More

    ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ 20ರಂದು

    ಕೊಪ್ಪಳ: ಜಿಲ್ಲಾ ವಕೀಲರ ಸಂಘ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಮಾ.20ರಂದು ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನ ಆಚರಿಸಲಾಗುವುದೆಂದು ಸಂಘದ ಜಿಲ್ಲಾಧ್ಯಕ್ಷ ಎ.ವಿ.ಕಣವಿ ತಿಳಿಸಿದರು.

    ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ವಿಶೇಷವಾಗಿ ಕಾರ್ಯಕ್ರಮ ಆಯೋಜಿಸಿದ್ದು, ಮಹಿಳೆಯರ ಸಂಬಂಧ ವಿಶೇಷ ಚರ್ಚಾಗೋಷ್ಠಿ ನಡೆಯಲಿವೆ. ಸಾಧಕಿಯರನ್ನು ಸನ್ಮಾನಿಸಲಾಗುವುದು. ಆಧುನಿಕ ತಂತ್ರಜ್ಞಾನ ಯುಗದಲ್ಲಿ ಮಹಿಳೆಯರ ಹಕ್ಕುಗಳು ವಿಷಯ ಕುರಿತು ವಿಎಸ್‌ಕೆ ವಿವಿ ಮಹಿಳಾ ಅಧ್ಯಯನ ವಿಭಾಗದ ಪ್ರಾಧ್ಯಾಪಕಿ ಡಾ.ಶ್ರೀದೇವಿ ಆಲೂರು ಹಾಗೂ ಮಹಿಳಾ ಸಬಲೀಕರಣ ವಿಷಯ ಕುರಿತು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಉಪನ್ಯಾಸಕಿ ಡಾ.ಗೀತಾ ಮುತ್ತಾಳ ಉಪನ್ಯಾಸ ನೀಡಲಿದ್ದಾರೆ. ಜಿಲ್ಲಾ ನ್ಯಾಯಾಧೀಶೆ ಬಿ.ಎಸ್.ರೇಖಾ ಹಾಗೂ ಇತರ ನ್ಯಾಯಾಧೀಶರು ಜಿಲ್ಲಾಡಳಿತದ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಮುಖ್ಯವಾಗಿ ಜಿಲ್ಲೆಯ ಎಲ್ಲ ತಾಲೂಕುಗಳ ವಕೀಲರ ಸಂಘದ ಪದಾಧಿಕಾರಿಗಳು, ಮಹಿಳಾ ವಕೀಲರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆಂದು ಮಾಹಿತಿ ನೀಡಿದರು.

    ಕೊಪ್ಪಳ ಜಿಲ್ಲೆಯಾಗಿ 25 ವರ್ಷಗಳಾಗಿದ್ದು, ಈವರೆಗೆ ನ್ಯಾಯಾಲಯ ಸಂಕೀರ್ಣ ನಿರ್ಮಾಣವಾಗಿಲ್ಲ. ಸರ್ಕಾರ ಭೂ ಸ್ವಾಧೀನಕ್ಕಾಗಿ 2 ಕೋಟಿ ರೂ. ಬಿಡುಗಡೆ ಮಾಡಿದ್ದು, ಬಾಕಿ ಮೊತ್ತ ನೀಡುತ್ತಿಲ್ಲ. ಈ ಸಂಬಂಧ ಸಚಿವರು, ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದರೂ ಪ್ರಯೋಜನವಾಗಿಲ್ಲ. ಕೊಪ್ಪಳದೊಂದಿಗೆ ರಚನೆಯಾದ ಹೊಸ ಜಿಲ್ಲೆಗಳಲ್ಲಿ ಈಗಾಗಲೇ ನ್ಯಾಯಾಲಯ ನಿರ್ಮಿಸಲಾಗಿದೆ. ಇತ್ತೀಚೆಗೆ ಜಿಲ್ಲೆಯಾದ ವಿಜಯನಗರದಲ್ಲಿ ಕಾಮಗಾರಿ ಆರಂಭಿಸಲಾಗಿದೆ. ಕೊಪ್ಪಳದಲ್ಲಿ ಸಂಕೀರ್ಣ ಇಲ್ಲದ ಕಾರಣ ಕಕ್ಷಿದಾರರು, ನ್ಯಾಯಾಧೀಶರು, ಅಧಿಕಾರಿಗಳು, ವಕೀಲರು ಎಲ್ಲರಿಗೂ ಸಮಸ್ಯೆಯಾಗುತ್ತಿದೆ ಎಂದರು. ವಕೀಲರಾದ ಎಲ್.ಎಚ್.ಹಿರೇಗೌಡರ್, ಚಿದಾನಂದಗೌಡ, ಸಂಧ್ಯಾ ಮಾದಿನೂರು, ಪುಷ್ಪಾ ಬೇವೂರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts