ಬಿಜೆಪಿಯಿಂದ ಬಸನಗೌಡ ಪಾಟೀಲ್​ ಯತ್ನಾಳ್​ ಉಚ್ಛಾಟನೆ | Yatnal

dk - 2025-03-26T173947.692
Published on

ಬೆಂಗಳೂರು: ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್( Yatnal) ಅವರನ್ನು ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.

ಪಕ್ಷದ ಶಿಸ್ತಿನ್ನು ಪದೇಪದೆ ಉಲ್ಲಂಘಿಸುತ್ತಿರುವುದನ್ನು ರಾಷ್ಟ್ರೀಯ ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ ಹೀಗಾಗಿ, ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಶಾಸಕ ಯತ್ನಾಳ್​ ಬಹಿರಂಗವಾಗಿಯೇ ಸದಾ ಆರೋಪಗಳನ್ನು ಮಾಡುತ್ತಿದ್ದರು. ಅಲ್ಲದೆ, ತಮ್ಮದೇ ತಂಡವನ್ನು ಕಟ್ಟಿಕೊಂಡು ಬಹಿರಂಗವಾಯಿಯೇ ಸಭೆಗಳನ್ನು ಮಾಡುತ್ತಿದ್ದರು. ಇದರಿಂದ ಹೈಕಮಾಂಡ್​ ಕೂಡ ಯತ್ನಾಳ್​ಗೆ​ ಶಿಸ್ತು ಕ್ರಮದ ಬಗ್ಗೆ ಹಲವಾರು ಬಾರಿ ನೋಟಿಸ್​ ಜಾರಿ ಮಾಡಲಾಯಿತ್ತು. ಆದರೆ, ಹೈಕಮಾಂಡ್​ ನೋಟಿಸ್​ಗೂ ಸೈಲೆಂಟ್​ ಆಗದ ಯತ್ನಾಳ್​, ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧ ಆರೋಪ ಮತ್ತು ವಾಗ್ಧಾಳಿ ಮುಂದುವರೆಸಿದ್ದರು. ಈ ಹಿನ್ನೆಲೆ ಇದೀಗ ಹೈಕಮಾಂಡ್​ ಗಂಭೀರವಾಗಿ ಪರಿಗಣಿಸಿದ್ದು, ಪಕ್ಷದಿಂದ ಉಚ್ಛಾಟನೆ ಮಾಡಿದೆ. ಈ ಮೂಲಕ ರಾಜ್ಯ ಬಿಜೆಪಿಯಲ್ಲಿನ ಬಣಬಡಿದಾಟಕ್ಕೆ ಕೊನೆಗೂ ಹೈಕಮಾಂಡ್​ ಬ್ರೇಕ್ ಹಾಕಿದೆ.

ಆದೇಶದಲ್ಲೀನಿದೆ..?

ಪಕ್ಷದ ಕೇಂದ್ರ ಶಿಸ್ತು ಸಮಿತಿಯು ಶೋಕಾಸ್‌ಗೆ ನಿಮ್ಮ ಪ್ರತಿಕ್ರಿಯೆಯನ್ನು ಪರಿಗಣಿಸಿದೆ. ಹಿಂದಿನ ಶೋಕಾಸ್ ನೋಟಿಸ್‌ಗಳಿಗೆ ಪ್ರತಿಕ್ರಿಯೆಯಾಗಿ ಉತ್ತಮ ನಡವಳಿಕೆ ಮತ್ತು ನಡವಳಿಕೆಯ ಭರವಸೆಗಳನ್ನು ನೀಡಿದ್ದರೂ ಸಹ ,ನಿಮ್ಮ ಪುನರಾವರ್ತಿತ ಉಲ್ಲಂಘನೆಗಳನ್ನು ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ, ಅದರಂತೆ ತಕ್ಷಣವೇ ಜಾರಿಗೆ ಬರುವಂತೆ 6 [ಆರು] ವರ್ಷಗಳ ಅವಧಿಗೆ ನಿಮ್ಮನ್ನು ಹೊರಹಾಕಲು ನಿರ್ಧರಿಸಲಾಗಿದೆ. ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಮತ್ತು ನೀವು ಯಾವುದೇ ಪಕ್ಷದ ಸ್ಥಾನದಿಂದ ತೆಗೆದುಹಾಕಲ್ಪಟ್ಟಿದೆ ಎಂದು ಎಂದು ಬಿಜೆಪಿ ಕೇಂದ್ರ ಶಿಸ್ತು ಸಮಿತಿಯ ಕಾರ್ಯದರ್ಶಿ ಓಂ ಪಾಠಕ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net