

ಬ್ರಹ್ಮಾವರ: ದೇವಾಡಿಗ ಸಮಾಜದವರ ಕುಲಮಾತೆ ಬಾರ್ಕೂರು ಶ್ರೀ ಏಕನಾಥೇಶ್ವರಿ ದೇವಸ್ಥಾನದಲ್ಲಿ ಫೆ.16ರಿಂದ 19ರವರೆಗೆ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ವಾರ್ಷಿಕ ವರ್ಧಂತ್ಯುತ್ಸವ ಜರುಗಲಿದೆ ಎಂದು ದೇವಸ್ಥಾನ ಕಾರ್ಯಕಾರಿ ಸಮಿತಿ ಕಾರ್ಯಾಧ್ಯಕ್ಷ ಜನಾರ್ದನ ಪಡುಪಣಂಬೂರು ತಿಳಿಸಿದರು.
16ರಂದು ಮಧ್ಯಾಹ್ನ 3.30ಕ್ಕೆ ಬಾರಕೂರು ಸೇತುವೆ ಬಳಿಯಿಂದ ರಥಬೀದಿ ಮೂಲಕ ಹಸಿರು ಹೊರೆಕಾಣಿಕೆ ಮೆರವಣಿಗೆ, 18ರಂದು ಸೂರ್ಯೋದಯದಿಂದ ಸೂರ್ಯಾಸ್ತದ ತನಕ ದೇವಾಡಿಗ ಸಂಘದಿಂದ ಭಜನಾ ಕಾರ್ಯಕ್ರಮ, ಬೆಳಗ್ಗೆ ಸಾಮೂಹಿಕ ಚಂಡಿಕಾಯಾಗ, 10 ಗಂಟೆಗೆ ವಧು- ವರರ ನೋಂದಣಿ ಮತ್ತು ವಧು ವರಾನ್ವೇಷಣೆ, ತುಲಾಭಾರ ಸೇವೆ, ಮಧ್ಯಾಹ್ನ 1 ಗಂಟೆಗೆ ಅನ್ನಸಂತರ್ಪಣೆ, ಸಾಂಸ್ಕೃತಿಕ ಕಾರ್ಯಕ್ರಮ, 2.30ರಿಂದ ವಿಶ್ವ ದೇವಾಡಿಗ ಮಹಾಮಂಡಳ ವಾರ್ಷಿಕ ಮಹಾಸಭೆ ಮತ್ತು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಾದ್ಯ ಕಲಾವಿದರನ್ನು ಗೌರವಿಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ದೇವಸ್ಥಾನ ಕಾರ್ಯಕಾರಿ ಸಮಿತಿ ಉಪಾಧ್ಯಕ್ಷ ಯಾದವ ದೇವಾಡಿಗ ಹಳೆಯಂಗಡಿ, ಗೌರವ ಕಾರ್ಯದರ್ಶಿ ಗಣೇಶ್ ದೇವಾಡಿಗ ಅಂಬಲಪಾಡಿ, ಉಪಾಧ್ಯಕ್ಷ ಸುರೇಶ ಕೊಡವೂರು, ಕಾರ್ಯಕಾರಿ ಸಮಿತಿ ಸದಸ್ಯ ವೇಣುಗೋಪಾಲ್ ಬ್ರಹ್ಮಾವರ ಉಪಸ್ಥಿತರಿದ್ದರು.