More

    ರಾಜ್ಯದಲ್ಲಿ ಹಿಜಾಬ್ ನಿಷೇಧ ವಾಪಸ್; ಸಿಎಂ ಸಿದ್ದರಾಮಯ್ಯ ಟಿಪ್ಪುವಿನ ಎರಡನೇ ಅವತಾರ: ಬಸನ್​​ಗೌಡ ಪಾಟೀಲ್​ ಯತ್ನಾಳ್

    ವಿಜಯಪುರ: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಮಾನತೆ ಇರಲಿ ಎಂಬ ಕಾರಣಕ್ಕೆ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸದಂತೆ ಆದೇಶ ಹೊರಡಿಸಲಾಗಿತ್ತು. ಆದರೆ, ಸಿಎಂ ಸಿದ್ದರಾಮಯ್ಯ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್​ ನಿಷೇಧವನ್ನು ಹಿಂಪಡೆಯುವ ಮೂಲಕ ತಾವು ಟಿಪ್ಪುವಿನ ಎರಡನೇ ಅವತಾರವೆಂಬುದನ್ನು ನಿರೂಪಿಸಿದ್ದಾರೆ ಎಂದು ಬಿಜೆಪಿ ಶಾಸಕ ಬಸನ್​ಗೌಡ ಪಾಟೀಲ್​ ಯತ್ನಾಳ್​ ವಾಗ್ದಾಳಿ ನಡೆಸಿದ್ದಾರೆ.

    ಸಂವಿಧಾನ ಶಿಲ್ಪಿ ಬಾಬಾಸಾಹೇಬ್​ ಡಾ.ಬಿ. ಆರ್. ಅಂಬೇಡ್ಕರ್ ಅವರು ಹಿಂದೆ ಸಮವಸ್ತ್ರದ ಕಾಯ್ದೆ ಮಾಡಿದ್ದರು. ಈ ರೀತಿ ಅವರವರಿಗೆ ತಿಳಿದಿದ್ದನ್ನ ಅವರು ಧರಿಸಿ ಬರೋದಾದರೆ, ನಾಳೆ ಹಿಂದೂ ಸಮುದಾಯದ ವಿದ್ಯಾರ್ಥಿಗಳು ಕೇಸರಿ ಶಾಲು, ಹಣೆಗೆ ತಿಲಕ ಇಟ್ಟುಕೊಂಡು ಬರುತ್ತಾರೆ. ಇದು ಸಂಘರ್ಷಕ್ಕೆ ಹಾದಿ ಮಾಡಿ ಕೊಡುತ್ತದೆ ಎಂದು ಎಚ್ಚರಿಸಿದ್ದಾರೆ.

    ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ಅವರನ್ನ ಸಿಎಂ ಮಾಡದ ಕಾಂಗ್ರೆಸ್ ಪಿಎಂ ಮಾಡ್ತಾರಾ?: ಕೆ.ಎಸ್. ಈಶ್ವರಪ್ಪ

    ಸಿದ್ದರಾಮಯ್ಯನವರು ಹಿಜಾಬ್ ಧರಿಸಬಹುದು ಎಂದು ಹೇಳುತ್ತಾ ಯಾರು ಯಾವ ಬಟ್ಟೆಯಾದರೂ ಧರಿಸಲು ಅವಕಾಶವಿದೆ ಎಂದು ಹೇಳಿದ್ದಾರೆ. ಸಿದ್ದರಾಮಯ್ಯನವರಿಗೆ ಮಾಹಿತಿಯ ಕೊರತೆ ಇದೆ, ರಾಜ್ಯದಲ್ಲಿ ಹಿಜಾಬ್ ನಿಷೇಧಿಸಿದ ಯಾವ ಆದೇಶವೂ ಇಲ್ಲ, ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ನೀತಿಯನ್ನು ಜಾರಿ ಮಾಡಿದ್ದು ಸ್ಥಳೀಯ ಕಾಲೇಜುಗಳು ನಿರ್ಧಾರ ಮಾಡಬಹುದು ಎಂದು ಕರ್ನಾಟಕ ಉಚ್ಚ ನ್ಯಾಯಾಲಯ ಹೇಳಿದ್ದರೂ, ರಾಜಕಾರಣಕ್ಕಾಗಿ ಶಾಲಾ ಕಾಲೇಜುಗಳ ಸಮವಸ್ತ್ರ ನೀತಿಯನ್ನೂ ಅಮಾನತು ಮಾಡುವ ಕೆಲಸವನ್ನು ಸಿದ್ದರಾಮಯ್ಯನವರು ಮಾಡುತ್ತಿದ್ದಾರೆ.

    ಓಲೈಕೆ ರಾಜಕಾರಣಕ್ಕೇನಾದರೂ ಮತ್ತೊಂದು ಹೆಸರು ಇದ್ದರೇ ಅದು ಕಾಂಗ್ರೆಸ್ ಪಕ್ಷ. ರಾಜ್ಯಾದ್ಯಂತ ಹಿಂದೂ ವಿದ್ಯಾರ್ಥಿಗಳೂ ಯಾವ ಬಟ್ಟೆಯಾದರೂ ಧರಿಸಿ ಕೇಸರಿ ಶಾಲು ಸಮೇತ ತರಗತಿಗಳಲ್ಲಿ ಭಾಗವಹಿಸುತ್ತಾರೆ, ಅವರಿಗೆ ಯಾವ ಕಿರುಕುಳ ನೀಡಬಾರದು ಎಂದು ಆಗ್ರಹಿಸುತ್ತಿದ್ದೇನೆ. ರಾಜ್ಯಾದ್ಯಂತ ಶಾಲಾ ಕಾಲೇಜುಗಳಲ್ಲಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ತರಗತಿಗಳಲ್ಲಿ ಭಾಗವಹಿಸಲು ನಾನು ಕರೆ ಕೊಡುತ್ತಿದ್ದೇನೆ. ಅವರಿಗಿಲ್ಲದ ಸಮವಸ್ತ್ರ ನೀತಿ ಹಿಂದೂಗಳಿಗೂ ಇಲ್ಲ ಎಂದು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts