More

    ರಾಜ್ಯದಲ್ಲಿ ತೀವ್ರ ಬರ ಇದ್ದರೂ ನೆರವು ನೀಡದ ಕೇಂದ್ರ: ಬಜೆಟ್‌ನಲ್ಲೂ ಸಿಎಂ ಆಕ್ರೋಶ

    ಬೆಂಗಳೂರು:
    ರಾಜ್ಯದಲ್ಲಿ ತೀವ್ರ ಬರ ಇರುವುದರಿಂದ 18,171 ಕೋಟಿ ರೂ ನೆರವು ಕೇಳಿ 3 ಬಾರಿ ಮನವಿ ಸಲ್ಲಿಸಿದ್ದರೂ, ಕೇಂದ್ರ ಸರ್ಕಾರ ಯಾವುದೇ ರೀತಿಯ ಸ್ಪಂದನೆ ನೀಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿಯೇ ಆಕ್ರೋಶ ವ್ಯಕ್ತಪಡಿಸಿದ್ದಾರೆ.
    223 ತಾಲ್ಲೂಕುಗಳನ್ನು ಬರಗಾಲ ಪೀಡಿತ ಪ್ರದೇಶಗಳೆಂದು ಘೋಷಿಸಿದ್ದು, ಸಂಕಷ್ಟಕ್ಕೆ ಸಿಲುಕಿದ ರೈತರಿಗೆ ಎನ್‌ಡಿಆರ್‌ಎ್ ನಿಧಿಯಿಂದ ನೆರವು ನೀಡುವಂತೆ ಕೋರಲಾಗಿತ್ತು ಎಂದಿದ್ದಾರೆ.
    ಆದರೂ ಕೇಂದ್ರ ಸರ್ಕಾರದ ಅನುದಾನಕ್ಕೆ ಕಾಯದೇ ಬರವನ್ನು ಸಮರ್ಥವಾಗಿ ನಿಭಾಯಿಸಲು
    33.19 ಲಕ್ಷ ರೈತರಿಗೆ ತಲಾ 2,000 ರೂ.ಗಳವರೆಗೆ ಇನ್‌ಪುಟ್ ಸಬ್ಸಿಡಿಯಾಗಿ 629 ಕೋಟಿ ರೂ. ಅನುದಾನ ರೈತರ ಖಾತೆಗೆ ಜಮೆ ಮಾಡಲಾಗಿದೆ ಎಂದು ಹೇಳಿದ್ದಾರೆ.
    ಬರದ ತೀವ್ರತೆಯನ್ನು ತಗ್ಗಿಸಲು 20 ಕೋಟಿ ರೂ.ಗಳ ವೆಚ್ಚದಲ್ಲಿ ಮಿನಿ ಮೇವಿನ ಕಿಟ್ ವಿತರಣೆ, ಅಂತರ್ಜಲ ಮಟ್ಟ ವೃದ್ಧಿಸಲು ಕೃಷಿ ಭಾಗ್ಯ ಯೋಜನೆಯಡಿ 200 ಕೋಟಿ ರೂ., ಸಣ್ಣ ನೀರಾವರಿ ಇಲಾಖೆಯ ಮೂಲಕ 100 ಕೋಟಿ ರೂ.ಗಳ ವೆಚ್ಚದ ಜಲ ಸಂರಕ್ಷಣೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದಿದ್ದಾರೆ.
    ರಾಜ್ಯ ವಿಪತ್ತು ಉಪಶಮನ ನಿಧಿಯಿಂದ ಒಟ್ಟು 500 ಕೋಟಿ ರೂ.ಗಳ ವೆಚ್ಚದಲ್ಲಿ ವಿವಿಧ ಬರ ಉಪಶಮನ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದಿದ್ದಾರೆ.

    ಆನೆಯ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ
    15ನೇ ಹಣಕಾಸು ಆಯೋಗವು 2011-17ರ ಅವಧಿಯಲ್ಲಿನ ವೆಚ್ಚವನ್ನು ಆಧರಿಸಿ, ಪರಿಹಾರ ಮೊತ್ತ ನಿಗದಿ ಮಾಡಿರುವುದರಿಂದ ರಾಜ್ಯಕ್ಕೆ 2021-26 ರ ಅವಧಿಗೆ ನಿಗದಿಪಡಿಸಿರುವ ಎಸ್‌ಡಿಆರ್‌ಎ್ ಮೊತ್ತ ಹಂಚಿಕೆಯು ಆನೆಯ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತಾಗಿದೆ ಎಂದು ಸಿಎಂ ತಿಳಿಸಿದ್ದಾರೆ.
    2018 ರಿಂದ ತೀವ್ರ ನೈಸರ್ಗಿಕ ವಿಕೋಪಗಳಿಂದ ರಾಜ್ಯಕ್ಕೆ 1.21 ಲಕ್ಷ ಕೋಟಿ ರೂ.ಗಳಷ್ಟು ನಷ್ಟ ಉಂಟಾಗಿದೆ. ಆದರೆ, ಕೇಂದ್ರ ಸರ್ಕಾರವು 2018 ರಿಂದ ಇಲ್ಲಿಯವರೆಗೆ ಬಿಡುಗಡೆಗೊಳಿಸಿದ್ದು, 9,300 ಕೋಟಿ ರೂ. ಮಾತ್ರ ಎಂದು ಸಿಎಂ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ.
    ರಾಜ್ಯ ಸರ್ಕಾರವು ತನ್ನ ಬೊಕ್ಕಸದಿಂದ ವಿವಿಧ ಇಲಾಖೆಗಳ ಮೂಲಕ 15,874 ಕೋಟಿ ರೂ.ಗಳನ್ನು ವಿಕೋಪ ನಿರ್ವಹಣೆಗಾಗಿ ವೆಚ್ಚ ಮಾಡಿದೆ ಎಂದು ಹೇಳಿದ್ದಾರೆ.
    ರಾಜ್ಯಗಳಿಗೆ ಎನ್.ಡಿ.ಆರ್.ಎ್ ಅನುದಾನ ನಿಗದಿಪಡಿಸುವ ಸಂದರ್ಭದಲ್ಲಿ ರಾಜ್ಯ ಸರ್ಕಾರಗಳು ಪ್ರಕೃತಿ ವಿಕೋಪಗಳನ್ನು ನಿಭಾಯಿಸಲು ಎಲ್ಲಾ ಇಲಾಖೆಗಳ ಮೂಲಕ ವೆಚ್ಚ ಮಾಡಿರುವ ಅನುದಾನವನ್ನು ಪರಿಗಣಿಸುವುದರ ಜೊತೆಗೆ ಪ್ರಕೃತಿ ವಿಕೋಪಕ್ಕೆ ತುತ್ತಾಗುವ ಸಾಧ್ಯತೆಗಳನ್ನೂ ಕೂಡ ಪರಿಗಣಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಹಾಗೂ 16ನೇ ಹಣಕಾಸು ಆಯೋಗಕ್ಕೆ ಒತ್ತಾಯಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts