ಗುಂಡ್ಲುಪೇಟೆ: ತಾಲೂಕಿನ ಚಿಕ್ಕತುಪ್ಪೂರು ಗ್ರಾಮದಲ್ಲಿ ಸೋಮವಾರ ರಾತ್ರಿ ಬಸವ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಈ ಅಂಗವಾಗಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ತಳಿರು-ತೋರಣಗಳನ್ನು ಕಟ್ಟಿ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ಗ್ರಾಮದ ಶಿವಪೂಜಾ ಮಠದಿಂದ ಅಲಂಕೃತ ವಾಹನದಲ್ಲಿ ಬಸವೇಶ್ವರರ ಭಾವಚಿತ್ರವನ್ನು ಇರಿಸಿ ವೀರಗಾಸೆ, ಜನಪದ ಕಲಾತಂಡಗಳು ಹಾಗೂ ಮಂಗಳವಾದ್ಯಗಳೊಂದಿಗೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಪ್ರತಿಯೊಂದು ಮನೆಯವರೂ ಪೂಜೆ ಸಲ್ಲಿಸುವ ಮೂಲಕ ದೇವರ ಕೃಪೆಗೆ ಪಾತ್ರರಾದರು. ಕೊನೆಯಲ್ಲಿ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡಲಾಯಿತು. ಗ್ರಾಮದ ಯುವಕರು, ಯಜಮಾನರು ಹಾಗೂ ಮುಖಂಡರು ಇದ್ದರು.