ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್​ ಮೆಟ್ಟಿಲೇರಿದ ಸಂಸದ ಬಸವರಾಜ್​ ಬೊಮ್ಮಾಯಿ

Basavaraj Bommai
Published on

ಬೆಂಗಳೂರು: ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ನಿರ್ಬಂಧಕಾಜ್ಞೆ ಕೋರಿ ಮಾಜಿ ಸಿಎಂ, ಹಾವೇರಿ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ್​ ಬೊಮ್ಮಾಯಿ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ನಗರದ ಸಿಟಿ ಸಿವಿಲ್​ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿರುವ ಸಂಸದ ಬಸವರಾಜ್​ ಬೊಮ್ಮಾಯಿ ನ್ಯಾಯಾಲಯ ಅರ್ಜಿಯ ವಿಚಾರಣೆಯನ್ನು ಆಗಸ್ಟ್​ 28ಕ್ಕೆ ನಡೆಸಲಿದೆ. ಇದಲ್ಲದೇ ವಕೀಲ ಜಗದೀಶ್ ಮಹದೇವ್ ವಿರುದ್ದವೂ ನಿರ್ಬಂಧಕಾಜ್ಞೆ ಹೇರುವಂತೆ ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಕೋರಿದ್ದಾರೆ.

ಆಗಸ್ಟ್​ 28ರಂದು ಅರ್ಜಿ ವಿಚಾರಣೆ ನಡೆಸಲಿರುವ ನ್ಯಾಯಾಲಯವು ಅಂದೇ ತೀರ್ಪನ್ನು ಪ್ರಕಟಿಸುವ ನಿರೀಕ್ಷೆ ಇದೆ. ಆದರೆ, ಸಂಸದ ಬಸವರಾಜ್​ ಬೊಮ್ಮಾಯಿ ಅವರು ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ತಂದಿರುವುದು ಅಚ್ಚರಿ ಮೂಡಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net