20.4 C
Bangalore
Monday, December 9, 2019

ಭಾರತೀಯ ವಕೀಲರ ಪರಿಷತ್ ನಿರ್ಣಯಗಳ ಅನುಷ್ಠಾನಕ್ಕೆ ಆಗ್ರಹಿಸಿ ಪ್ರತಿಭಟನೆ

Latest News

ಬೈ ಎಲೆಕ್ಷನ್ ರಿಸಲ್ಟ್​| ವಿಜಯನಗರ ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ ಬಿಜೆಪಿಯ ಆನಂದ್ ಸಿಂಗ್​…

ಬಳ್ಳಾರಿ: ಗಣಿನಾಡಿನ ವಿಜಯನಗರ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಮೊದಲ ಸುತ್ತಿನ ಮತ ಎಣಿಕೆ ಮುಗಿದಾಗ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ...

ಮೊದಲ ಸುತ್ತಿನ ಮತಎಣಿಕೆ: ಹೊಸಕೋಟೆಯಲ್ಲಿ ಪಕ್ಷೇತರ ಶರತ್​ ಬಚ್ಚೇಗೌಡ, ಯಶವಂತಪುರದಲ್ಲಿ ಜೆಡಿಎಸ್​ ಜವರಾಯಿಗೌಡ ಮುನ್ನಡೆ

ಬೆಂಗಳೂರು: ಹೊಸಕೋಟೆ ವಿಧಾನಸಭಾ ಹಾಗೂ ಯಶವಂತಪುರ ಕ್ಷೇತ್ರದಲ್ಲಿ ಮೊದಲ ಸುತ್ತಿನ ಮತಎಣಿಕೆ ಪಕ್ರಿಯೆ ಮುಗಿದಿದೆ. ಹೊಸಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್​ ವಿರುದ್ಧ ಪಕ್ಷೇತರ...

ಬೈ ಎಲೆಕ್ಷನ್ ರಿಸಲ್ಟ್​| ಯಲ್ಲಾಪುರದಲ್ಲಿ ಮೂರನೇ ಸುತ್ತು ಮತ ಎಣಿಕೆ ಅಂತ್ಯ

ಕಾರವಾರ: ರಾಜ್ಯದ ಉಪಚುನಾವಣಾ ಸಮರದಲ್ಲಿ ಗಮನಸೆಳೆದಿರುವ ಯಲ್ಲಾಪುರ ಕ್ಷೇತ್ರದ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಮೂರನೇ ಸುತ್ತು ಮುಕ್ತಾಯವಾದಾಗ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ...

ರಾಣೇಬೆನ್ನೂರಿನಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಬಸವನಬಾಗೇವಾಡಿ: ವಕೀಲರ ಕ್ಷೇಮಾಭಿವೃದ್ಧಿಗಾಗಿ ಭಾರತೀಯ ವಕೀಲರ ಪರಿಷತ್ ಕೈಗೊಂಡ ನಿರ್ಣಯಗಳನ್ನು ಸಮರ್ಥಿಸಿ ಕೇಂದ್ರ ಸೇರಿ ರಾಷ್ಟ್ರದ ಎಲ್ಲ ಸರ್ಕಾರಗಳು ಅನುಷ್ಠಾನಗೊಳಿಸಬೇಕೆಂದು ಆಗ್ರಹಿಸಿ ಪಟ್ಟಣದ ವಕೀಲರು ಕೋರ್ಟ್ ಕಲಾಪದಿಂದ ದೂರುಳಿದು ಪ್ರತಿಭಟನಾ ರ‌್ಯಾಲಿ ನಡೆಸಿ ಶಿರಸ್ತೇದಾರ ಮೂಲಕ ಮುಖ್ಯಮಂತ್ರಿ ಹಾಗೂ ಪ್ರಧಾನಮಂತ್ರಿಗೆ ಮನವಿ ಸಲ್ಲಿಸಿದರು.

ಪಟ್ಟಣದ ವಕೀಲರ ಸಭಾಭವನದಲ್ಲಿ ವಕೀಲರ ಸಂಘದ ಅಧ್ಯಕ್ಷ ಎನ್.ಎಸ್. ಪಾಟೀಲ ಅಧ್ಯಕ್ಷತೆಯಲ್ಲಿ ಸಭೆ ನಡೆಸಿದ ವಕೀಲರು, ಭಾರತೀಯ ವಕೀಲರ ಪರಿಷತ್ ಜ. 22ರಂದು ಕೆಲ ನಿರ್ಣಯಗಳನ್ನು ತೆಗೆದುಕೊಂಡಿದ್ದು, ಅವುಗಳನ್ನು ಕೇಂದ್ರ ಸರ್ಕಾರ ಸೇರಿ ರಾಷ್ಟ್ರದ ಎಲ್ಲ ರಾಜ್ಯ ಸರ್ಕಾರಗಳು ಸಮರ್ಥಿಸಿ ಅನುಷ್ಠಾನಗೊಳಿಸ ಬೇಕೆಂದು ಠರಾವ್ ಪಾಸ್ ಮಾಡಲಾಯಿತು.

ಭಾರತೀಯ ವಕೀಲರ ಪರಿಷತ್ ನಿರ್ಣಯದಂತೆ ದೇಶಾದ್ಯಂತ ಎಲ್ಲ ವಕೀಲರ ಸಂಘಗಳಿಗೆ ಹಾಗೂ ಸದಸ್ಯರಿಗೆ ಸುಸಜ್ಜಿತ ಕಟ್ಟಡ ಹಾಗೂ ವಕೀಲರ ಚೇಂಬರ್‌ಗಳನ್ನು ನಿರ್ಮಿಸಬೇಕು. ಗ್ರಂಥಾಲಯ, ಇ-ಲೈಬ್ರರಿ, ಅಂತರ್ಜಾಲ ವ್ಯವಸ್ಥೆ, ಪ್ರತ್ಯೇಕ ಕೊಠಡಿಗಳು ಹಾಗೂ ಶೌಚಗೃಹಗಳನ್ನು ನಿರ್ಮಿಸಬೇಕು.

ವಕೀಲರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ವಾರ್ಷಿಕವಾಗಿ 5 ಸಾವಿರ ಕೋಟಿ ರೂ. ಮೀಸಲಿಟ್ಟು ವಕೀಲರ ಹಾಗೂ ಅವಲಂಬಿತರಿಗೆ ಬೃಹತ್ ವಿಮಾ ಸೌಲಭ್ಯ ನೀಡಬೇಕು. ಹೊಸದಾಗಿ ವೃತ್ತಿ ಆರಂಭಿಸುವ ವಕೀಲರಿಗೆ ಮಾಸಿಕ ಕನಿಷ್ಠ 10 ಸಾವಿರ ರೂ. ಗೌರವಧನ ನೀಡಬೇಕು. ಅಪಘಾತ ಇಲ್ಲವೆ ಕಾಯಿಲೆಯಿಂದ ವಕೀಲರು ಮೃತಪಟ್ಟರೆ ವಕೀಲರಿಗೆ ಅಥವಾ ಅವಲಂಬಿತರಿಗೆ ಹಣಕಾಸಿನ ರಕ್ಷಣೆ ಒದಗಿಸಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಕೀಲರ ವಸತಿ ಸೌಕರ‌್ಯಕ್ಕೆ ಸರ್ಕಾರಗಳು ವಸತಿ ನಿರ್ಮಾಣ ಉದ್ದೇಶಕ್ಕಾಗಿ ಭೂಸ್ವಾಧೀನಪಡಿಸಿ ಕೊಂಡು ಅತ್ಯಂತ ಕಡಿಮೆ ದರದಲ್ಲಿ ನಿವೇಶನ/ವಸತಿ ಸೌಕರ‌್ಯ ಕಲ್ಪಿಸಬೇಕು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಲಾಯಿತು.

ನಂತರ ತಹಸೀಲ್ದಾರ್ ಕಚೇರಿಗೆ ತೆರಳಿ ಶಿರಸ್ತೆದಾರ ಶ್ರೀನಿವಾಸ ಕಲಾಲರಿಗೆ ಮನವಿ ಸಲ್ಲಿಸಲಾಯಿತು. ವಕೀಲರಾದ ಬಿ.ಕೆ. ಕಲ್ಲೂರ, ಬಿ.ಆರ್. ಅಡ್ಡೋಡಗಿ, ಸದಾನಂದ ಬಶೆಟ್ಟಿ, ಅಶೋಕ ಕೋಲಕಾರ, ಸುರೇಶ ಚಿಂಚೋಳಿ, ಬಿ.ಎ.ಪಾಟೀಲ, ಎನ್.ಎಸ್. ಬಿರಾದಾರ, ನೀಲಕಂಠ ಸಜ್ಜನ, ಸಂಗಮೇಶ ಕೋಳೂರ, ಮುರಗೇಶ ಯರನಾಳ, ರಾಚಯ್ಯ ಗಣಕುಮಾರ, ಈಶ್ವರ ಪರಮಗೊಂಡ, ಪ್ರಕಾಶ ಗಬ್ಬೂರ, ಚನ್ನು ಹಡಪದ, ರಾಜು ವಂದಾಲ, ತಾನಾಜಿ ಗಾಯಕವಾಡ, ಎಸ್.ಐ. ವಂದಾಲಮಠ, ಎಸ್.ಎಲ್. ಕಳ್ಳಿಗುಡ್ಡ ಮತ್ತಿತರರಿದ್ದರು.

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...