ಬಸವಣ್ಣ, ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಣೆ

basavanna jayanti in rangamandira
ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಬಸವೇಶ್ವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಎಸ್.ಎಸ್.ಜ್ಯೋತಿಪ್ರಕಾಶ್, ಜಿ.ಎನ್.ಕುಮಾರಸ್ವಾಮಿ, ಶಾಂತಾ ಆನಂದ್, ಭಾರತಿ ಚಂದ್ರಶೇಖರ, ಕಿರಣ್ ದೇಸಾಯಿ, ಗುರುದತ್ ಹೆಗಡೆ, ಜಿ.ಕೆ.ಮಿಥುನ್‌ಕುಮಾರ್, ಎಚ್.ಉಮೇಶ್, ಬಳ್ಳಕೆರೆ ಸಂತೋಷ್ ಇತರರಿದ್ದರು.
Published on

ಶಿವಮೊಗ್ಗ: ವಿಶ್ವಗುರು ಬಸವಣ್ಣ ಹಾಗೂ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿವನ್ನು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಶುಕ್ರವಾರ ಕುವೆಂಪು ರಂಗಮಂದಿರದಲ್ಲಿ ಸರಳವಾಗಿ ಆಚರಿಸಲಾಯಿತು.

ಚುನಾವಣಾ ನೀತಿಸಂಹಿತೆ ಹಿನ್ನೆಲೆಯಲ್ಲಿ ಸರಳವಾಗಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಬಸವೇಶ್ವರ ವೀರಶೈವ ಸಮಾಜದ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್ ಮತ್ತು ಶಿವಶರಣೆ ಹೇಮರಡ್ಡಿ ಸಮಾಜ ಸಂಘದ ಅಧ್ಯಕ್ಷ ಜಿ.ಎನ್.ಕುಮಾರಸ್ವಾಮಿ ಉದ್ಘಾಟಿಸಿದರು.
ಶಾಂತಾ ಆನಂದ್, ಭಾರತಿ ಚಂದ್ರಶೇಖರ, ಕಿರಣ್ ದೇಸಾಯಿ, ಪೂಜಾ ನಾಗರಾಜ್ ವಚನ ಗಾಯನ ನಡೆಸಿಕೊಟ್ಟರು. ಡಿಸಿ ಗುರುದತ್ ಹೆಗಡೆ, ಎಸ್ಪಿ ಜಿ.ಕೆ.ಮಿಥುನ್‌ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಚ್.ಉಮೇಶ್, ಮುಖಂಡರಾದ ಡಾ. ನಾಗರಾಜ್ ಪರಿಸರ, ಎ.ಎಸ್.ಚಂದ್ರಶೇಖರ್, ಎಚ್.ಎಸ್.ಈಶ್ವರಪ್ಪ, ಉಮಾಶಂಕರ, ಮಲ್ಲಿಕಾರ್ಜುನಸ್ವಾಮಿ, ಡಿ.ಗಂಗಾಧರಪ್ಪ, ಡಾ. ಕೊಟ್ರೇಶ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net