More

    ಅತಿಕ್ರಮಣ ತಡೆಗೆ ಕಠಿಣ ಕ್ರಮ ಕೈಗೊಳ್ಳಿ

    ಬಸವಕಲ್ಯಾಣ: ನಗರದ ಬಡಾವಣೆಗಳಲ್ಲಿ ಉದ್ಯಾನ ಹಾಗೂ ವಿವಿಧ ಉದ್ದೇಶಗಳಿಗಾಗಿ ಕಾಯ್ದಿರಿಸಲಾದ ನಿವೇಶನಗಳಲ್ಲಿ ನಡೆಯುತ್ತಿರುವ ಅತಿಕ್ರಮಣ ತಡೆಯಲು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಎಂಎಲ್ಸಿ ವಿಜಯಸಿಂಗ್ ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.

    ನಗರದ ಬಿರಾದಾರ ಕಾಲನಿ, ಆಟೋ ನಗರ ಸೇರಿ ವಿವಿಧ ಬಡಾವಣೆಗಳಲ್ಲಿ ಸಿಎ ಸೈಟ್‌ಗಳಲ್ಲಿ ಅತಿಕ್ರಮಣ ಮಾಡಲಾಗುತ್ತಿದೆ ಎನ್ನುವ ದೂರಿನ ಹಿನ್ನೆಲೆಯಲ್ಲಿ ಶನಿವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಅತಿಕ್ರಮಣಕ್ಕೆ ಅವಕಾಶ ನೀಡಬಾರದು. ಅತಿಕ್ರಮಣ ಮಾಡಲಾದ ನಿವೇಶನಗಳನ್ನು ತೆರವುಗೊಳಿಸಿ ನಗರಸಭೆ ಅಧೀನಕ್ಕೆ ತಗೆದುಕೊಳ್ಳಬೇಕೆಂದು ಸ್ಥಳದಲ್ಲಿದ್ದ ನಗರಸಭೆ ಪೌರಾಯುಕ್ತರಿಗೆ ಹೇಳಿದರು.

    ನಗರದಲ್ಲಿ ಸಿಎ ಸೈಟ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡುವ ಜಾಲ ಸಕ್ರಿಯವಾಗಿದೆ. ಇಂಥವರಿಂದ ಜನರು ಜಾಗೃತರಾಗಿಬೇಕು. ನಗರದಲ್ಲಿ ನಿವೇಶನ ಖರೀದಿಸುವ ಮುನ್ನ ಜನರು ಅದಕ್ಕೆ ಸಂಬಂಧಿಸಿದ ಮೂಲ ದಾಖಲೆಗಳನ್ನು ಪರಿಶೀಲಿಸಿ ಖರೀದಿಸಬೇಕೆಂದು ತಿಳಿಸಿದರು.

    ನಗರಸಭೆ ಪೌರಾಯುಕ್ತ ಮನೋಜಕುಮಾರ ಕಾಂಬಳೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನೀಲಕಂಠ ರಾಠೋಡ್, ಪ್ರಮುಖರಾದ ಓಂಪ್ರಕಾಶ್ ಪಾಟೀಲ್, ಸಂತೋಷ ಗುತ್ತೇದಾರ್, ಮಹ್ಮದ್ ಮೋಸಿನ್, ಖಲೀಲ್ ಅಹ್ಮದ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts