More

  ಕಾವೇರಿ ನೀರಿನ ವಿಚಾರ ಕುರಿತು ಸಿಎಂಗೆ ಪತ್ರ ಬರೆದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

  ಬೆಂಗಳೂರು: ಕಾವೇರಿ ನೀರಿನ ಹಂಚಿಕೆ ವಿಚಾರವಾಗಿ ತಮಿಳುನಾಡು ಸರ್ಕಾರ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ರಾಜ್ಯದ ಸಿಎಂ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ಪತ್ರ ಬರೆದಿದ್ದಾರೆ.

  ಇದನ್ನೂ ಓದಿ: ಪ್ರಿಯಾಂಕ ಗಾಂಧಿ ವಾರಣಾಸಿಯಿಂದ ಸ್ಪರ್ಧಿಸಿದರೆ ಪ್ರಧಾನಿ ಮೋದಿ ಸೋಲುವುದು ಗ್ಯಾರಂಟಿ: ಸಂಜಯ್​ ರಾವುತ್​

  ಪತ್ರದಲ್ಲಿ ಬಸವರಾಜ ಬೊಮ್ಮಾಯಿ ಬರೆದ ವಿಷಯ ಹೀಗಿದೆ, ತಮಿಳುನಾಡು ಸರ್ಕಾರ ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ಮತ್ತೆ ಕ್ಯಾತೆ ತೆಗೆದಿದೆ. ಈ ವಿಷಯ ನಿಮ್ಮ ಗಮನಕ್ಕೆ ಬಂದಿದೆ ಎಂದು ಭಾವಿಸಿದ್ದೇನೆ ಹಾಗೂ ತಮಿಳುನಾಡು ಸುಪ್ರಿಂಕೋರ್ಟ್​ಗೆ ಹೋಗಬಹುದೆಂದು ಮಾಧ್ಯಮದಲ್ಲಿ ನಾವು ನೋಡಿದ್ದೇವೆ. ಈ ವಿಚಾರದಲ್ಲಿ ಕೆಳಕಂಡ ಮಹತ್ವದ ವಾಸ್ತವಿಕ ಅಂಶಗಳನ್ನು ಇಟ್ಟುಕೊಂಡು ಬರುವ ದಿನಗಳಲ್ಲಿ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕೆಂದು ನಾನು ಈ ಪತ್ರ ಬರೆಯುತ್ತಿದ್ದೇನೆ.

  ಜೂನ್ 1 ರಂದು ಕರ್ನಾಟಕದ ನಾಲ್ಕು ಜಲಾಶಯಗಳಲ್ಲಿ ಒಟ್ಟು 24.352 ಟಿಎಂಸಿ ನೀರಿತ್ತು. ಅದೇ ರೀತಿ ಮೆಟ್ಟೂರು ಡ್ಯಾಂನಲ್ಲಿ 69.77 ಟಿಎಂಸಿ, ಭವಾನಿ ಸಾಗರ ಜಲಾಶಯಲದಲ್ಲಿ 16.653 ಟಿಎಂಸಿ ಇದ್ದು, ಬಿಳಿಗುಂಡ್ಲು ಮಾಪನ ಕೇಂದ್ರದಿಂದ 6-8-2023ಕ್ಕೆ 14.054 ಟಿಎಂಸಿ ನೀರು ಹೋಗಿರುವುದು ಮಾಧ್ಯಮಗಳಿಂದ ತಿಳಿದಿದೆ. ಒಟ್ಟು ತಮಿಳುನಾಡಿನ ಮೆಟ್ಟೂರು ಡ್ಯಾಮ್​ನಲ್ಲಿ ಈ ವರ್ಷ 83.831 ಟಿಎಂಸಿ ನೀರು ಬಂದಿರುತ್ತದೆ.

  ಇದನ್ನೂ ಓದಿ: DK Shivakumar Calls Ashwanth Naryana As ‘Navarangi Narayana’ | ಅಶ್ವತ್ಥ್​ ನಾರಾಯಣ್​ ಸಾಹೇಬ್ರು ನವರಂಗಿ ನಾರಾಯಣ ಎಂದ ಡಿಕೆಶಿ

  ತಮಿಳುನಾಡು ಕುರುವೈ ಬೆಳೆಗೆ 1 ಲಕ್ಷ ಎಂಬತ್ತು ಸಾವಿರ ಎಕರೆ ಬೆಳೆ ಸಿಡಬ್ಲುಡಿಟಿ ಪಕಾರ ಬೆಳೆಯಬೇಕು ಹಾಗೂ 32 ಟಿಎಂಸಿ ನೀರು ಬಳಸಬೇಕು. ಆದರೆ, ತಮಿಳುನಾಡು 7-8-23ಕ್ಕೆ 60.97 ಟಿಎಂಸಿ ನೀರು ಕುರು ಬೆಳೆಗೆ ಬಳಕೆ ಮಾಡಿದ್ದು, ಸಿಡಬ್ಲ್ಯುಡಿಟಿ ಆದೇಶದ ಎರಡು ಪಟ್ಟು ಹೆಚ್ಚಾಗಿದೆ.

  ಕಾವೇರಿ ನೀರಿನ ವಿಚಾರ ಕುರಿತು ಸಿಎಂಗೆ ಪತ್ರ ಬರೆದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

  ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿನ ಕೊರತೆ ಇರುವುದನ್ನು ಲೆಕ್ಕಿಸದೇ ಸಿಡಬ್ಲುಡಿಟಿ ಆದೇಶ ಉಲ್ಲಂಘನೆ ಮಾಡಿ ನಾಲ್ಕು ಪಟ್ಟು ಕುರುವೈ ಎರಿಯಾ ಬೆಳೆಗೆ ನೀರನ್ನು ಒದಗಿಸಿದೆ. ಇದನ್ನು ನಮ್ಮ ಅಧಿಕಾರಿಗಳು ಸಿಡಬ್ಲ್ಯುಎಂಎದಲ್ಲಿ ಪ್ರತಿಭಟಿಸದೇ ಸುಮ್ಮನೆ ಇದ್ದದ್ದು ರಾಜ್ಯದ ಹಿತಾಸಕ್ತಿಗೆ ಧಕ್ಕೆಯಾಗಿದೆ. ಈಗಿರುವ ನಮ್ಮ ನಾಲ್ಕು ಡ್ಯಾಮ್​ಗಳ ನೀರಿನ ಮಟ್ಟ ಬೆಂಗಳೂರು ನಗರ, ಕಾವೇರಿ ಜಲಾನಯನ ಪ್ರದೇಶದ ನಗರ ಮತ್ತು ಗ್ರಾಮಗಳ ಕುಡಿಯುವ ನೀರಿಗೆ ಕೊರತೆಯಾಗುತ್ತದೆ.

  ಇದನ್ನೂ ಓದಿ: ಉತ್ತರಾಖಂಡದಲ್ಲಿ ಭಾರೀ ಮಳೆಯ ಹಿನ್ನಲೆ ಎರಡು ದಿನಗಳ ಕಾಲ ಚಾರ್ಧಾಮ್ ಯಾತ್ರೆ ಸ್ಥಗಿತ!

  ಅದೇ ರೀತಿ ಕಾವೇರಿ ಜಲಾನಯನ ಪ್ರದೇಶದ ಕರೀಫ್ ಬೆಳೆಗಳಿಗೆ ನೀರಿನ ಕೊರತೆಯಾಗುತ್ತದೆ. ಹೀಗಾಗಿ ನೀರು ಬಿಡುವುದು ಕರ್ನಾಟಕದ ಜನತೆ ಮತ್ತು ರೈತರನ್ನು ಸಂಕಷ್ಟಕ್ಕೆ ಈಡು ಮಾಡುತ್ತದೆ. ತಮಿಳುನಾಡಿಗೆ ಸೌಥ್ ವೆಸ್ಟ್ ಮತ್ತು ನಾರ್ಥ್ ಈಸ್ಟ್ ಮಾನಸೂನ್ ಮಳೆ ಆಗುತ್ತಿರುವುದರಿಂದ ನಮಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಈ ವಾಸ್ತವಾಂಶದ ಮೇಲೆ ನಾವು ಗಟ್ಟಿ ನಿಲುವು ತೆಗೆದುಕೊಳ್ಳಬೇಕೆಂದು ನಾನು ತಮ್ಮಲ್ಲಿ ಆಗ್ರಹ ಮಾಡುತ್ತೇನೆ. ಹಾಗೂ ತಾವು ಕಾವೇರಿ ಜಲಾನಯನ ಪ್ರದೇಶದ ನೀರಿನ ಹಿತಾಸಕ್ತಿ ಕಾಪಾಡುತ್ತೀರೆಂದು ನಂಬಿರುವೆ ಎಂದು ಪತ್ರದಲ್ಲಿ ಬರೆದು ತಿಳಿಸಿದ್ದಾರೆ.

  ‘ಬಡತನವೇ ಬೇರೆ, ಜಾತಿ ಆಧಾರಿತವಾದ ಸಾಮಾಜಿಕ ಅಸಮಾನತೆಯೇ ಬೇರೆ’: ಸಚಿವ ಎಚ್​.ಸಿ. ಮಹದೇವಪ್ಪ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts