ನ. 20ರಂದು ರಾಜ್ಯಾದ್ಯಂತ ಮದ್ಯದಂಗಡಿಗಳು ಬಂದ್​; ಹೀಗಿದೆ ಕಾರಣ

Bar
Published on

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರ, ವರ್ಗಾವಣೆ, ಪ್ರಮೋಷನ್​ಗೆ ಸನ್ನದುದಾರರಿಂದ ಲಂಚ ಸ್ವೀಕರಿಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಮದ್ಯ ಮಾರಾಟಗಾರರು ನವೆಂಬರ್​ 20ರಂದು ರಾಜ್ಯಾದ್ಯಂತ ಬಾರ್​ಗಳ (Bar) ಬಂದ್​ ನಡೆಸುವುದಾಗಿ ಘೋಷಿಸಿದ್ದಾರೆ.

ಅಬಕಾರಿ ಇಲಾಖೆಯಲ್ಲಿ ಕೋಟಿ ಕೋಟಿ ಲಂಚ ಸ್ವೀಕಾರ ಎಂದು ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ರಾಜ್ಯ ಬಿಜೆಪಿ ಮತ್ತು ಕೇಂದ್ರದ ನಾಯಕರು ಕಾಂಗ್ರೆಸ್​ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಇದೀಗ ಮದ್ಯ ಮಾರಾಟಗಾರರ ಸಂಘ ಭ್ರಷ್ಟಾಚಾರ ಖಂಡಿಸಿ, ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನವೆಂಬರ್ 20ರಂದು ಮದ್ಯ ಮಾರಾಟ ಬಂದ್ (Bar Close) ಮಾಡಲು ನಿರ್ಧರಿಸಿದ್ದು, ನವೆಂಬರ್​ 20ರಂದು ಬಂದ್​ಗೆ ಕರೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ರಾಜ್ಯ ಮದ್ಯ ಮಾರಾಟಗಾರರ ಸಂಘದ ಪ್ರದಾನ ಕಾರ್ಯದರ್ಶಿ ಗೋವಿಂದರಾಜ್​, ಅಬಕಾರಿ ಇಲಾಖೆಯಲ್ಲಿ ಲಂಚದ ಆಟ ಮಿತಿಮಿತಿ ಮೀರಿ ಹೋಗಿದೆ. ಇದನ್ನು ಸಹಿಸಿಕೊಳ್ಳಲು ಸಾದ್ಯವಾಗುತ್ತಿಲ್ಲ. ಹೀಗಾಗಿ ಇದೇ ನವೆಂಬರ್ 20ರಂದು ರಾಜ್ಯಾದ್ಯಂತ ಎಂಎಸ್‌ಐಎಲ್‌ ಹೊರತುಪಡಿಸಿ ಮಿಕ್ಕಿದ ಎಲ್ಲಾ ಮದ್ಯ ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತೇವೆ.

andra

ಅಧಿಕಾರಿಗಳಿಂದ ಆಗುತ್ತಿರುವ ಕಿರುಕುಳ ತಪ್ಪಿಸಿ ಮತ್ತು ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನವೆಂಬರ್‌ 20ರಂದು ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧಿಸಲು ತೀರ್ಮಾನ ಮಾಡಿದ್ದೇವೆ. ಇನ್ನು ವರ್ಗಾವಣೆ ಆದಂತಹ ಅಧಿಕಾರಿಗಳು ನೇರವಾಗಿ ಬಂದು ನಾವು ಲಂಚ ಕೊಟ್ಟು ಬಂದಿದ್ದೇವೆ ಎಂದು ಹೇಳಿ ಹಣ ಕೇಳುತ್ತಾರೆ ಎಂದು ಆರೋಪಿಸಿದ್ದಾರೆ.

ಇದೊಂದು ಅನುದಾನ ಇಲ್ಲದ ಇಲಾಖೆ, ಇದರಿಂದ ಹಣಕಾಸು ಸಚಿವರ ಬಳಿಯೇ ಈ‌ ಇಲಾಖೆ ಇರಲಿ ಅನ್ನೋದು ನಮ್ಮ ಬೇಡಿಕೆಯಾಗಿದೆ. ನಾವು ಸರ್ಕಾರಕ್ಕೆ ಮನವಿ ಮಾಡಿರುವುದು ನಿಜ, ಅವ್ಯವಹಾರ ಇರುವುದು ಸಹ ನಿಜ. ಆದರೆ, ನಾವು ರಾಜ್ಯಪಾಲರಿಗಾಗಲಿ, ಮೋದಿಗಾಗಲಿ ದೂರು ಕೊಟ್ಟಿಲ್ಲ. ತಪ್ಪು ಮಾಹಿತಿಯನ್ನು ಪ್ರಧಾನಿಗೆ ಯಾರು ಕೊಟ್ಟರೋ ಗೊತ್ತಿಲ್ಲ. ಪ್ರಧಾನಿ ವಿಚಾರದ ಬಗ್ಗೆ ಏನೂ ಹೇಳಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net