More

    ಸ್ವಂತ ಬಲದಿಂದ ಬಂಟರ ಸಾರ್ಥಕ ಜೀವನ:ಸಚಿವ ಕೋಟ

    ಕಿನ್ನಿಗೋಳಿ: ಹಲವು ವರ್ಷಗಳ ಹಿಂದೆ ಭೂಸುಧಾರಣೆ ಕಾಯ್ದೆಯಿಂದ ಅತಿ ಹೆಚ್ಚು ಭೂಮಿ ಕಳೆದುಕೊಂಡವರು ಬಂಟರು. ನಂತರ ದಿನಗಳಲ್ಲಿ ಮುಂಬೈ, ಬೆಂಗಳೂರಿನಂತಹ ಮಹಾನಗರಗಳಲ್ಲಿ ದುಡಿದು ಇಂದು ಅವರು ಮತ್ತೆ ಪ್ರತಿಷ್ಠಿತ ಸ್ಥಾನಗಳಲ್ಲಿ ಇದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

    ಎಕ್ಕಾರು ಬಂಟರ ಸಂಘದಲ್ಲಿ ಧನ್ಯೋತ್ಸವ ಗೌರವಾರ್ಪಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ದಾನಿಗಳ ನಾಮಫಲಕ ಅನಾವರಣಗೊಳಿಸಿ ಮಾತನಾಡಿದರು.
    ಬಂಟರು ಇಂದು ಎಲ್ಲ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದಾರೆ. ಸ್ವಂತ ಬಲದಿಂದ ಸಾರ್ಥಕ ಜೀವನ ಕಂಡುಕೊಂಡಿದ್ದಾರೆ. ಸಾಮಾಜಿಕ ವ್ಯವಸ್ಥೆಯಲ್ಲಿ ಸಮುದಾಯಗಳ ಮಧ್ಯೆ ಅನ್ಯೋನ್ಯತೆ ಇರಬೇಕು ಎಂದರು.
    ಶಾಸಕ ಉಮಾನಾಥ ಕೋಟ್ಯಾನ್ ಪ್ರತಿಭಾ ಪುರಸ್ಕಾರ ನೆರವೇರಿಸಿ ಮಾತನಾಡಿ, ಅತ್ಯಲ್ಪ ಅವಧಿಯಲ್ಲಿ ಎಕ್ಕಾರು ಬಂಟರ ಸಂಘ ಎತ್ತರಕ್ಕೆ ಬೆಳೆದು ನಿಂತಿದೆ. ಸಚಿವರ, ಸಂಸದರ ಸಹಕಾರದಿಂದ ಎಕ್ಕಾರು ಬಂಟರ ಸಂಘಕ್ಕೆ ಅನುದಾನ ಒದಗಿಸಲು ಸಾಧ್ಯವಾಯಿತು. ಎಕ್ಕಾರು ಕಟೀಲು ಪ್ರದೇಶಕ್ಕೆ ಸುಮಾರು 60 ಲಕ್ಷ ರೂ. ಅನುದಾನ ಒದಗಿಸಲಾಗಿದ್ದು, ಇಲ್ಲಿನ ರಸ್ತೆಗಳು ಅಭಿವೃದ್ಧಿ ಕಂಡಿವೆ ಎಂದರು.

    ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಸಂಪನ್ಮೂಲ ಕ್ರೂಢೀಕರಿಸಿ ಅರ್ಹ ಫಲಾನುಭವಿಗಳ ಶ್ರೇಯೋಭಿವೃದ್ಧಿಗೆ ಉಪಯೋಗಿಸುವುದು ಉತ್ತಮ ಸೇವಾ ಕಾರ್ಯ. ಎಕ್ಕಾರು ಬಂಟರ ಸಂಘ ಸಮಾಜಕ್ಕೆ ಶಕ್ತಿ ನೀಡುವ ಕೆಲಸ ಮಾಡುತ್ತಿದೆ ಎಂದರು.
    ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿ, ಸುಜಾತಾ ಶೆಟ್ಟಿ ದಂಪತಿಯನ್ನು ಸನ್ಮಾನಿಸಲಾಯಿತು.ಮಾತೃಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ ಅಧ್ಯಕ್ಷತೆ ವಹಿಸಿದ್ದರು. ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ದ.ಕ. ಜಿಲ್ಲಾ ಹಾಲು ಉತ್ಪದಕರ ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ, ಉದ್ಯಮಿ ಕೃಷ್ಣ ಡಿ. ಶೆಟ್ಟಿ, ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್‌ಶೆಟ್ಟಿ, ಎಂ.ಆರ್.ಜಿ. ಗ್ರೂಪ್‌ನ ಸಿಎಂಡಿ ಪ್ರಕಾಶ್ ಶೆಟ್ಟಿ, ಎಕ್ಕಾರು ಕೊಡಮಣಿತ್ತಾಯ ದೈವಸ್ಥಾನದ ಆಡಳಿತ ಮೊಕ್ತೇಸರ ನಿತಿನ್ ಹೆಗ್ಡೆ, ಎಕ್ಕಾರು ಪಂಚಾಯಿತಿ ಅಧ್ಯಕ್ಷೆ ಸುರೇಖಾ ರೈ, ಮಂಗಳೂರು ಬಂಟರ ಸಂಘದ ಮಂಗಳೂರು ತಾಲೂಕು ಸಂಘದ ಅಧ್ಯಕ್ಷ ನಿಟ್ಟೆ ಗುತ್ತು ರವಿರಾಜ್ ಶೆಟ್ಟಿ, ಸಂಚಾಲಕ ಸಂಚಾಲಕ ಉಲ್ಲಾಸ್ ಶೆಟ್ಟಿ ಪೆರ್ಮುದೆ, ನೀತಾ ವಿಕ್ರಂ ಹೆಗ್ಡೆ ಉಪಸ್ಥಿತರಿದ್ದರು.

    ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸ್ವಾತಿ ಶೆಟ್ಟಿ, ಸುಮಿತ್ ರೈ, ಶ್ರದ್ದಾ ಅವರನ್ನು ಸನ್ಮಾನಿಸಲಾಯಿತು. ಮಂಜುನಾಥ ಭಂಡಾರಿ, ಉಮಾನಾಥ ಕೋಟ್ಯಾನ್ ಅವರನ್ನು ಗೌರವಿಸಲಾಯಿತು.
    ಭರತೇಶ್ ಶೆಟ್ಟಿ ಸನ್ಮಾನ ಪತ್ರವಾಚಿಸಿದರು. ಬಂಟರ ಸಂಘದ ಅಧ್ಯಕ್ಷ ರತ್ನಾಕರ ಶೆಟ್ಟಿ ಎಕ್ಕಾರು ಸ್ವಾಗತಿಸಿ, ಸುರೇಶ್ ಶೆಟ್ಟಿ ವಂದಿಸಿದರು. ನಿತೇಶ್ ಎಕ್ಕಾರು ಕಾರ್ಯಕ್ರಮ ನಿರೂಪಿಸಿದರು.
    ಜ್ಞಾನಾ ಐತಾಳ್ ಬಳಗದಿಂದ ಗಾನ, ನೃತ್ಯ ವೈವಿಧ್ಯ ಮತ್ತು ಬಂಟರ ಸಂಘದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts