More

    ಪುನೀತ್‌ ರಾಜ್​​ಕುಮಾರ್‌ಗೆ ಬಸವಶ್ರೀ ಪ್ರಶಸ್ತಿ ಘೋಷಣೆ

    ಚಿತ್ರದುರ್ಗ: ಮುರುಘಾ ಮಠದ 2021ನೇ ಸಾಲಿನ ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿಯನ್ನು ಮರಣೋತ್ತರವಾಗಿ ನಟ ಪುನೀತ್‌ ರಾಜ್‌ಕುಮಾರ್ ಅವರಿಗೆ ಘೋಷಿಸಲಾಗಿದೆ.

    ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದ ಡಾ. ಶಿವಮೂರ್ತಿ ಮುರುಘಾ ಶರಣರು. ಬಾಲನಟನಾಗಿ, ನಾಯಕ ನಟನಾಗಿ, ಹಿನ್ನೆಲೆ ಗಾಯಕರಾಗಿ, ನಿರ್ಮಾಪಕರಾಗಿ ಕನ್ನಡ ಚಿತ್ರರಂಗಕ್ಕೆ ಅವರು ಅಪಾರ ಕೊಡುಗೆಯನ್ನು ನೀಡಿದ್ದಾರೆ. ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ರಾಯಭಾರಿಯಾಗಿ, ಸಾಮಾಜಿಕ ಜಾಗೃತಿ ಪ್ರಚಾರಕರಾಗಿಯೂ ಸಮಾಜ ಸೇವೆ ಸಲ್ಲಿಸಿದ್ದಾರೆ.

    ಇಂತಹ ಮೇರುನಟ ಇತ್ತೀಚೆಗೆ ಹೃದಯಾಘಾತದಿಂದ ನಮ್ಮನ್ನು ಅಗಲಿರುವುದು ಕೋಟ್ಯಂತರ ಅಭಿಮಾನಿಗಳಿಗೆ ನೋವನ್ನುಂಟು ಮಾಡಿದೆ. ಅವರ ಕುಟುಂಬದವರು ನೋವನ್ನು ಸಹಿಸಿಕೊಳ್ಳಲು ಬಸವಾದಿ ಪ್ರಮಥರ ಆಶೀರ್ವಾದ ಸದಾ ಇರಲಿ ಎಂದಿದ್ದಾರೆ.

    ಮಾನವೀಯ ಮೌಲ್ಯಗಳನ್ನೊಳಗೊಂಡಿದ್ದ ಪುನೀತ್ ಅವರ ಸಾಧನೆ ದೊಡ್ಡದು. ಚಿಕ್ಕ ವಯಸ್ಸಿನಲ್ಲಿಯೇ ಅದ್ವಿತೀಯ ಸಾಧನೆ ಮಾಡಿದ್ದಾರೆ. ಪ್ರಶಸ್ತಿಯು 5 ಲಕ್ಷ ರೂ. ನಗದು ಮತ್ತು ಫಲಕ ಒಳಗೊಂಡಿದೆ. ಬಸವ ಜಯಂತಿ ದಿನದಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು. ನ. 10ರಂದು ಬೆಂಗಳೂರಿನ ಪುನೀತ್ ಅವರ ನಿವಾಸಕ್ಕೆ ತೆರಳಿ ಅವರ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳುವುದಾಗಿ ಶರಣರು ತಿಳಿಸಿದರು.
    ಎಸ್‌ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ. ಪರಮಶಿವಯ್ಯ, ಆಡಳಿತ ಮಂಡಳಿ ಸದಸ್ಯ ಕೆಇಬಿ ಷಣ್ಣುಖಪ್ಪ ಇದ್ದರು.

    ಪುನೀತ್​ ಅಗಲಿಕೆ ನೋವು ತಾಳಲಾರದೆ ಮತ್ತೊಬ್ಬ ಅಭಿಮಾನಿ ಆತ್ಮಹತ್ಯೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts