಶ್ರೇಯಕ್ಕೆ ಪಾತ್ರವಾಗಲಿದೆ. ಮೂರೂ ಬ್ಯಾಂಕ್​ಗಳ ಒಟ್ಟಾರೆ ವಹಿವಾಟು -ಠಿ; 14.82 ಲಕ್ಷ ಕೋಟಿ ಆಗಲಿದೆ.

ಜಾಗತಿಕ ಬ್ಯಾಂಕಿಂಗ್ ಸ್ಪರ್ಧೆಯಲ್ಲಿ ಭಾರತ ಪೈಪೋಟಿ ನೀಡಬೇಕಿದ್ದರೆ ಸಾರ್ವಜನಿಕ ಬ್ಯಾಂಕ್​ಗಳ ವಿಲೀನ ಅನಿವಾರ್ಯ. ಇದನ್ನು ಬಜೆಟ್​ನಲ್ಲೂ ಪ್ರಸ್ತಾಪಿಸಲಾಗಿದ್ದು, ಇದರ ಭಾಗವಾಗಿ ಈ ಮೂರು ಬ್ಯಾಂಕ್​ಗಳ ವಿಲೀನಕ್ಕೆ ಸಮ್ಮತಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದರು.

ಬ್ಯಾಂಕ್​ಗಳ ವೀಲಿನದಿಂದ ದೇಶದ ಆರ್ಥಿಕ ಪ್ರಗತಿ ಹೆಚ್ಚಲಿದೆ, ಬ್ಯಾಂಕ್​ಗಳು ಆರ್ಥಿಕವಾಗಿ ಸುಸ್ಥಿರವಾಗಲಿವೆ. ಇದರಿಂದ ಸಾಲ ವಿತರಣೆಯ ಸಾಮರ್ಥ್ಯ ಕೂಡ ಹೆಚ್ಚಲಿದೆ. ಈ ಮೂರೂ ಬ್ಯಾಂಕ್​ಗಳ ವಿಲೀನ ಪ್ರಕ್ರಿಯೆ ಹೇಗೆ, ಏನು ಎಂಬುದರ ಮಾರ್ಗದರ್ಶಿಯನ್ನು ಈ ಬ್ಯಾಂಕ್​ಗಳ ಆಡಳಿತ ಮಂಡಳಿಗಳು ನಿರ್ಧರಿಸಲಿವೆ ಎಂದು ಹೇಳಿದರು.

ಸಂಪುಟ ಉಪಸಮಿತಿಯಲ್ಲಿ ನಿರ್ಧಾರ: ಹಣಕಾಸು ಸಚಿವ ಅರುಣ್ ಜೇಟ್ಲಿ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಂಪುಟ ಉಪ ಸಮಿತಿ ಸಭೆಯಲ್ಲಿ ವಿಲೀನದ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಚಿವರಾದ ಪಿಯೂಷ್ ಗೋಯಲ್ (ರೈಲ್ವೆ) ಮತ್ತು ನಿರ್ಮಲಾ ಸೀತಾರಾಮನ್ (ರಕ್ಷಣೆ) ಸಭೆಯಲ್ಲಿ ಭಾಗವಹಿಸಿದ್ದರು.

ವಸೂಲಾಗದ ಸಾಲ, ಅನುತ್ಪಾದಕ ಆಸ್ತಿ (ಎನ್​ಪಿಎ)ಗಳಿಂದ ಬಸವಳಿದಿರುವ ದೇಶದ ಸಾರ್ವಜನಿಕ ವಲಯದ ಬ್ಯಾಂಕಿಂಗ್ ವಲಯಕ್ಕೆ ಪುನಶ್ಚೇತನ ನೀಡಲು ಬ್ಯಾಂಕ್​ಗಳ ವಿಲೀನ ಪ್ರಕ್ರಿಯೆ ಆರಂಭಿಸಲಾಗಿದೆ. ಇದರಿಂದ ಬ್ಯಾಂಕ್​ಗಳಿಗೆ ಆರ್ಥಿಕ ಚೈತನ್ಯ ಒದಗಲಿದೆ

| ಅರುಣ್ ಜೇಟ್ಲಿ ಕೇಂದ್ರ ಹಣಕಾಸು ಸಚಿವ

ನೌಕರಿಗೆ ಕುತ್ತಿಲ್ಲ

ಬ್ಯಾಂಕ್ ವೀಲಿನದಿಂದ ನೌಕರಿ ಹೋಗುತ್ತದೆ ಎಂಬ ಭಯ ಬೇಡ. ಈ ಮೂರೂ ಬ್ಯಾಂಕ್​ಗಳ ಯಾವೊಬ್ಬ ನೌಕರರನ್ನೂ ಕೆಲಸದಿಂದ ತೆಗೆಯುವುದಿಲ್ಲ. ಮೂರೂ ಬ್ಯಾಂಕ್​ಗಳ ಸೇವಾ ನಿಯಮದಲ್ಲಿ ಯಾವುದು ಉತ್ತಮ ಅಂಶದಿಂದ ಕೂಡಿದೆಯೋ ಅದನ್ನು ಅನುಸರಿಸಲಾಗುವುದು ಎಂದು ಜೇಟ್ಲಿ ಹೇಳಿದರು.

ಎಸ್​ಬಿಐ ದೇಶದ ಅತಿ ದೊಡ್ಡ ಬ್ಯಾಂಕ್

ಐದು ಸ್ಟೇಟ್ ಬ್ಯಾಂಕ್ ಮತ್ತು ಭಾರತೀಯ ಮಹಿಳಾ ಬ್ಯಾಂಕ್​ಗಳು ಎಸ್​ಬಿಐನಲ್ಲಿ ವಿಲೀನವಾಗುವುದರ ಮೂಲಕ ಎಸ್​ಬಿಐ ದೇಶದ ಅತಿ ದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಎಂಬ ಖ್ಯಾತಿ ಪಡೆದಿದೆ. ಆರ್​ಬಿಐ ಕೂಡ 21 ಬ್ಯಾಂಕ್​ಗಳನ್ನು ವಿಲೀನ ಮಾಡಿ ಮೂರ್ನಾಲ್ಕು ದೊಡ್ಡ ಬ್ಯಾಂಕ್​ಗಳನ್ನು ರಚಿಸಬಹುದು ಎಂದು ಶಿಫಾರಸು ಮಾಡಿದೆ.

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...