More

    ಸಚಿವ ಸಂಪುಟದಲ್ಲಿ ಸರ್ಕಾರ ಗಟ್ಟಿ ನಿರ್ಧಾರ ತೆಗೆದುಕೊಳ್ಳಲಿ: ಬಸವಜಯ ಮೃತ್ಯುಂಜಯ ಶ್ರೀಗಳ ಒತ್ತಾಯ

    ಬೆಂಗಳೂರು: ಪಂಚಮಸಾಲಿ ಸಮುದಾಯದವರಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಚೇರಿಯಿಂದ ದೂರವಾಣಿ ಕರೆ ಬಂದಿದ್ದು, ನಮ್ಮ ಬೇಡಿಕೆ ಈಡೇರಿಸುವುದಾಗಿ ಭರವಸೆ ಕೊಟ್ಟಿದ್ದಾರೆ ಎಂದು ಕೂಡಲಸಂಗಮ ಪೀಠದ ಪ್ರಥಮ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಮೀಜಿ ಹೇಳಿದ್ದಾರೆ.

    ಗುರುವಾರ ಸುದ್ದಿಗೋಷ್ಠಿಯಲ್ಲಿ ಶ್ರೀಗಳು ಮಾತನಾಡಿ, ಪಿಎಂ ಕಚೇರಿಯಿಂದ ಮೀಸಲಾತಿ ಬಗ್ಗೆ ಮಾಹಿತಿ ಕೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ,ಶುಕ್ರವಾರ(ೆ.24) ನಡೆಯಲಿರುವ ಸಚಿವ ಸಂಪುಟದಲ್ಲಿ ಗಟ್ಟಿ ನಿರ್ಧಾರ ತೆಗೆದುಕೊಂಡು ರಾಜ್ಯಪತ್ರ ಹೊರಡಿಸಬೇಕು. ಇದರಿಂದ ನಮ್ಮ ಮೀಸಲಾತಿ ಹೋರಾಟಕ್ಕೆ ತಾರ್ಕಿಕ ಅಂತ್ಯ ಸಿಗುವಂತಾಗಲಿದೆ. ನಮ್ಮ ಸಮಾಜಕ್ಕೆ ಮೀಸಲಾತಿ ನೀಡಲು ಇದ್ದಿದ್ದ ಅಡೆತಡೆಯನ್ನು ಹೈಕೋರ್ಟ್ ತೆರವುಗೊಳಿಸಿದೆ. ಇದರ ಪರಿಣಾಮ ನಮಗೆ ಮೀಸಲಾತಿ ಸಿಗುವ ಆಶಾಭಾವನೆ ಇನ್ನಷ್ಟು ಹೆಚ್ಚಿದೆ ಎಂದರು.

    ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮೀಸಲಾತಿ ಬಗ್ಗೆ ಮುತುವರ್ಜಿ ವಹಿಸುವುದರಿಂದ ನಮ್ಮ ಹೋರಾಟದ ಜಯದ ಆರಂಭಕ್ಕೆ ಮುನ್ನಡಿ ಬರೆದಿದ್ದಾರೆ. ಆದ್ದರಿಂದ, ಇಬ್ಬರಿಗೆ ನಾವು ಅಭಿನಂದನೆ ಸಲ್ಲಿಸಲಾಗುವುದು. ಸಚಿವ ಸಂಪುಟ ನಡೆದ ಬಳಿಕ ಶನಿವಾರ (ಫೆ.25) ಸಂಜೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪಂಚಮಸಾಲಿ ಚಳುವಳಿಗಾರರ ಹಾಗೂ ಪದಾಧಿಕಾರಿಗಳ ರಾಜ್ಯ ಕಾರ್ಯಕಾರಣಿ ಸಭೆ ನಡೆಸಲಾಗುವುದು. ಇದರಲ್ಲಿ ಮೀಸಲಾತಿ ಕುರಿತು ಚರ್ಚೆ ನಡೆಸಲಾಗುವುದು. ಪ್ರವರ್ಗ ‘3ಬಿ’ಯಿಂದ ಪ್ರವರ್ಗ ‘2ಎ’ಗೆ ಸೇರ್ಪಡೆ ಬೇಕೆಂಬ ಒತ್ತಾಯ ಇತ್ತು. ಆದರೆ, ನಮ್ಮ ಸಮುದಾಯಕ್ಕೆ ಸರ್ಕಾರ ‘ಪ್ರವರ್ಗ 2ಡಿ’ಗೆ  ಸೇರ್ಪಡೆ ಮಾಡಲಾಗಿದ್ದು, ಕೊನೆ ಸಚಿವ ಸಂಪುಟದಲ್ಲಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಪ್ರಮಾಣ  ಹೆಚ್ಚಿಸಬೇಕೆಂದು ಸರ್ಕಾರಕ್ಕೆ ಶ್ರೀಗಳು ಒತ್ತಾಯಿಸಿದ್ದಾರೆ.

    “ಸರ್ಕಾರದ ಕೊನೆಯ ಸಚಿವ ಸಂಪುಟದಲ್ಲಿ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವ ಬಗ್ಗೆ ನಿರ್ಣಯ ತೆಗೆದುಕೊಳ್ಳಬೇಕು.ಜನಸಂಖ್ಯೆ ಅನುಗುಣವಾಗಿ ಪಂಚಮಸಾಲಿ ಸೇರಿ ಎಲ್ಲ ಸಮುದಾಯಗಳಿಗೂ ಮೀಸಲಾತಿ ಕಲ್ಪಿಸಬೇಕು. ಮಧ್ಯಂತರ ಆದೇಶ ಹೊರಡಿಸಿರುವ ಹೈಕೋರ್ಟ್‌ನಲ್ಲಿ ನಡೆದಿರುವ ವಿಚಾರಣೆ ಬಗ್ಗೆ ವಕೀಲರಿಂದ ಮಾಹಿತಿ ಪಡೆಯಲಾಗುವುದು. ಮೀಸಲಾತಿಗಾಗಿ ಎರಡು ವರ್ಷ ಹೋರಾಟ ಹಾಗೂ 70 ದಿನ ಸತ್ಯಾಗ್ರಹ ನಡೆಸಲಾಗುತ್ತಿದೆ”: ಬಸವಜಯ ಮೃತ್ಯುಂಜಯ ಸ್ವಾಮೀಜಿ. ಕೂಡಲಸಂಗಮ ಪೀಠದ ಪ್ರಥಮ ಜಗದ್ಗುರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts