More

    ನಾಳೆ ಕುರುಬ ಸಮಾಜದ ಸಮಾವೇಶ

    ಬಸವನಬಾಗೇವಾಡಿ: ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದ ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡ ಮೀಸಲಾತಿ ಪಟ್ಟಿಗೆ ಸೇರ್ಪಡೆ ಮಾಡುವಂತೆ ಸರ್ಕಾರವನ್ನು ಆಗ್ರಹಿಸಿ ನ.29 ಬಾಗಲಕೋಟೆಯಲ್ಲಿ ಬೆಳಗಾವಿ ವಿಭಾಗ ಮಟ್ಟದ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಮುಖಂಡ ಸಂಗಮೇಶ ಒಲೇಕಾರ ತಿಳಿಸಿದರು.
    ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
    ಕುರುಬ ಸಮಾಜ ಬುಡಕಟ್ಟು ಜನಾಂಗಕ್ಕೆ ಸೇರಿದವರಾಗಿದ್ದು, ರಾಜ್ಯದಲ್ಲಿ ಜೇನು ಕುರುಬ, ಕಾಡು ಕುರುಬ ಸೇರಿದಂತೆ ವಿವಿಧ ಬಗೆಯ ಪಂಗಡಗಳಿದ್ದು, ಎಲ್ಲರೂ ಒಂದೇ ಸಮುದಾಯದವರಾಗಿದ್ದಾರೆ. ಕುರುಬ ಸಮಾಜವನ್ನು ಎಸ್‌ಟಿ ಮೀಸಲಾತಿಗೆ ಸೇರಿಸುವಂತೆ ಹಲವು ವರ್ಷಗಳಿಂದ ಹೋರಾಟ ಮಾಡುತ್ತ ಬಂದಿದ್ದರೂ ಬೇಡಿಕೆ ಈಡೇರಿಲ್ಲ. ಇದರಿಂದ ರಾಜ್ಯದಲ್ಲಿ ಕುರುಬರಿಗೆ ಅನ್ಯಾಯವಾಗುತ್ತಿದೆ. ಆ ನಿಟ್ಟಿನಲ್ಲಿ ಕಾಗಿನೆಲೆ ಮಹಾಸಂಸ್ಥಾನಪೀಠದ ನಿರಂಜನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ಸಮಾವೇಶ ಹಮ್ಮಿಕೊಂಡಿದ್ದು, ಈ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ರಾಮಯ್ಯ, ಸಚಿವ ಕೆ.ಎಸ್. ಈಶ್ವರಪ್ಪ ಸೇರಿದಂತೆ ಹಲವಾರು ನಾಯಕರು ಪಕ್ಷಬೇಧ ಮರೆತು ಪಾಲ್ಗೊಳ್ಳಲಿದ್ದಾರೆ. ಸಮಾವೇಶದಲ್ಲಿ 10 ಲಕ್ಷ ಜನ ಸೇರುವ ನಿರೀಕ್ಷೆ ಇದ್ದು, ಬಸವನಬಾಗೇವಾಡಿ ತಾಲೂಕಿನಿಂದ 10 ಸಾವಿರಕ್ಕೂ ಹೆಚ್ಚು ಸಮಾಜ ಬಾಂಧವರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
    ವಿಕಾಸ ಜೋಗಿ, ಬಂಗಾರು ಪೂಜಾರಿ, ಪ್ರಕಾಶ ಜಮ್ಮಲದಿನ್ನಿ, ಮಲ್ಲಿಕಾರ್ಜುನ ಅಂಬಳನೂರ, ಶಿವಯೋಗಿ ವಾಲಿಕಾರ, ಶ್ರೀಶೈಲ ಬನ್ಸೂಡೆ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts