More

  ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ಸಿನಿಮಾ

  ವಿಜಯವಾಣಿ ಸುದ್ದಿಜಾಲ ಬೆಂಗಳೂರು

  ಹಿರಿಯ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ‘ಚಿಣ್ಣರ ಚಂದ್ರ’ ಸಿನಿಮಾ ಈಗಾಗಲೇ ಮೆಲ್ಬರ್ನ್ ಅಂತಾರಾಷ್ಟ್ರೀಯ ಚಿತ್ರೋತ್ಸವದ ಸ್ಪರ್ಧಾ ವಿಭಾಗಕ್ಕೆ ಆಯ್ಕೆಯಾಗಿ, ಅಂತಮ ಹಂತ ತಲುಪಿದೆ. ಅದರ ಬೆನ್ನಲ್ಲೇ ಅಹಮದಾಬಾದ್ ಅಂತಾರಾಷ್ಟ್ರೀಯ ಮಕ್ಕಳ ಚಿತ್ರೋತ್ಸವದ ಸ್ಪರ್ಧಾ ವಿಭಾಗದಲ್ಲಿ ಇದೀಗ ಪ್ರವೇಶ ಪಡೆದಿದೆ. ‘ಚಿಣ್ಣರ ಚಂದ್ರ’ ಚಿತ್ರ ಶಿಕ್ಷಣದ ಮಹತ್ವ ಸಾರುತ್ತಲೇ ಸಮಾಜದಲ್ಲಿ ಸದಭಿರುಚಿ, ಸೌಹಾರ್ದತೆ ಮತ್ತು ಸಮಾನತೆಯ ಅಗತ್ಯತೆಯನ್ನು ಮಕ್ಕಳ ಮೂಲಕ ಅಭಿವ್ಯಕ್ತಪಡಿಸುತ್ತದೆ. ಜತೆಗೆ ಜಾನಪದ ಕಥೆಗಳು ಮಕ್ಕಳ ಮನಸ್ಸಿನ ಭಾಗವಾಗುವುದನ್ನು ಚಿತ್ರಿಸುತ್ತದೆ.

  ಇದನ್ನೂ ಓದಿ : ದಾಂಪತ್ಯ ಜೀವನಕ್ಕೆ ಕಾಲಿಟ್ಟ ಒಳ್ಳೆ ಹುಡುಗ ಪ್ರಥಮ್

  ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ಸಿನಿಮಾ

  ಬರಗೂರು ರಾಮಚಂದ್ರಪ್ಪ ಅವರ ‘ಅಡಗೂಲಜ್ಜಿ’ ಎಂಬ ಕಾದಂಬರಿಯನ್ನು ಆಧರಿಸಿದ ಕಥೆಯಿದು. ‘ಬಯಲಾಟದ ಭೀಮಣ್ಣ’ ಹಾಗೂ ‘ತಾಯಿ ಕಸ್ತೂರ್ ಗಾಂಧಿ’ ಚಿತ್ರಗಳಲ್ಲಿ ಸಣ್ಣ ಪಾತ್ರಗಳಲ್ಲಿ ನಟಿಸಿದ್ದ ಬರಗೂರು ರಾಮಚಂದ್ರಪ್ಪನವರ ಮೊಮ್ಮಗ ಆಕಾಂಕ್ಷ್ ಬರಗೂರ್ ಈ ಚಿತ್ರದಲ್ಲಿ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

  ಇದನ್ನೂ ಓದಿ : ಕೆಲವು ಕಹಿ ಘಟನೆಗಳಿಂದ ನಾನು ಖಿನ್ನತೆಗೆ ಒಳಗಾಗಿದ್ದೆ ಎಂದು ಖ್ಯಾತ ನಿರ್ದೇಶಕ

  ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ಸಿನಿಮಾ

  ಜತೆಗೆ ನಿಕ್ಷೇಪ, ಷಡ್ಜ, ಈಶಾನ್, ಅಭಿನವ್ ನಾಗ್, ಸುಂದರ್ ರಾಜ್, ರೇಖಾ, ವತ್ಸಲ ಮೋಹನ್, ರಾಧಾ ರಾಮಚಂದ್ರ, ಹಂಸ, ರಾಘವ, ರಾಜಪ್ಪ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಸುರೇಶ್ ಅರಸು ಸಂಕಲನ, ನಾಗರಾಜ್ ಅದವಾನಿ ಛಾಯಾಗ್ರಹಣ, ಶಮಿತಾ ಮಲ್ನಾಡ್ ಸಂಗೀತ ಚಿತ್ರಕ್ಕಿರಲಿದೆ. ಶೀಘ್ರದಲ್ಲೇ ಸಿನಿಮಾ ಬಿಡುಗಡೆ ಮಾಡಿ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಪ್ರದರ್ಶಿಸುವ ಆಲೋಚನೆ ಚಿತ್ರತಂಡದ್ದು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts