26.8 C
Bangalore
Friday, December 13, 2019

ದುರಾಸೆಯಿಂದ ಭ್ರಷ್ಟ್ಟಾಚಾರ ಹೆಚ್ಚಳ

Latest News

ಶಬರಿಮಲೆ ವಿಚಾರದಲ್ಲಿ ಸದ್ಯ ಯಾವುದೇ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್​

ನವದೆಹಲಿ: ಪೊಲೀಸ್​ ರಕ್ಷಣೆಯೊಂದಿಗೆ ಶಬರಿಮಲೆ ಅಯ್ಯಪ್ಪನ ಸನ್ನಿಧಿಯನ್ನು ಮಹಿಳೆಯರು ಸುರಕ್ಷಿತವಾಗಿ ಪ್ರವೇಶಿಸಲು ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಇಬ್ಬರು ಮಹಿಳಾ ಕಾರ್ಯಕರ್ತರು ಸಲ್ಲಿಸಿದ್ದ...

ತುಮಕೂರು ಸ್ಮಾರ್ಟ್‌ಸಿಟಿ ಜೆಎಂಡಿ ಎತ್ತಂಗಡಿ!

ತುಮಕೂರು: ಸ್ಮಾರ್ಟ್‌ಸಿಟಿ ಲಿಮಿಟೆಡ್ ಜಂಟಿ ವ್ಯವಸ್ಥಾಪಕ ನಿರ್ದೇಶಕ ವಿ.ಅಜಯ್ ಅವರನ್ನು ಎತ್ತಂಗಡಿ ಮಾಡಲಾಗಿದೆ. 3 ತಿಂಗಳ ಹಿಂದೇ ಸ್ಮಾರ್ಟ್‌ಸಿಟಿ ಎಂಡಿ ಜವಾಬ್ದಾರಿ ಹೊಣೆ ಹೊತ್ತಿದ್ದ ಮಹಾನಗರ...

ಕುಪ್ಪೂರು ಶ್ರೀ ಮರುಳಸಿದ್ದೇಶ್ವರ ಜಾತ್ರೆಗೆ ಸಿಎಂ ಯಡಿಯೂರಪ್ಪ ಚಾಲನೆ

ಚಿಕ್ಕನಾಯಕನಹಳ್ಳಿ: ಸುಕ್ಷೇತ್ರ ಕುಪ್ಪೂರು ಶ್ರೀಮರುಳಸಿದ್ದೇಶ್ವರ ಗದ್ದುಗೆ ಜಾತ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದ್ದು, ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಜಾತ್ರೆಗೆ ಬಂದಿದ್ದರು. ಶ್ರೀಮಠದ ಆವರಣದಲ್ಲಿ ಗುರುವಾರ...

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

ವಿಜಯಪುರ: ಸಮಾಜದಲ್ಲಿ ತೃಪ್ತಿ, ಮಾನವೀಯತೆ ಇಲ್ಲ. ಅತಿಯಾಸೆಯಿಂದ ಭ್ರಷ್ಟಾಚಾರವೂ ಮಿತಿ ಮೀರಿದೆ ಎಂದು ಮಾಜಿ ಲೋಕಾಯುಕ್ತ ಸಂತೋಷ ಹೆಗ್ಡೆ ಕಳವಳ ವ್ಯಕ್ತಪಡಿಸಿದರು.

ನಗರದ ಕಾಳಿದಾಸ ಶಿಕ್ಷಣ ಸಂಸ್ಥೆ ಆವರಣದಲ್ಲಿ ಕಾಳಿದಾಸ ಶಿಕ್ಷಣ ಸಂಸ್ಥೆ ಸಂಸ್ಥಾಪಕ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಎ ಜಿದ್ದಿ ಅವರ ಅಮೃತ ಮಹೋತ್ಸವ ಹಾಗೂ ಕರುಣಾಮಯಿ ಅಭಿನಂದನಾ ಗ್ರಂಥ ಸಮರ್ಪಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿ ಸ್ವಾರ್ಥ ಹೆಚ್ಚಾಗಿ ದುರಾಸೆಯೇ ತುಂಬಿಕೊಂಡಿದೆ. ಇದು ಬದಲಾಗಬೇಕಾದರೆ ಪ್ರತಿಯೊಬ್ಬರೂ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಮನುಷ್ಯನಲ್ಲಿ ದುರಾಸೆ ಹೆಚ್ಚಾಗಿರುವ ಕಾರಣ ವರ್ಷದಿಂದ ವರ್ಷಕ್ಕೆ ಭ್ರಷ್ಟಾಚಾರ ಹೆಚ್ಚುತ್ತಿದೆ. ಇಂದು ಪ್ರಜಾಪ್ರಭುತ್ವ ಉಳಿಸಲು ಹೋರಾಟ ಮಾಡುವುದು ಅನಿವಾರ್ಯವಾಗಿದೆ. ಭಾಷೆ, ಸಂಸ್ಕೃತಿ, ಧರ್ಮಗಳ ಆಧಾರದ ಮೇಲೆ ದೇಶವನ್ನು ಛಿದ್ರಗೊಳಿಸುತ್ತಿದ್ದಾರೆ. ಸಮಾಜ ಸಂಪೂರ್ಣ ಹಾಳಾಗಿದ್ದು, ಈ ವ್ಯವಸ್ಥೆಯನ್ನು ಯುವಕರು ಬದಲಾವಣೆ ಮಾಡಬೇಕು ಎಂದು ತಿಳಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಎ. ಜಿದ್ದಿ , ನಾನು ಭವಿಷ್ಯತ್ತಿನಲ್ಲಿ ಏನನ್ನೂ ಸಾಧಿಸುವುದಿಲ್ಲ. ತನ್ನಿಂದ ತಾನೇ ಪದವಿ, ಅಧಿಕಾರ ಹುಡುಕಿಕೊಂಡು ಬಂದಿವೆ. ಕಳೆದ ದಿನಗಳು ಮರಳಿ ಸಿಗುವುದಿಲ್ಲ. ಬದುಕು ಸುಂದರವಾಗಬೇಕಾದರೆ ಈಗಿನಿಂದಲೇ ಆತ್ಮವಿಶ್ವಾಸ ಬೆಳೆಸಿಕೊಂಡು ಗಟ್ಟಿ ಬದುಕನ್ನು ಕಟ್ಟಿಕೊಳ್ಳಬೇಕು ಎಂದರು.

ಸಿಕ್ಯಾಬ ಮಹಿಳಾ ವಿದ್ಯಾಲಯದ ಡಾ.ಶ್ರೀಕೃಷ್ಣ ಕಾಖಂಡಕಿ ಮಾತನಾಡಿ, ಎಸ್.ಎ ಜಿದ್ದಿ ಅವರು ಶಿಕ್ಷಣ, ಪ್ರಾಮಾಣಿಕ ರಾಜಕಾರಣದ ಪ್ರತೀಕ. ಅವರು ವಿಧಾನ ಪರಿಷತ್ ಸದಸ್ಯರಾಗಿ, ಕಾಳಿದಾಸ ಶಿಕ್ಷಣ ಸಂಸ್ಥೆ ಅಧ್ಯಕ್ಷರಾಗಿ, ಸರ್ಕಾರದ ವಿವಿಧ ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸಿ ಇಂದಿಗೂ ಸಮಾಜ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದಾರೆ. ಇಂತಹ ಸಾಧಕರ ಮಾರ್ಗದರ್ಶನ ಯುವ ಪೀಳಿಗೆಗೆ ಬೇಕು ಎಂದು ಹೇಳಿದರು.

ಸಿಂದಗಿ ಸಾರಂಗಮಠದ ಪ್ರಭುಸಾರಂಗದೇವ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ಮಾಜಿ ಶಾಸಕ ಆರ್.ಆರ್ ಕಲ್ಲೂರ, ಅಮೃತ ಮಹೋತ್ಸವ ಸಮಿತಿ ಗೌರವಾಧ್ಯಕ್ಷ ಡಾ.ಕಂಠೀರವ ಕುಲ್ಲೊಳ್ಳಿ, ಸಾಹಿತಿ ಮಹಾಂತ ಗುಲಗಂಜಿ, ಕೆ.ಆರ್. ನಾಗೋಡ, ಪ್ರೊ.ವಿ.ಡಿ. ವಸದ, ಕೆ.ಆರ್ ಜಾಧವ, ಎನ್.ಎಸ್ ಸಜ್ಜನ, ಎಸ್.ಪಿ ಬಿರಾದಾರ, ಐ.ಎನ್. ಕಂಬಾರ, ಡಾ.ರತ್ನಮಾಲಾ, ರಾಜು ಆಡೂರ ಮೊದಲಾದವರು ಪಾಲ್ಗೊಂಡಿದ್ದರು.

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....