More

    ಸರ್ಕಾರದ ವಿರುದ್ದ ದಂಗೆ ಎದ್ದವರ ಪ್ರಕರಣ ವಾಪಸ್ ಪಡೆಯುವುದು ಜನರಿಗೆ ಮಾಡುವ ದ್ರೋಹ: ಬಸವರಾಜ ಬೊಮ್ಮಾಯಿ

    ಬೆಂಗಳೂರು: ಡಿಜೆ ಹಳ್ಳಿ ಕೆಜಿ ಹಳ್ಳಿ ಪ್ರಕರಣದಲ್ಲಿ ರಾಜ್ಯ ಸರ್ಕಾರದ ವಿರುದ್ದ ದಂಗೆ ಎದ್ದವರಿಗೆ ರಕ್ಷಣೆಗೆ ಸರ್ಕಾರ ಮುಂದಾಗಿರುವುದು ರಾಜ್ಯದ ಜನತೆಗೆ ಮಾಡುವ ದ್ರೋಹವಾಗಿದೆ. ಅಲ್ಲದೇ ದಲಿತ ಶಾಸಕನ ಮನೆ ಸುಟ್ಟವರ ರಕ್ಷಣೆ ಮಾಡುವುದು ಕಾಂಗ್ರೆಸ್ ನ ದಲಿತ ವಿರೋಧಿ ನೀತಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

    ಈ ಕುರಿತು ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕ ತನ್ವೀರ್ ಸೇಠ್ ಗೃಹ ಸಚಿವರಿಗೆ ಪತ್ರ ಬರೆದು ಆರೋಪಿಗಳ ವಿರುದ್ದದ ಪ್ರಕರಣಗಳನ್ನು ವಾಪಸ್ ಪಡೆಯುವಂತೆ ಮನವಿ ಮಾಡಿದ್ದಾರೆ‌.

    ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣ ಬಹಳ ಗಂಭೀರವಾಗಿದೆ. ಈ ಪ್ರಕರಣದಲ್ಲಿ ಪೊಲೀಸ್ ಠಾಣೆ, ಪೊಲಿಸ್ ವಾಹನಗಳು ಕಾಂಗ್ರೆಸ್ ಶಾಸಕನ ಮನೆ ಸುಟ್ಟಿದ್ದಾರೆ. ಇದು ರಾಜ್ಯ ಸರ್ಕಾರದ ವಿರುದ್ದದ ದಂಗೆಯಾಗಿದೆ. ರಾಜ್ಯದ ಮೇಲೆ ದಂಗೆ ಎದ್ದರೂ ಕೂಡ ಅವರ ವಿರುದ್ದದ ಪ್ರಕರಣಗಳನ್ನು ವಾಪಸ್ ಪಡೆಯಲು ತೀರ್ಮಾನ ಮಾಡಿದ್ದಾರೆ ಎಂದರೆ ರಾಜ್ಯದ ವಿರುದ್ಧ ಏನೇ ಮಾಡಿದರೂ ರಕ್ಷಣೆ ದೊರೆಯುತ್ತದೆ ಎನ್ನುವುದು ಅಪರಾಧಿಗಳಿಗೆ ಧೈರ್ಯ ಬರುತ್ತದೆ. ದಂಗೆ ಎದ್ದವರಿಗೂ ಕೂಡ ಆಶ್ರಯ ಕೊಡುತ್ತಿರುವುದು ಸ್ಪಷಟವಾಗುತ್ತದೆ ಎಂದು ಕಿಡಿಕಾರಿದ್ದಾರೆ.

    NIA ತನಿಖೆ

    ಕೆಜೆ ಹಳ್ಳಿ, ಡಿಜೆ ಹಳ್ಳಿ ಪ್ರಕರಣವನ್ನು NIA ತೆಗೆದುಕೊಂಡಿದೆ. ಇದರಲ್ಲಿ PFI, SDPI ಕೈವಾಡ ಇದೆ ಅಂತ ಬಹಳ ಸ್ಪಷ್ಟವಾದ ಪುರಾವೆಗಳಿವೆ. ತನಿಖೆ ನಡಿಸಿ ಚಾರ್ಜ್ ಸೀಟ್ ಆಗಿದೆ. ಎನ್ ಐಎ ತನಿಖೆ ನಡೆಸುತ್ತಿರುವ ಪ್ರಕರಣವನ್ನು ಇವರು ಹೇಗೆ ವಾಪಸ್ ಪಡೆಯುತ್ತಾರೆ.

    ನಾವು ಅಧಿಕಾರದಲ್ಲಿ ಇದ್ದಾಗಲೂ ಈ ಪ್ರಕರಣಗಳನ್ನು ವಾಪಸ್ ಪಡೆಯುವಂತೆ‌ ಒತ್ತಡ ಇತ್ತು. ನಾವು ಸಾಕ್ಷಿ ಸಮೇತ ಹಿಡಿದುಕೊಂಡು ಅವರನ್ನು ಆರೆಸ್ಟ್ ಮಾಡಿದ್ದೇವು. ಈ ಸರ್ಕಾರಕ್ಕೆ ಎಚ್ಚರಿಕೆ ಕೊಡುತ್ತೇನೆ. ಈ ತರಹ ದಂಗೆ‌ ಎದ್ದು ಪೊಲಿಸ್ ಠಾಣೆ ಸುಟ್ಟವರ ವಿರುದ್ದದ ಪ್ರಕರಣಗಳನ್ನು ವಾಪಸ್ ಪಡೆಯಲು ಮುಂದಾಗಿರುವ ಜನರಿಂದ ಆಯ್ಕೆಯಾದ ಈ ಸರ್ಕಾರ ಜನರಿಗೆ ದ್ರೋಹ ಮಾಡುತ್ತಿದೆ.

    DJ Halli KJ Halli Riots

    ಇದನ್ನೂ ಓದಿ: ಮಹಿಳೆಯರ ಮೇಲಿನ ದೌರ್ಜನ್ಯಗಳ ಕುರಿತು ಮಾತನಾಡಲು ವಿಪಕ್ಷಗಳಿಗೆ ಯಾವಾಗ ಧೈರ್ಯ ಬರುತ್ತದೆ: ಸ್ಮೃತಿ ಇರಾನಿ

    ರಾಜ್ಯ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯಬಾರದು. ನಾವು ಆವತ್ತು ಕಟ್ಟು ನಿಟ್ಟಿನ ಕ್ರಮ ತೆಗೆದುಕೊಂಡಿದ್ದರಿಂದ ಪ್ರಕರಣ ನಿಯಂತ್ರಣಕ್ಕೆ ಬಂದಿತ್ತು. ಮುಖ್ಯಮಂತ್ರಿಗಳಿಗೂ ಕೆಲವು ಸಂಘಟನೆಗಳು ಪ್ರಕರಣಗಳನ್ನು ವಾಪಸ್ ಪಡೆಯುವಂತೆ ಒತ್ತಡ ಹೇರುತ್ತಿದ್ದಾರೆ ಎಂಬ ಮಾಹಿತಿ ಇದೆ.

    ಈ ವಿಚಾರದಲ್ಲಿ ಮುಖ್ಯಮಂತ್ರಿಗಳು ಸ್ಪಷ್ಟ ನಿಲುವಿನೊಂದಿಗೆ ಬರಬೇಕು. ಇಂತ ದೇಶದ್ರೋಹಿ ಪ್ರಕರಣದಲ್ಲಿರುವ ವ್ಯಕ್ತಿಗಳಿಗೆ ಶಿಕ್ಷೆ ಕೊಡುತ್ತೀರಾ ಅಥವಾ ಪ್ರಕರಣ ವಾಪಸ್ ತೆಗೆದುಕೊಳ್ಳುತ್ತೀರಾ ಎನ್ನುವುದು ಸ್ಪಷ್ಟವಾಗಿರಬೇಕು ಎಂದು ಆಗ್ರಹಿಸುತ್ತೇನೆ. ಈ ಶಕ್ತಿಗಳು ಈ ಸರ್ಕಾರ ಅಧಿಕಾರಕ್ಕೆ ಬರಲು ಬಹಳ ದೊಡ್ಡ ಮಟ್ಟದ ಸಹಾಯ ಮಾಡಿವೆ. ಹೀಗಾಗಿ ಈಗ ಅವರ ಮುಲಾಜಿನಲ್ಲಿ ಸರ್ಕಾರ ನಡೆಸುವಂತಾಗಿದೆ ಎಂದು ಆರೋಪಿಸಿದ್ದಾರೆ.

    ದಲಿತ ವಿರೋಧಿ ನೀತಿ

    ಕಾಂಗ್ರೆಸ್ ದಲಿತ ಶಾಸಕನ ಮನೆ ಮೇಲೆ ದಾಳಿ ಮಾಡಿದವರನ್ನು ರಕ್ಷಣೆ ಮಾಡಲು ಮುಂದಾಗಿರುವುದು ಇದು ಕಾಂಗ್ರೆಸ್ಸಿನ ಮತ್ರೊಂದು ದಲಿತ ವಿರೋಧಿ ನೀತಿಯಾಗಿದೆ. ಈ ಪ್ರಕರಣದಲ್ಲಿ ಮಾಜಿ ಮೇಯರ್ ಮತ್ತು ಕಾರ್ಪೊರೇಟರ್ ರಕ್ಷಣೆಗೆ ಆಗಲೇ ಪ್ರಯತ್ನ ನಡೆಸಿದ್ದರು. ಈಗ ಅವರ ವಿರುದ್ದ ಚಾರ್ಜ್ ಶೀಟ್ ಸಿದ್ದವಾಗಿದೆ. ಹೀಗಾಗಿ ಅವರ ರಕ್ಷಣೆಗೆ ಈ ಸರ್ಕಾರ ಪ್ರಯತ್ನ ನಡೆಸುತ್ತಿದೆ.

    ಪ್ರಕರಣಗಳನ್ನು ವಾಪಸ್ ಪಡೆಯುವ ಪ್ರಕ್ರಿಯೆ ನಡೆಸಿದ್ದಾರೆ. ನಾವು ಇದನ್ನು ಇಷ್ಟಕ್ಕೆ ಸುಮ್ಮನೆ ಬಿಡುವುದಿಲ್ಲ. ಇದರ ವಿರುದ್ದ ಕಾನೂನಾತ್ಮಕ ಹಾಗೂ ಜನರ ಬಳಿಗೆ ತೆಗೆದುಕೊಂಡು ಹೋಗುತ್ತೇವೆ ಎಂದು ಮಾಜಿ ಸಿಎಂ ಬಸವರಾಜ್​ ಬೊಮ್ಮಾಯಿ ಹೇಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts