More

    ಬಸವ ಜಯಂತಿ ಸರಳ ಆಚರಣೆಗೆ ನಿರ್ಧಾರ

    ರಾಮದುರ್ಗ: ಕರೊನಾ ವೈರಸ್ ಹರಡುವಿಕೆ ಪ್ರತಿದಿನ ಹೆಚ್ಚಾಗುತ್ತಿದ್ದು, ಪ್ರತಿಯೊಬ್ಬರೂ ಸಾಮಾಜಿಕ ಅಂತರ ಕಾಯ್ದುಕೊಂಡರೆ ಮಾತ್ರ ಇದನ್ನು ತಡೆಯಬಹುದಾಗಿದೆ. ಜನಸಂದಣಿ ಉಂಟಾಗುವುದನ್ನು ತಪ್ಪಿಸಲು ಈ ಬಾರಿ ಬಸವೇಶ್ವರ ಜಯಂತಿಯನ್ನು ಸರಳವಾಗಿ ಆಚರಣೆ ಮಾಡಲು ನಿರ್ಧರಿಸಲಾಗಿದೆ ಎಂದು ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು.

    ಪಟ್ಟಣದ ಮಿನಿ ವಿಧಾನಸೌಧ ಕಾರ್ಯಾಲಯದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿ, ಏ.26ರಂದು ಬಸವೇಶ್ವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಬಸವ ಜಯಂತಿ ಆಚರಿಸಲಾಗುವುದು. ಪರಮಾತ್ಮನ ದಯೆಯಿಂದ ರೋಗ ತೊಲಗಿ ಮುಂದಿನ ವರ್ಷ ವಿಜೃಂಭಣೆಯಿಂದ ಜಯಂತಿ ಆಚರಿಸೋಣ ಎಂದರು. ಬಳಿಕ ಬಾಬು ಜಗಜೀವನರಾಮ್ ಜಯಂತಿ ಆಚರಿಸಲಾಯಿತು. ಶಾಸಕ ಮಹಾದೇವಪ್ಪ ಯಾದವಾಡ ಜಗಜೀವನರಾಮ್ ಭಾವಚಿತ್ರಕ್ಕೆ ಪೂಜೆ ನೆರವೇರಿಸಿದರು. ತಹಸೀಲ್ದಾರ್ ಗಿರೀಶ ಸ್ವಾದಿ, ಬಿ.ಆರ್. ದೊಡಮನಿ ಹಾಗೂ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಇತರರು ಇದ್ದರು.

    ನೇಸರಗಿ ವರದಿ: ಗ್ರಾಮದ ದುರ್ಗಾದೇವಿ ದೇವಸ್ಥಾನದಲ್ಲಿ ಸ್ಥಳೀಯ ಜೈ ಭೀಮ ಸಮಿತಿ ವತಿಯಿಂದ ಭಾನುವಾರ ಹಸಿರುಕ್ರಾಂತಿ ಹರಿಕಾರ, ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಮ್ ಅವರ 113ನೇ ಜನ್ಮ ದಿನವನ್ನು ಸರಳವಾಗಿ ಆಚರಿಸಲಾಯಿತು. ಜೈ ಭೀಮ ಸಮಿತಿ ರಮೇಶ ರಾಯಪ್ಪಗೊಳ ಪೂಜೆ ನೆರವೇರಿಸಿ ಮಾತನಾಡಿ, ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್ ಅವರ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು. ದೇಶಾದ್ಯಂತ ಹರಡುತ್ತಿರುವ ಮಹಾಮಾರಿ ಕರೊನಾ ವೈರಸ್ ನಿಯಂತ್ರಿಸುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು ಎಂದರು. ಶಿವನಪ್ಪ ಮದೇನ್ನವರ, ಬಾಳಪ್ಪ ಮಾಳಗಿ, ದಿಲೀಪ ಲೆಂಕನಟ್ಟಿ, ಶಿಕ್ಷಕ ಪ್ರಕಾಶ ರಾಯಪ್ಪಗೋಳ, ತಿಪ್ಪಣ್ಣ ಹಮ್ಮನ್ನವರ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts