More

    ತಡೆಗೋಡೆ ತೆರವಿಗೆ ಒತ್ತಾಯ


    ಮುನವಳ್ಳಿ: ಕಳಸಾ ಬಂಡೂರಿ ನಾಲಾಗೆ ಇರುವ ತಡೆಗೋಡೆ ತೆರವುಗೊಳಿಸಿ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಆಗ್ರಹಿಸಿ ನವಿಲುತೀರ್ಥ ಮಲಪ್ರಭಾ ಡ್ಯಾಮ್‌ಸೈಟ್‌ದಲ್ಲಿ ಪ್ರಗತಿ ಪರಿಶೀಲನಾ ಸಭೆಗೆ ಆಗಮಿಸಿದ್ದ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಕಳಸಾ ಬಂಡೂರಿ ಹೋರಾಟ ಸಮಿತಿ ಪದಾಧಿಕಾರಿಗಳು ಮನವಿ ಸಲ್ಲಿಸಿದರು.

    ಕಳಸಾ ಬಂಡೂರಿ ಹೋರಾಟ ಸಮಿತಿ ಅಧ್ಯಕ್ಷ ವಿಜಯ ಕುಲಕರ್ಣಿ ಮಾತನಾಡಿ, ನ್ಯಾಯಪೀಠ ಹಾಗೂ ಇಲಾಖೆಗಳ ಅನುಮತಿ ಇದ್ದರೂ ಕರೊನಾ ಕಾರಣ ಹೇಳಿ ತಡೆಗೋಡೆ ತೆರವುಗೊಳಿಸದಿರುವುದು. ಬಂಡೂರಿ ನಾಲಾಗೆ ಟೆಂಡರ್ ಕರೆಯದಿರುವುದು ಖೇದಕರ. ಜಲಸಂಪನ್ಮೂಲ ಸಚಿವರು ಉತ್ತರ ಕರ್ನಾಟಕದವರಿದ್ದು, ಈ ಸಂಬಂಧ ತ್ವರಿತವಾಗಿ ಕಾಮಗಾರಿ ಕೈಗೆತ್ತಿಕೊಂಡು ಸಮಸ್ಯೆ ಬಗೆಹರಿಸುವ ನಿರೀಕ್ಷೆ ಹೊಂದಿದ್ದೇವೆ. ಸಚಿವರು ಗಮನ ಹರಿಸಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯ ಎಂದರು.

    ಜಿಲ್ಲಾ ಸಂಚಾಲಕ ಶಿವಾನಂದ ಮೇಟಿ ಮಾತನಾಡಿ, ಬರುವ ದಿನಗಳಲ್ಲಿ ಮಲಪ್ರಭಾ ನದಿ ಪ್ರವಾಹ ನಿಯಂತ್ರಣ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಬೇಕೆಂದು ಕೋರಿದರು. ಹೋರಾಟ ಸಮಿತಿ ಸದಸ್ಯರಾದ ಉಮೇಶ ಬಾಳಿ, ಶಂಕರ ಅಂಬಲಿ, ಶಂಕರ ವಣ್ಣೂರ, ಸೇರಿ ಮತ್ತಿತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts