

ಮಂಗಳೂರು: ರಸ್ತೆ ಅಪಘಾತದಲ್ಲಿ ಮದುವೆಯಾದ 2ನೇ ದಿನಗಳಲ್ಲಿ ನವವಿವಾಹಿತೆ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತಲಪಾಡಿಯಲ್ಲಿ ನಡೆದಿದೆ. ಭೀಕರ ಅಪಘಾತದಲ್ಲಿ ನವವಿವಾಹಿತೆ ಸ್ಥಳದಲ್ಲೇ ಪ್ರಾಣ ಮೃತಪಟ್ಟಿದ್ದು, ಕಾರಿನಲ್ಲಿದ್ದ ಪತಿಯ ಸ್ಥಿತಿ ಚಿಂತಾಜನಕವಾಗಿದೆ.
ಕಳೆದ ಸೆಪ್ಟೆಂಬರ್ 5ರಂದು ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ, ಮಾನಸ ಜೋಡಿ ವಿವಾಹವಾಗಿದ್ದರು. ಗಾಯಗೊಂಡಿರುವ ಅನಿಶ್ ಕೃಷ್ಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ನವದಂಪತಿ ಬಿ.ಸಿ. ರೋಡ್ ಕಡೆಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಆಲ್ಟೋ ಕಾರು ನಿಯಂತ್ರಣ ಕಳೆದುಕೊಂಡು ಡಿವೈಡರ್ ಹಾರಿ ಕೆಎಸ್ಆರ್ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಕೂಡಲೇ ಕಾರಿನ ಬಳಿ ಓಡೋಡಿ ಬಂದ ಸ್ಥಳೀಯರು ನವದಂಪತಿ ನಜ್ಜುಗುಜ್ಜಾಗಿರೋದನ್ನು ಕಂಡು ಬೆಚ್ಚಿ ಬಿದ್ದಿದ್ದಾರೆ.
ದಂಪತಿ ಇಬ್ಬರೂ ಮಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.