25.9 C
Bengaluru
Wednesday, January 22, 2020

ರೈತರಿಗೆ ಸಾಂಸ್ಥಿಕ ಸಾಲ ಸಿಗುತ್ತಿಲ್ಲವೆಂದು ಬರಗೂರು ಬೇಸರ

Latest News

ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಲ್ಲ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟಿದ್ದ ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ...

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಶಿರಾ: ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿ ಅವರು ಬ್ಯಾಂಕ್‌ಗಳನ್ನು ರಾಷ್ಟ್ರೀಕರಣಗೊಳಿಸದಿದ್ದರೆ ಗ್ರಾಮೀಣ ರೈತರಿಗೆ ಬ್ಯಾಂಕ್ ಸೇವೆ ಲಭಿಸುತ್ತಿರಲಿಲ್ಲ ಎಂದು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಹೇಳಿದರು.

ತಾವರೆಕೆರೆಯಲ್ಲಿ ಶುಕ್ರವಾರ ಜಿಲ್ಲಾ ಸಹಕಾರ ಬ್ಯಾಂಕ್ ನೂತನ ಶಾಖೆ ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ 24.30 ಕೋಟಿ ಕುಟುಂಬಗಳಿದ್ದು, ಅದರಲ್ಲಿ 17.91 ಕೋಟಿ ಗ್ರಾಮೀಣ ಕುಟುಂಬಗಳಿವೆ, ಇಲ್ಲಿಯವರೆಗೂ ಶೇ.84 ಅತೀ ಸಣ್ಣ ರೈತರಿಗೆ ಸಾಂಸ್ಥಿಕ ಸಾಲ ಸಿಗುತ್ತಿಲ್ಲ. ಅವರು ಮೀಟರ್ ಬಡ್ಡಿಗೆ ಮೊರೆಹೋಗಿ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಬೇಸರ ತಂಂದಿದೆ ಎಂದರು.

ಅಮೆರಿಕಾ ಶೇ.5 ರೈತರಿಗೆ ಶೇ.26 ಸಬ್ಸಿಡಿ ನೀಡುತ್ತಿದ್ದು, ಭಾರತದಲ್ಲಿ ಶೇ.60 ರೈತರಿಗೆ ನೀಡುವ ಸಬ್ಸಿಡಿ ಕೇವಲ ಶೇ.2.77. ಸ್ವತಂತ್ರ ಬಂದ ಮೊದಲ ಬಜೆಟ್‌ನಲ್ಲಿ ಭಾರತ ರೈತರಿಗಾಗಿ ಶೇ.12.5 ಮೀಸಲಿಟ್ಟಿತ್ತು. ಆದರೆ 70 ವರ್ಷ ಕಳೆದ ನಂತರ ಕೇವಲ ಶೇ.3.5 ಮೀಸಲಿಟ್ಟಿದೆ. ಈ ವ್ಯವಸ್ಥೆ ಪ್ರಶ್ನಿಸಿದರೆ ರಾಜಕೀಯ ತಳುಕು ಅಂಟಿಸುತ್ತಾರೆ. ಸ್ವಾಮಿನಾಥನ್ ವರದಿ ಯಾವ ಸರ್ಕಾರಗಳೂ ಅನುಷ್ಠಾನಗೊಳಿಸಿಲ್ಲ. ನಿಜವಾಗಿಯೂ ಪ್ರಜಾಪ್ರಭುತ್ವ ಜಾರಿಯಾಗಿದೆಯಾ ಎಂದು ಪ್ರಶ್ನಿಸಬೇಕಾಗುತ್ತದೆ ಎಂದರು.

ರಾಜ್ಯ ಅಪೆಕ್ಸ್ ಬ್ಯಾಂಕ್, ತುಮಕೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಮಾತನಾಡಿ, ಸರ್ಕಾರದ ಹಣದಿಂದ ಸಹಕಾರಿ ಬ್ಯಾಂಕ್ ನಡೆಯುತ್ತಿಲ್ಲ. ಜಿಲ್ಲಾ ಸಹಕಾರ ಬ್ಯಾಂಕ್‌ನಲ್ಲಿ ಸಾವಿರ ಕೋಟಿ ರೂ. ಠೇವಣಿ ಹೊಂದಿದ್ದು, ನಮಗೆ ಸಾಲ ನೀಡುವ ಅನ್ನದಾತ, ನಬಾರ್ಡ್ ಮತ್ತು ರೈತರ ಷೇರು ಹಣದಿಂದ ರೈತರಿಗೆ ಸಾಲ ನೀಡುವ ವ್ಯವಸ್ಥೆ ಇದೆ. ರೈತರ ಸಾಲ ಮನ್ನಾ ಮಾಡಿದ ಏಕೈಕ ಬ್ಯಾಂಕ್ ತುಮಕೂರು ಜಿಲ್ಲಾ ಸಹಕಾರ ಬ್ಯಾಂಕ್ ಎಂದರು.

ನಬಾರ್ಡ್ ಪ್ರಧಾನ ವ್ಯವಸ್ಥಾಪಕ ಸೂರ್ಯಕುಮಾರ್, ಜಿಲ್ಲಾ ಡಿಸಿಸಿ ಬ್ಯಾಂಕ್ ಕಾರ್ಯನಿರ್ವಹಣಾಧಿಕಾರಿ ರಮಣ್ ರೆಡ್ಡಿ, ಬ್ಯಾಂಕ್ ವ್ಯವಸ್ಥಾಪಕಿ ಕೀರ್ತಿಪ್ರಭ, ನಿರ್ದೇಶಕ ಜಿ.ಎಸ್.ರವಿ, ತುಮುಲ್ ನಿರ್ದೇಶಕ ಎಸ್.ಆರ್.ಗೌಡ, ಎನ್.ಗಂಗಣ್ಣ, ಬಿ.ಜಿ.ವೆಂಕಟೇಗೌಡ, ಎಸ್.ಆರ್.ರಾಜ್‌ಕುಮಾರ್, ಲಕ್ಷ್ಮೀನಾರಾಯಣ್, ಹನುಮಾನ್, ದೇವರಾಜು, ತಿಮ್ಮರಾಜು, ಮಾಜಿ ಶಾಸಕ ಸಾಲಿಂಗಯ್ಯ, ಟಿ.ಡಿ.ಮಲ್ಲೇಶ್, ಎಸ್.ಡಿ.ಕಾಂತರಾಜು, ಜಿ.ಆರ್.ಕೃಷ್ಣಮೂರ್ತಿ, ಎಂ.ಟಿ.ರಂಗನಾಥ್, ಗ್ರಾಪಂ ಅಧ್ಯಕ್ಷೆ ಗೌರಮ್ಮಗಂಗಾಧರ್ ಇದ್ದರು.

ಬಿಎಸ್‌ವೈ ಸಹಕಾರ ಮರೆಯುವಂತಿಲ್ಲ: ರಾಜ್ಯದಲ್ಲಿ ವೋಟಿಗಾಗಿ ಮಣ್ಣಿನ ಮಕ್ಕಳು ಎಂದು ಹೇಳಿಕೊಂಡು ಅಧಿಕಾರ ಪಡೆದ ನಂತರ ಮಣ್ಣಿನ ಮಕ್ಕಳನ್ನು ಕಾಲಕಸದಂತೆ ಕಾಣುವ ನಕಲಿ ರಾಜಕಾರಣಿಗಳನ್ನು ನಂಬಬೇಡಿ ಎಂದು ಪರೋಕ್ಷವಾಗಿ ಮಾಜಿ ಪ್ರಧಾನಿ ದೇವೇಗೌಡ ಅವರನ್ನು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಟೀಕಿಸಿದರು. ಕಳೆದ ಸಂಸತ್ ಚುನಾವಣೆಯಲ್ಲಿ ದೇವೇಗೌಡರ ಸೋಲಿಗೆ ನಾನೇ ಕಾರಣ ಎಂದು ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಯನ್ನು ಸೂಪರ್ ಸೀಡ್ ಮಾಡಿ ರಾಜಕೀಯ ದ್ವೇಷ ಸಾಧಿಸಿದರು. ಆದರೆ ನ್ಯಾಯಾಲಯ ನಮ್ಮ ಪರವಾಗಿತ್ತು. ಇಂತ ಸನ್ನಿವೇಶದಲ್ಲಿ ಯಡಿಯೂರಪ್ಪ ಸಹಕಾರ ನೀಡಿದ್ದನ್ನು ಎಂದೂ ಮರೆಯುವಂತಿಲ್ಲ ಎಂದು ನೆನಪಿಸಿಕೊಂಡರು.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...