18.5 C
Bangalore
Monday, December 16, 2019

ಬಸವೇಶ್ವರ ಬ್ಯಾಂಕ್ ಸರ್ವರಿಗೂ ಸಂಜೀವಿನಿ

Latest News

‘ದಿಶಾ ರೈಡ್ ಆಂಡ್ ವಾಕ್’ ಜಾಗೃತಿ ಜಾಥಾ

ಹುಬ್ಬಳ್ಳಿ: ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಆಶ್ರಯದಲ್ಲಿ ಇಲ್ಲಿನ ತೋಳನಕೆರೆಯಿಂದ ಬಿವಿಬಿ ಇಂಜಿನಿಯರಿಂಗ್ ಕಾಲೇಜ್​ವರೆಗೆ ಭಾನುವಾರ ಬೆಳಗ್ಗೆ ‘ದಿಶಾ ರೈಡ್ ಆಂಡ್ ವಾಕ್’ ಘೋಷಣೆಯೊಂದಿಗೆ...

‘ಆಟೋ ರಿಕ್ಷಾ ರನ್’

ಹುಬ್ಬಳ್ಳಿ: ಕನ್ಯಾಕುಮಾರಿಯಿಂದ ಅಹಮದಾಬಾದ್​ವರೆಗೆ ‘ಆಟೋ ರಿಕ್ಷಾ ರನ್’ ಹಮ್ಮಿಕೊಂಡಿರುವ ಇಂಗ್ಲೆಂಡಿನ ‘ಸೇವಾ ಯುಕೆ’ ಸಂಸ್ಥೆಯ ಅನಿವಾಸಿ ಭಾರತೀಯರು ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೋವಾದ...

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

ಬಾಗಲಕೋಟೆ: ರಾಜ್ಯದಲ್ಲಿಯೇ ಅತ್ಯುತ್ತಮ ಸಹಕಾರಿ ಬ್ಯಾಂಕ್ ಎಂದು ಹೆಸರುವಾಸಿಯಾಗಿರುವ ಬಾಗಲಕೋಟೆ ಬಸವೇಶ್ವರ ಸಹಕಾರಿ ಬ್ಯಾಂಕ್ ಸರ್ವರಿಗೂ ಸಂಜೀವಿನಿಯಾಗಿದೆ ಎಂದು ಮಾಜಿ ಸಚಿವ, ಬೀಳಗಿ ಶಾಸಕ ಮುರುಗೇಶ ನಿರಾಣಿ ಹೇಳಿದರು.

ನಗರದ ಚರಂತಿಮಠದಲ್ಲಿ ಭಾನುವಾರ ನಡೆದ ಬಸವೇಶ್ವರ ಬ್ಯಾಂಕಿನ 101ನೇ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ನನ್ನ ಉದ್ಯಮದ ಏಳಿಗೆಯಲ್ಲಿ ಬಸವೇಶ್ವರ ಬ್ಯಾಂಕ್ ಮತ್ತು ಅದರ ಅಧ್ಯಕ್ಷ ಪ್ರಕಾಶ ತಪಶೆಟ್ಟಿ ಅವರ ಸಹಾಯ ದೊಡ್ಡದಿದೆ. ಹೊಸ ಸಾಹಸಕ್ಕೆ ಕೈ ಹಾಕಿದಾಗಲೆಲ್ಲ ಸಾಲ ಸಾಲಭ್ಯ ನೀಡಿ ಪ್ರೋತ್ಸಾಹ ನೀಡಿದ್ದರ ಫಲವಾಗಿ ಇಂದು ಎರಡು ಸಾವಿರ ಕೋಟಿ ರೂ. ಉದ್ಯಮ ಹೊಂದಲ ಸಾಧ್ಯವಾಗಿದೆ ಎಂದರು.

ಪ್ರಕಾಶ ತಪಶೆಟ್ಟಿ ಅವರು ತಮ್ಮ ಕಾರ್ಯಕ್ಷಮತೆ, ದಕ್ಷತೆ, ಪ್ರಾಮಾಣಿಕತೆ ಫಲವಾಗಿ ಬ್ಯಾಂಕ್ ಅನ್ನು ಎತ್ತರಕ್ಕೆ ಬೆಳೆಸಿ 27 ಶಾಖೆವರೆಗೆ ವಿಸ್ತರಣೆ ಮಾಡಿದ್ದಾರೆ ಎಂದರು. ಮಾಜಿ ಸಚಿವ, ಶಾಸಕ ಗೋವಿಂದ ಕಾರಜೋಳ ಮಾತನಾಡಿ, ಪ್ರಕಾಶ ತಪಶೆಟ್ಟಿ ಸಹಕಾರಿ ರಂಗದ ದ್ರುವತಾರೆ. ಅವರ ನೇತೃತ್ವದಲ್ಲಿ ಬ್ಯಾಂಕ್ ಇನ್ನಷ್ಟು ಪ್ರಗತಿ ಹೊಂದಬೇಕು ಎಂದರು. ಬ್ಯಾಂಕಿನ ಅಧ್ಯಕ್ಷ ಪ್ರಕಾಶ ತಪಶೆಟ್ಟಿ ಬ್ಯಾಂಕ್ ಬೆಳೆದುಬಂದ ದಾರಿ ಕುರಿತು ಪ್ರಾಸ್ತಾವಿಕ ಮಾತನಾಡಿ, ಸದಸ್ಯರಿಗೆ ಶೇ.10ರಷ್ಟು ಲಾಭಾಂಶ ಘೊಷಿಸಿದರು.

ನಿರ್ದೇಶಕರಾದ ಸಿ.ಟಿ. ಪಾಟೀಲ, ಎಂ.ಎಸ್.ಏಳೆಮ್ಮಿ, ಎಸ್.ಎಸ್. ಕಂಕಣಮೇಲಿ, ಆರ್.ಎಸ್.ದಂಡನ್ನವರ, ಎಸ್.ಸಿ.ನಂದಿಕೋಲಮಠ, ಆರ್.ವೈ. ಪಟ್ಟಣದ, ವಿ.ವಿ.ಕಲಬುರ್ಗಿ, ಎಂ.ಎಸ್. ಜೋಳದ, ವಿ.ವಿ.ಶಿರಗಣ್ಣವರ, ಸುಮಿತ್ರಾ ಶಿರೂರ, ಸುನಿತಾ ಮುಳಗುಂದ, ಎಚ್.ಎಸ್. ರಾಠೋಡ, ಎಸ್.ಟಿ.ಬಳ್ಳಾರಿ, ಬಿ.ಎ.ಈಟಿ, ಎನ್.ಆರ್.ಕುಲಕರ್ಣಿ, ಎಂ.ಆರ್.ಗೌಡರ ಉಪಸ್ಥಿತರಿದ್ದರು. ಪ್ರಧಾನ ವ್ಯವಸ್ಥಾಪಕ ಬಿ.ಪಿ. ಬಣಗಾರ, ಸಲಹೆಗಾರ ಬಿ.ಎಸ್.ನಾವಲಗಿ, ಎಸ್.ಬಿ.ಬದಾಮಿ, ಎಂ.ಎಸ್. ಗುಡಗುಂಟಿ ಶಾಖಾ ವ್ಯವಸ್ಥಾಪಕ ಎಂ.ಎಚ್.ಕಳ್ಳಿಗುಡ್ಡ, ವಿ.ಎಂ. ಹಿರೇಮಠ ಮಹಾಸಭೆಯಲ್ಲಿ ವಿಷಯಗಳನ್ನು ಮಂಡಿಸಿ ಒಪ್ಪಿಗೆ ಪಡೆದರು.

ಸನ್ಮಾನ: ಜಿಲ್ಲೆಯ ಶಾಸಕರು, ಬಾಗಲಕೋಟೆ ನಗರ ಸಭೆ ನೂತನ ಸದಸ್ಯರನ್ನು ಸನ್ಮಾನಿಸಲಾಯಿತು. ವಿದ್ಯಾ ಚೈತನ್ಯ ಯೋಜನೆಯಡಿಯಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ, ಬಿ.ಎ., ಬಿಎಸ್ಸಿ, ಬಿ.ಕಾಂ. ಪದವಿಯಲ್ಲಿ ಜಿಲ್ಲೆಗೆ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರದೊಂದಿಗೆ ಶಾಲು ಹೊದಿಸಿ ಸನ್ಮಾನಿಸಲಾಯಿತು. ಉಪಾಧ್ಯಕ್ಷ ಎಂ.ಜಿ.ವಾಲಿ ವಂದಿಸಿದರು. ಬಿ.ಜಿ. ಹೊನವಾಡ ನಿರೂಪಿಸಿದರು. ಸಂತೋಷ ಗದ್ದನಕೇರಿ ಸಂಗೀತ ಸುಧೆ ಹರಿಸಿದರು.

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...