18.5 C
Bangalore
Tuesday, December 10, 2019

ಬಂಟ್ವಾಳ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ

Latest News

ಹಸಿವಿನ ಸೂಚ್ಯಂಕದಲ್ಲಿ 102ನೇ ಸ್ಥಾನದಲ್ಲಿ ಭಾರತ

 ಮೈಸೂರು: ವಿಶ್ವದ ಹಸಿವಿನ ಪ್ರಮಾಣದ ಸೂಚ್ಯಂಕದಲ್ಲಿ ಭಾರತ 102ನೇ ಸ್ಥಾನದಲ್ಲಿರುವುದು ಆಘಾತಕಾರಿ ಬೆಳವಣಿಗೆ ಎಂದು ಇಂಫಾಲದ ಕೇಂದ್ರೀಯ ಕೃಷಿ ವಿವಿ ಕುಲಪತಿ ಡಾ.ಎಸ್.ಅಯ್ಯಪ್ಪನ್...

ಕಡಕೊಳ ಟೋಲ್ ಬಳಿ ಗ್ರಾಮಸ್ಥರ ಪ್ರತಿಭಟನೆ

ಮೈಸೂರು: ನಂಜನಗೂಡು ರಸ್ತೆಯ ಕಡಕೊಳ ಬಳಿ ನಿರ್ಮಿಸಿರುವ ಟೋಲ್‌ಗೇಟ್‌ನಲ್ಲಿ ಗ್ರಾಮಸ್ಥರಿಗೆ ವಿನಾಯಿತಿ ನೀಡಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು ಸೋಮವಾರ ಟೋಲ್‌ಗೇಟ್ ಬಳಿ ಪ್ರತಿಭಟನೆ...

ಕೈ ಓಟದಲ್ಲಿ ನಡೆಯದ ಕಮಲದ ಆಟ

ಮೈಸೂರು: ಕಮಲ ಒಮ್ಮೆಯೂ ಮುನ್ನಡೆಗೆ ಬರಲಿಲ್ಲ. ಕೈನ ನಾಗಾಲೋಟ ಕೊನೆಯವರೆಗೂ ನಿಲ್ಲಲಿಲ್ಲ....! ಹುಣಸೂರು ದೇವರಾಜ ಅರಸು ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ನಡೆದ ಹುಣಸೂರು...

ಬೆಲಗೂರಲ್ಲಿ ವಿಜೃಂಭಣೆಯ ರಥೋತ್ಸವ

ಹೊಸದುರ್ಗ: ಹನುಮ ಜಯಂತಿಯ ಅಂಗವಾಗಿ ತಾಲೂಕಿನ ಬೆಲಗೂರು ಗ್ರಾಮದ ಶ್ರೀ ಮಾರುತಿ ಪೀಠದಲ್ಲಿ ಸೋಮವಾರ ಶ್ರೀ ವೀರಪ್ರತಾಪ ಅಂಜನೇಯ ಸ್ವಾಮಿ ಹಾಗೂ ಲಕ್ಷ್ಮೀ...

ನಗರದಲ್ಲಿ ಅದ್ದೂರಿ ಹನುಮೋತ್ಸವ

ಮೈಸೂರು: ಹನುಮ ಜಂಯಂತಿ ಅಂಗವಾಗಿ ವೇದಮಂತ್ರ ಪಠಣದ ನಡುವೆ ಜೈ ಶ್ರೀರಾಮ್, ಜೈ ಬಜರಂಗ ಬಲಿ ಘೋಷಣೆಯೊಂದಿಗೆ ನಗರದಲ್ಲಿ ಸೋಮವಾರ ಆಂಜನೇಯಸ್ವಾಮಿ ಮೂರ್ತಿ...

ಸಂದೀಪ್ ಸಾಲ್ಯಾನ್ ಬಂಟ್ವಾಳ
ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ಸಲುವಾಗಿ ಬಂಟ್ವಾಳದ ಸರ್ಕಾರಿ ಆಸ್ಪತ್ರೆ ಮೂಲ ಸೌಕರ್ಯಗಳೊಂದಿಗೆ ಮೇಲ್ದರ್ಜೆಗೇರಿದೆ. ಆದರೂ ಸಿಬ್ಬಂದಿ ಕೊರತೆ, ಕೆಲ ಸಿಬ್ಬಂದಿಯ ದರ್ಪದ ನಡವಳಿಕೆ, ಆಸ್ಪತ್ರೆಯ ಅವ್ಯವಸ್ಥೆಗಳಿಂದಾಗಿ ಸಾರ್ವಜನಿಕ ವಲಯದಲ್ಲಿ ಪದೇ ಪದೆ ಟೀಕೆ, ಆಕ್ರೋಶದ ಮಾತುಗಳು ಕೇಳಿಬರುತ್ತಿದೆ. ಸಿಬ್ಬಂದಿಯಿಲ್ಲದೆ ಬಳಲುತ್ತಿರುವ ಸರ್ಕಾರಿ ಆಸ್ಪತ್ರೆಗೆ ಶೀಘ್ರ ಮೇಜರ್ ಸರ್ಜರಿಯೂ ಆಗಬೇಕಿದೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.

ಕಚೇರಿ ಖಾಲಿ ಖಾಲಿ: 30 ಹಾಸಿಗೆಯ ಆಸ್ಪತ್ರೆಯಾಗಿದ್ದ ಬಂಟ್ವಾಳದ ಸರ್ಕಾರಿ ಆಸ್ಪತ್ರೆ 100 ಹಾಸಿಗೆಯ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿ ಸಾಕಷ್ಟು ಅಗತ್ಯ ಸೌಲಭ್ಯಗಳು, ಸುಧಾರಿತ ವೈದ್ಯಕೀಯ ಯಂತ್ರೋಪಕರಣ ಆಸ್ಪತ್ರೆಗೆ ಒದಗಿ ಬಂದಿದೆ. ಆದರೆ ಅಗತ್ಯ ಬೇಕಿರುವ ಸಿಬ್ಬಂದಿಯೇ ತಕ್ಕಷ್ಟು ಇಲ್ಲದಿರುವುದರಿಂದ ಆಸ್ಪತ್ರೆ ಸಮಸ್ಯೆಯ ಆಗರವಾಗಿದೆ. 82 ಮಂಜೂರಾದ ಹುದ್ದೆಗಳ ಪೈಕಿ 44 ಹುದ್ದೆಗಳು ಖಾಲಿ ಇವೆ. ಕಚೇರಿಯಲ್ಲಿ ಆಡಳಿತ ವೈದ್ಯಾಧಿಕಾರಿ ಹಾಗೂ ಸಹಾಯಕ ಆಡಳಿತ ವೈದ್ಯಾಧಿಕಾರಿ ಹುದ್ದೆಗಳು ಮಾತ್ರ ಭರ್ತಿಯಾಗಿದ್ದು, ಕಚೇರಿ ಅಧೀಕ್ಷಕ, 5 ಕಚೇರಿ ಕ್ಲಕ್ ಹುದ್ದೆಗಳು ಖಾಲಿ ಉಳಿದಿವೆ. 33 ಗ್ರೂಪ್ ಡಿ ಹುದ್ದೆಗಳ ಪೈಕಿ 31 ಸ್ಥಾನ ಖಾಲಿ ಇದೆ. ಈ ಸ್ಥಾನಕ್ಕೆ 18 ಮಂದಿ ಸಿಬ್ಬಂದಿಯನ್ನು ಹೊರಗುತ್ತಿಗೆ ಆಧಾರದಲ್ಲಿ ಆಯ್ಕೆ ಮಾಡಲಾಗಿತ್ತಾದರೂ ಅರ್ಥಿಕ ಸಂಕಷ್ಟದ ನೆಪದಿಂದ ಈ ಸಿಬ್ಬಂದಿಯನ್ನು ಕೆಲ ದಿನಗಳಿಂದ ಕೆಲಸದಿಂದ ವಜಾಗೊಳಿಸಲಾಗಿದ್ದು, ಇಬ್ಬರು ಸಿಬ್ಬಂದಿ ಮಾತ್ರ ಕರ್ತವ್ಯನಿರತರಾಗಿದ್ದಾರೆ. 2 ವೈದ್ಯ, 2 ಲ್ಯಾಬ್ ಟೆಕ್ನಿಷಿಯನ್, 2 ಫಾರ್ಮಸಿಸ್ಟ್, 1 ಎಕ್ಸ್‌ರೇ ಟೆಕ್ನಿಷಿಯನ್ ಹುದ್ದೆಗಳು ಖಾಲಿಯಾಗಿವೆ. ಪ್ರತಿದಿನ 600 ಮಂದಿ ಹೊರ ರೋಗಿಗಳು ಆಸ್ಪತ್ರೆಗೆ ಭೇಟಿ ನೀಡುತ್ತಾರೆ. 40ರಿಂದ 50 ಮಂದಿ ಒಳ ರೋಗಿಯಾಗಿ ದಾಖಲಾಗುತ್ತಾರೆ. ಲಭ್ಯವಿರುವ ಸಿಬ್ಬಂದಿ ಬಳಸಿ ಕರ್ತವ್ಯ ನಿರ್ವಹಿಸಬೇಕಾದ ಅನಿವಾರ್ಯತೆ ಈ ಆಸ್ಪತ್ರೆಯಲ್ಲಿದೆ.

ಸಿಬ್ಬಂದಿ ನಡವಳಿಕೆ ಬಗ್ಗೆ ಅಸಮಾಧಾನ: ಆಸ್ಪತ್ರೆಯ ರೋಗಿಗಳೊಂದಿಗೆ ಸಿಬ್ಬಂದಿ ಸರಿಯಾಗಿ ಸ್ಪಂದಿಸುವುದಿಲ್ಲ. ರೋಗಿಗಳಿಗೆ ಬೇಕಾಗುವ ಮಾಹಿತಿ ನೀಡುವುದಿಲ್ಲ. ವೈದ್ಯರನ್ನು ಕಾಣಬೇಕಾದರೆ ಗಂಟೆಗಟ್ಟಲೆ ಕಾಯಬೇಕು ಎನ್ನುವ ದೂರು ಸಾರ್ವಜನಿಕರಿಂದ ಹಿಂದಿನಿಂದಲೂ ಕೇಳಿಬರುತ್ತಿದೆ. ಇತ್ತೀಚೆಗೆ ವಿಪರೀತ ವಾಂತಿ ಭೇದಿ, ಜ್ವರದಿಂದ ಬಳಲುತ್ತಿದ್ದ ಮಹಿಳೆಯೊಬ್ಬರನ್ನು ದಾಖಲು ಮಾಡಲು ವೈದ್ಯರೂ ಸೂಚಿಸಿದ್ದರೂ ಕರ್ತವ್ಯದಲ್ಲಿದ್ದ ಸ್ಟಾಫ್ ನರ್ಸ್ ನಿರಾಕರಿಸಿದ ಪರಿಣಾಮ ಎರಡು ಗಂಟೆ ತಡವಾಗಿ ರೋಗಿಗೆ ಚಿಕಿತ್ಸೆ ನೀಡಿದ್ದರಿಂದ ಸಾಕಷ್ಟು ತೊಂದರೆಯಾಗಿದೆ. ಈ ಬಗ್ಗೆ ಆಸ್ಪತ್ರೆಯ ಮೇಲಧಿಕಾರಿಗಳ ಗಮನಕ್ಕೆ ತಂದರೂ ಸ್ಪಂದನೆ ಸಿಕ್ಕಿಲ್ಲ ಎನ್ನುವ ಸಂದೇಶ ಸಾಮಾಜಿಕ ಜಾಲಾತಾಣದಲ್ಲಿ ಹರಿದಾಡುತ್ತಿದೆ. ಆಸ್ಪತ್ರೆಯ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು.

ಶಾಸಕ ದಿಢೀರ್ ಭೇಟಿ: ಆಸ್ಪತ್ರೆ ಅವ್ಯವಸ್ಥೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶದ ಸಂದೇಶ ವೈರಲ್ ಆದ ಹಿನ್ನೆಲೆಯಲ್ಲಿ ಶಾಸಕ ರಾಜೇಶ್ ನಾಕ್ ಮಂಗಳವಾರ ಬೆಳಗ್ಗೆ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಒಳ ಹಾಗೂ ಹೊರ ರೋಗಿಗಳೊಂದಿಗೆ ಮಾತುಕತೆ ನಡೆಸಿ ಆಸ್ಪತ್ರೆಯ ಸೇವೆ ಬಗ್ಗೆ ಮಾಹಿತಿ ಪಡೆದುಕೊಂಡರು. ರೋಗಿಗಳ ಅನುಕೂಲದ ದೃಷ್ಟಿಯಿಂದ ಆಸ್ಪತ್ರೆ ಪ್ರವೇಶ ಭಾಗದಲ್ಲಿ ವೈದ್ಯರ ದೂರವಾಣಿ ಸಂಪರ್ಕ ಸಂಖ್ಯೆ ಹಾಕುವಂತೆ ತಾಲೂಕು ಆರೋಗ್ಯಾಧಿಕಾರಿಗೆ ಸೂಚನೆ ನೀಡಿದ್ದಾರೆ. ಜಿ.ಪಂ. ಕಾರ್ಯ ನಿರ್ವಾಹಣಾಧಿಕಾರಿಗೆ ದೂರವಾಣಿ ಕರೆ ಮಾಡಿ ವಜಾಗೊಂಡಿರುವ 18ಮಂದಿ ಹೊರಗುತ್ತಿಗೆ ಕಾರ್ಮಿಕರನ್ನು ಮತ್ತೆ ನಿಯುಕ್ತಿಗೊಳಿಸುವಂತೆ ಮನವಿ ಮಾಡಿದರು. ಶೌಚಗೃಹವ್ನನು ಸ್ವಚ್ಛವಾಗಿಟ್ಟುಕೊಳ್ಳುವಂತೆ ವೈದ್ಯಾಧಿಕಾರಿಗೆ ಸೂಚಿಸಿದರು. ಈ ಸಂದರ್ಭ ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಾ ಪ್ರಭು, ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಸದಾಶಿವ, ಪ್ರಮುಖರಾದ ರಮಾನಾಥ ರಾಯಿ, ರಾಮದಾಸ ಬಂಟ್ವಾಳ ಹಾಜರಿದ್ದರು.

ಬದಲಾವಣೆ ಬೇಕಾಗಿದೆ: ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳು ಹೆಚ್ಚಾಗಿ ಬಡವರು, ಅನಕ್ಷರಸ್ಥರೇ ಆಗಿರುತ್ತಾರೆ. ಆದ್ದರಿಂದ ಆಸ್ಪತ್ರೆಯ ಸಿಬ್ಬಂದಿ ರೋಗಿಗಳೊಂದಿಗೆ ಮಾನವೀಯತೆ ಹಾಗೂ ಸೌಜನ್ಯದಿಂದ ವರ್ತಿಸುವಂತೆ ಆಸ್ಪತ್ರೆಯ ಆಡಳಿತ ನೋಡಿಕೊಳ್ಳಬೇಕು. ಆಸ್ಪತ್ರೆಯಲ್ಲಿ ಸಾಕಷ್ಟು ತಜ್ಞ ವೈದ್ಯರಿದ್ದರೂ ರೋಗಿಗಳಿಗೆ ಈ ಬಗ್ಗೆ ಮಾಹಿತಿ ಇಲ್ಲದಿರುವುದರಿಂದ ಓರ್ವ ವೈದ್ಯರ ಬಳಿ ಸಾಲುಗಟ್ಟಿ ನಿಲ್ಲುವ ದೃಶ್ಯ ನಿತ್ಯ ಕಂಡು ಬರುತ್ತಿದೆ. ಈ ಬಗ್ಗೆ ರೋಗಿಗಳಿಗೆ ಮಾಹಿತಿ ನೀಡಿ ರೋಗಿಗಳಿಗೆ ಅನುಕೂಲ ಕಲ್ಪಿಸಬೇಕು. ತಜ್ಞ ವೈದ್ಯರು ರಜೆ ಅಥವಾ ಅನ್ಯ ಕೆಲಸದ ನಿಮಿತ್ತ ಹೊರ ಹೋಗಿದ್ದಾಗ ಅವರ ತಪಾಸಣಾ ಕೊಠಡಿಯ ಬಳಿ ವೈದ್ಯರು ಇಲ್ಲದಿರುವ ಬಗ್ಗೆ ಮಾಹಿತಿ ಫಲಕ ಹಾಕಬೇಕು ಎನ್ನುವ ಸಲಹೆಗಳು ಜನರಿಂದ ಕೇಳಿ ಬಂದಿದೆ.

ನೋ ಪಾರ್ಕಿಂಗ್‌ನಲ್ಲೇ ಪಾರ್ಕಿಂಗ್: ರೋಗಿಗಳೊಂದಿಗೆ ಅವರನ್ನು ಕರೆ ತರುವ ಮಂದಿಗೂ ತಾಳ್ಮೆ ಅಗತ್ಯ ಬೇಕಿದೆ. ವೈದ್ಯರು ಎಲ್ಲ ರೋಗಿಗಳನ್ನು ಪರೀಕ್ಷಿಸಿ ಚಿಕಿತ್ಸೆ ನೀಡಬೇಕಾಗಿರುವುದರಿಂದ ಆಸ್ಪತ್ರೆಯ ಹೊರ ಆವರಣ ಕಿರಿದಾಗಿದ್ದು ಅಲ್ಲಿ ನೋಪಾರ್ಕಿಂಗ್ ಎನ್ನುವ ಸೂಚನಾ ಬರಹವಿದ್ದರೂ ಅದೇ ಜಾಗದಲ್ಲಿ ವಾಹನ ಪಾರ್ಕಿಂಗ್ ಮಾಡಲಾಗುತ್ತಿದೆ. ಕೆಲವೊಮ್ಮೆ ಆಸ್ಪತ್ರೆ ಆವರಣದೊಳಗೆ ವಾಹನ ದಟ್ಟಣೆ ನಿಯಂತ್ರಿಸುವುದೇ ಹರಸಾಹಸವಾಗುತ್ತಿದೆ ಎನ್ನುತ್ತಾರೆ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಸದಾಶಿವ, ಆಸ್ಪತ್ರೆಯ ಆಡಳಿತ, ಸಿಬ್ಬಂದಿ, ರೋಗಿಗಳ ಮಧ್ಯೆ ಅನ್ಯೋನ್ಯತೆ ಇದ್ದಾಗ ಲಭ್ಯವಿರುವ ವ್ಯವಸ್ಥೆಯನ್ನು ಉತ್ತಮ ಪಡಿಸಿಕೊಳ್ಳಲು ಸಾಧ್ಯವಿದೆ.

Stay connected

278,741FansLike
587FollowersFollow
622,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...