More

    ಜಗದೀಶ್ ಶೆಟ್ಟರ್ ರಾಜೀನಾಮೆ ನಿರ್ಧಾರದಿಂದ ಕಸಿವಿಸಿಯಾಗಿದೆ; ಡ್ಯಾಮೇಜ್ ಕಂಟ್ರೋಲ್​ಗೆ ಬೇಕಾದ ತಂತ್ರ ರೂಪಿಸಲಾಗುತ್ತಿದೆ! ಸಿಎಂ ಬೊಮ್ಮಾಯಿ

    ಹುಬ್ಬಳ್ಳಿ: ಜಗದೀಶ್ ಶೆಟ್ಟರ್ ಅವರು ಅನುಭವಿ ಮತ್ತು ಹಿರಿಯ ನಾಯಕರು. ಅವರಿಗೆ ದೆಹಲಿ ಮಟ್ಟದಲ್ಲಿ ಸೂಕ್ತ ಸ್ಥಾನಮಾನ, ಜವಾಬ್ದಾರಿ ಕೊಡುವುದಾಗಿ ನಿನ್ನೆಯೂ ಹೇಳಿದ್ದೇವೆ. ಇದರ ಹೊರತಾಗಿ ಅವರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಶೆಟ್ಟರ್ ರಾಜೀನಾಮೆಯಿಂದ ಬಿಜೆಪಿಗೆ ಡ್ಯಾಮೇಜ್ ಆಗುತ್ತದೆ ಎಂಬುದನ್ನು ಅಲ್ಲಗಳೆಯುವಂತಿಲ್ಲ. ಡ್ಯಾಮೇಜ್ ಕಂಟ್ರೋಲ್​ಗೆ ಬೇಕಾದ ಎಲ್ಲ ತಂತ್ರ ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

    ಇದನ್ನೂ ಓದಿ: ಕೇಕ್ ಕತ್ತರಿಸುವ ಮುನ್ನ ತಲ್ವಾರ್ ಪ್ರದರ್ಶನ! ಮಾಜಿ ಸಚಿವರ ನಡೆಗೆ ವ್ಯಕ್ತವಾಯ್ತು ಟೀಕೆ

    ಕಸಿವಿಸಿ ಉಂಟಾಗಿದೆ…!

    ಬಿಜೆಪಿ ಹಿರಿಯ ನಾಯಕ, ಮಾಜಿ ಸಿಎಂದ ಜಗದೀಶ್‌ ಶೆಟ್ಟರ್‌ ಅವರು ತಮ್ಮ ಶಾಸಕ ಸ್ಥಾನ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಈಗಾಗಲೇ ಘೋಷಿಸಿದ್ದಾರೆ. ಈ ಬಗ್ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿ, ಬಿಜೆಪಿ ಉತ್ತರ ಕರ್ನಾಟಕಕ್ಕೆ ಸಾಕಷ್ಟು ಮಹತ್ವ ಕೊಟ್ಟಿದೆ. ಇದೆಲ್ಲದರ ಹೊರತಾಗಿ ಜಗದೀಶ್ ಶೆಟ್ಟರ್ ಅವರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಅವರ ಈ ನಿರ್ಧಾರದಿಂದ ನಮಗೆ ಕಸಿವಿಸಿ ಉಂಟಾಗಿದೆ ಎಂದು ಹೇಳಿದ್ದಾರೆ.

    ಉತ್ತರ ಕರ್ನಾಟಕ ಭಾಗದಲ್ಲಿ ದಶಕಗಳ ಕಾಲ ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸಿದ್ದ ಹಿರಿಯ ನಾಯಕರಲ್ಲಿ ಜಗದೀಶ್ ಶೆಟ್ಟರ್ ಕೂಡ ಒಬ್ಬರು. ಸಹಜವಾಗಿಯೇ ಜಗದೀಶ್ ಶೆಟ್ಟರ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಬಿಜೆಪಿ ಟಿಕೆಟ್ ನೀಡದೇ ಇರುವುದು ಶೆಟ್ಟರ್ ಅವರ ಅಸಮಾಧಾನಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆ ಪಕ್ಷ ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ.

    ಇದನ್ನೂ ಓದಿ: ಅತೀ ಹೆಚ್ಚು ಸಾಲ ಹೊಂದಿರುವ ಮುಖ್ಯಮಂತ್ರಿಗಳಲ್ಲಿ ಬೊಮ್ಮಾಯಿಗೆ 2ನೇ ಸ್ಥಾನ; ಸಿಎಂ ಆಸ್ತಿ ವಿವರ ಹೀಗಿದೆ…

    ನಾನು ಶೆಟ್ಟರ್ ವಿರುದ್ದ ಸ್ಪರ್ಧೆ ಮಾಡಿದ್ದೆ!

    ಸಿಎಂ ಬೊಮ್ಮಾಯಿ ಮಾತನಾಡುತ್ತಾ, ಜಗದೀಶ್ ಶೆಟ್ಟರ್ ಉತ್ತರ ಕರ್ನಾಟಕ ಭಾಗದ ಪ್ರಮುಖ ನಾಯಕರು. ನಾನು ಅವರ ವಿರುದ್ದ ಸ್ಪರ್ಧೆ ಮಾಡಿದ್ದೆ. ಪಕ್ಷ ಹಲವಾರು ಸಂದರ್ಭದಲ್ಲಿ ಅನೇಕ ನಿರ್ಣಯ ಮಾಡಿದೆ. ಸ್ಥಾಪಿತ ರಾಜಕಾರಣದಲ್ಲಿ ಬದಲಾವಣೆ ತರುವ ಪ್ರಯತ್ನ ಮುಂದುವರೆದಿದೆ. ಯಡಿಯೂರಪ್ಪ ಅವರು ನಮಗೆ ಆದರ್ಶರು, ಮುಖ್ಯಮಂತ್ರಿಯಾಗಿದ್ದಾಗಲೇ ರಾಜೀನಾಮೆ ಕೊಟ್ಟಿದ್ದಾರೆ. ಅದೇ ರೀತಿ ಈಶ್ವರಪ್ಪ ಚುನಾವಣೆ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಜೆ.ಪಿ.ನಡ್ಡಾ, ಅಮಿತ್ ಶಾ ಸೇರಿದಂತೆ ಇತರೆ ನಾಯಕರು ಚರ್ಚೆ ಮಾಡಿ ಅವರು ಸೂಚಿಸಿದ ವ್ಯಕ್ತಿಗೆ ಟಿಕೆಟ್ ನೀಡುವುದಾಗಿ ಭರವಸೆ ನೀಡಲಾಗಿತ್ತು ಎಂದರು.

    ಲಿಂಗಾಯತ ಸಮುದಾಯಕ್ಕೆ ಅತೀ ಹೆಚ್ಚು ಸೀಟ್ ಕೊಟ್ಟಿದ್ದು ಬಿಜೆಪಿ!

    ಇವತ್ತು ಭಾರತೀಯ ಜನತಾ ಪಕ್ಷ ಎಲ್ಲ ಸಮುದಾಯವನ್ನು ಒಟ್ಟಿಗೆ ಕರೆದುಕೊಂಡು ಹೋಗುವ ಪ್ರಯತ್ನ ಮಾಡಿದೆ. ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕದ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ. ಅತೀ ಹೆಚ್ಚು ಮಂತ್ರಿ ಸ್ಥಾನ ಕೊಟ್ಟಿದ್ದು ಬಿಜೆಪಿ. ಲಿಂಗಾಯತ ಸಮುದಾಯಕ್ಕೆ ಅತೀ ಹೆಚ್ಚು ಸೀಟ್ ಕೊಟ್ಟಿದ್ದು ಬಿಜೆಪಿ. ಯಡಿಯೂರಪ್ಪ ನೇತೃತ್ವದಲ್ಲಿ ಮೊದಲನೇ ಪೀಳಿಗೆ ಬೆಳದು ನಿಂತಿದೆ. ಎರಡನೆ ಪೀಳಿಗೆಯಲ್ಲಿ ಲಿಂಗಾಯತ ಸಮುದಾಯದ ಸಿಸಿ ಪಾಟೀಲ್, ನಿರಾಣಿ, ಸೋಮಣ್ಣ ಬೆಳೆದು ನಿಂತಿದ್ದಾರೆ. ಎಲ್ಲರಿಗೂ ಅವಕಾಶ ಕೊಡಲಾಗಿದೆ ಎಂದರು.

    ಇದನ್ನೂ ಓದಿ: ಸರ್ಕಾರಿ ನೌಕರರೇ ಹುಷಾರ್​; ಕರ್ತವ್ಯಕ್ಕೆ ಬಾರದಿದ್ರೆ ಅರೆಸ್ಟ್​!

    ಶೆಟ್ಟರ್ ಬಿಜೆಪಿಯಲ್ಲೇ ಮುಂದುವರೆದಿದ್ದರೆ ಚೆನ್ನಾಗಿರುತ್ತಿತ್ತು!

    ಜಗದೀಶ್ ಶೆಟ್ಟರ್ ಅವರು ಬಿಜೆಪಿಯಲ್ಲೇ ಮುಂದುವರೆದಿದ್ದರೆ ಚೆನ್ನಾಗಿರುತ್ತಿತ್ತು. ರಾಜ್ಯ, ಜಿಲ್ಲಾ ಮಟ್ಟದ ಕೋರ್ ಕಮಿಟಿಯಲ್ಲಿ ಅವರ ಹೆಸರಿತ್ತು. ಇದು ಮೇಲಿನ ತೀರ್ಮಾನವಾಗಿದ್ದು, ಬದಲಾವಣೆ ತರುವಂತ ಕಾಲ. ಒಂದು ಪೀಳಿಗೆಯಿಂದ ಮತ್ತೊಂದು ಪೀಳಿಗೆಗೆ ಅವಕಾಶ ಕೊಡಬೇಕಾಗಿತ್ತು. ಅದೇ ಕಾರಣಕ್ಕೆ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ಕೈ ತಪ್ಪಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

    ಇದನ್ನೂ ಓದಿ: ಮತ್ತೆ 6 ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಎಚ್.ಡಿ.ಕುಮಾರಸ್ವಾಮಿ; ಎನ್.ಆರ್ ಸಂತೋಷ್, ದೇವರಾಜ್ ಪಾಟೀಲ್ ಜೆಡಿಎಸ್​ಗೆ ಸೇರ್ಪಡೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts