More

    ‘ಬಿಎಸ್​ವೈ ಅವರೇ ನನ್ನ ನೇಮಕ ಮಾಡಿದ್ದಾರೆ, ಅವರ ಮಾರ್ಗದರ್ಶನದಲ್ಲಿ ಜನಪರ ಆಡಳಿತ ನಡೆಸುತ್ತೇನೆ’

    ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ ಬಿಎಸ್ ಯಡಿಯೂರಪ್ಪ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಅವರೇ ನನ್ನನ್ನು ಈ ಸ್ಥಾನಕ್ಕೆ ನೇಮಕ ಮಾಡಿದ್ದಾರೆ. ಅವರ ಮಾರ್ಗದರ್ಶನದಲ್ಲೇ ಜನಪರ ಆಡಳಿತ ಮುಂದುವರಿಸುತ್ತೇನೆ ಎಂದು ಅವರು ಹೇಳಿದ್ದಾರೆ.

    ಅವರು ನನ್ನ ಮೇಲೆ ನಂಬಿಕೆ ಇಟ್ಟು ಈ ದೊಡ್ಡ ಜವಾಬ್ದಾರಿ ಕೊಟ್ಟಿದ್ದಾರೆ. ನಾನು ಅವರ ನಂಬಿಕೆಗೆ ತಕ್ಕಂತೆ ಕೆಲಸ ಮಾಡ್ತೀನಿ. ವಿಶೇಷವಾಗಿ ರೈತರು, ಯುವಕರು, ಕೂಲಿಕಾರರು ಸೇರಿ ಜನರ ಸರ್ವ ರಕ್ಷಣೆಗಾಗಿ ಶ್ರಮ ವಹಿಸಿ ಕೆಲಸ ಮಾಡುತ್ತೇನೆ. ರಾಜ್ಯದಲ್ಲಿ ಏನು ಬಜೆಟ್ ಮಾಡಿದ್ದೇವೋ ಅದನ್ನು ಪ್ರಮಾಣಿಕವಾಗಿ ಅನುಷ್ಠಾನಕ್ಕೆ ತರಲು ಕೆಲಸ ಮಾಡುತ್ತೇನೆ ಎಂದು ಬೊಮ್ಮಾಯಿ ಅವರು ಹೇಳಿದ್ದಾರೆ.

    ನನ್ನ ಮೇಲೆ ನಂಬಿಕೆ ಇಟ್ಟು ಅವಕಾಶ ಕೊಟ್ಟ ಪಕ್ಷ ಮತ್ತು ಶಾಸಕರು ಹಾಗೂ ಯಡಿಯೂರಪ್ಪ ಅವರಿಗೆಗೆ ಕೃತಜ್ಞತೆ ಸಲ್ಲಿಸುತ್ತೇನೆ. ನನ್ನ ಮೇಲೆ ಇಟ್ಟಿರುವ ವಿಶ್ವಾಸ ಉಳಿಸಿಕೊಳ್ಳುತ್ತೇನೆ ಎಂದು ಅವರು ತಿಳಿಸಿದ್ದಾರೆ.

    ‘ಬೊಮ್ಮಾಯಿ ಸಿಎಂ ಆಗಿದ್ದು ಖುಷಿ ತಂದಿದೆ, ಅವರು ನನ್ನ ಸಹೋದರರಂತೆ’ ಮುರುಗೇಶ್ ನಿರಾಣಿ

    ಸಿಎಂ ಬಸವರಾಜ ಬೊಮ್ಮಾಯಿ: ಇಂದೇ ಹಕ್ಕುಮಂಡನೆ, ನಾಳೆ ಮಧ್ಯಾಹ್ನ ಪ್ರಮಾಣವಚನ ಸ್ವೀಕಾರ..

    ಅಪ್ಪ-ಮಗ ಮುಖ್ಯಮಂತ್ರಿಯಾದ ರಾಜ್ಯದ ಎರಡನೇ ಕುಟುಂಬ ಇದು..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts