ಶಿವಮೊಗ್ಗ: ಈಗಾಗಲೇ ಎಲ್ಲಾ ಪ್ರಕ್ರಿಯೆ ಮುಕ್ತಾಯವಾಗಿದ್ದು ಬಿಜೆಪಿಯಿಂದ ಯಾರಿಗೆ ಟಿಕೆಟ್ ನೀಡಬೇಕು ಎಂಬುದರ ಬಗ್ಗೆ ಬಹುತೇಕ ಅಂತಿಮವಾಗಿದೆ. ಏಪ್ರಿಲ್ 9 ರಂದು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ತೀರ್ಥಹಳ್ಳಿಯ ತೂದೂರಿನಲ್ಲಿ ಸಿಎಂ ಬೊಮ್ಮಾಯಿ ಮಾತನಾಡುತ್ತಾ, ಸೊರಬ, ಶಿವಮೊಗ್ಗ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಗೊಂದಲ ಇದೆ. ಗೆಲ್ಲುವ ಪಕ್ಷವಾದ ಹಿನ್ನೆಲೆ ಟಿಕೆಟ್ಗಾಗಿ ಪೈಪೋಟಿ ಏರ್ಪಡುವುದು ಸಹಜ. ಸಧ್ಯದಲ್ಲೇ ಎಲ್ಲಾ ಗೊಂದಲ ನಿವಾರಣೆ ಆಗುತ್ತದೆ ಎಂದರು.
ಇದನ್ನೂ ಓದಿ: ಕಾರಿನಲ್ಲಿ ವ್ಯಕ್ತಿ ಸಜೀವ ದಹನ ಪ್ರಕರಣ; ಅರ್ಧ ಸುಟ್ಟ ಒಳ ಉಡುಪಿನಿಂದ ಪತ್ತೆಯಾಯ್ತು ಮೃತ ವ್ಯಕ್ತಿಯ ಗುರುತು!
ನಾಮಪತ್ರಿಕೆ ಸಲ್ಲಿಕೆ ದಿನಾಂಕ ಸಮೀಪಿಸುತ್ತಿದ್ದರೂ ಬಿಜೆಪಿ ಮಾತ್ರ ಇನ್ನೂ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡದಿರುವುದು ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಕೆರೆಳಿಸಿದೆ. ಈ ಬಗ್ಗೆ ಬೊಮ್ಮಾಯಿ ಪ್ರತಿಕ್ರಿಯಿಸಿ ಬಿಜೆಪಿ ಪಟ್ಟಿ ವಿಳಂಬ ಆಗಿಲ್ಲ. ಪ್ರತಿ ಚುನಾವಣೆಯಲ್ಲೂ ಇದೆ ಸಮಯದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಿದೆ. ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಅದು ಅವರ ಪಕ್ಷದ ವಿಚಾರ ಎಂದರು.
ಮಾಜಿ ಸಿಎಂ ಸಿದ್ದರಾಮಯ್ಯ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲು ಸಾಕಷ್ಟು ಕಸರತ್ತು ನಡೆಸುತ್ತಿರುವ ನಡುವೆ, ಸಿಎಂ ಬೊಮ್ಮಾಯಿ ಕೂಡ ಎರಡು ಕ್ಷೇತ್ರಗಳಿಂದ ಚುನಾವಣೆಗೆ ನಿಲ್ಲುತ್ತಾರೆ ಎಂಬ ಮಾತುಗಳು ಕೇಳಿ ಬಂದಿವೆ. ಈ ಬಗ್ಗೆ ಪ್ರಶ್ನೆ ಎದುರಾಗುತ್ತಿದ್ದಂತೆ ಬಸವರಾಜ ಬೊಮ್ಮಾಯಿ ಗರಂ ಆಗಿದ್ದಾರೆ. ಇದನ್ನು ಹೇಳಿದ್ದು ಯಾರು ಎಂದು ಪ್ರಶ್ನಿಸುತ್ತಾ ಬೊಮ್ಮಾಯಿ ಸಿಡಿಮಿಡಿಗೊಂಡಿದ್ದಾರೆ.
ಇದನ್ನೂ ಓದಿ: ತಮಿಳುನಾಡು ಯುವಕನ ಕೈಹಿಡಿದ ಮೆಕ್ಸಿಕನ್ ಯುವತಿ; ಈಕೆಗೆ ಹಳ್ಳಿಯಲ್ಲೇ ಮದುವೆ ಆಗಬೇಕೆಂಬ ಆಸೆ!