ಎನ್.ಆರ್.ಪುರ: ಮನುಷ್ಯ ಜಾತಿ, ಧರ್ಮದ ವ್ಯವಸ್ಥೆಯಲ್ಲಿ ಪರಿಸರ ಮರೆಯುತ್ತಿದ್ದಾನೆ. ಪ್ರಕೃತಿಯೇ ಎಚ್ಚರಿಕೆ ನೀಡುತ್ತಿದ್ದರೂ ಪರಿಸರ ಕಾಳಜಿ ವಹಿಸುತ್ತಿಲ್ಲ ಎಂದು ಸಿಂಹನಗದ್ದೆ ಬಸ್ತಿಮಠದ ಶ್ರೀ ಲಕ್ಷ್ಮೀಸೇನಾಭಟ್ಟಾರಕ ಸ್ವಾಮೀಜಿ ತಿಳಿಸಿದರು.
ಸಿಂಹನಗದ್ದೆ ಬಸ್ತಿಮಠದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಕವಿಗಳು ವರ್ಣನೆ ಮಾಡಿದಂತೆ ಮನುಕುಲಂ ತಾನೊಂದೆ ಎಂದು ಹೆಜ್ಜೆ ಹಾಕುತ್ತಾನೆ. ಆದರೆ ಭೂಮಿಯ ಮೇಲೆ ಮೂಕ ಪ್ರಾಣಿಗಳು ಸಹ ಇದೆ. ಪರಿಸರ ಹಾಳಾದರೆ ಮೂಕ ಪ್ರಾಣಿಗಳನ್ನು ಕಳೆದುಕೊಳ್ಳುತ್ತೇವೆ ಎಂದರು.
ನಾವು ಸ್ವರ್ಗವನ್ನು ಎಲ್ಲೋ ಇದೆ ಎಂದು ಹುಡುಕುವ ಬದಲು ಈ ಪರಿಸರದಲ್ಲೇ ಸ್ವರ್ಗವನ್ನು ಕಾಣಬಹುದು. ಆದರೆ ಪರಿಸರ ಸಂರಕ್ಷಣೆ ಮಾಡಬೇಕು. ಅರಣ್ಯ ಇಲಾಖೆ ಎಲ್ಲ ಶಾಲೆ, ದೇವಸ್ಥಾನ ಹಾಗೂ ವಿವಿಧ ಸರ್ಕಾರಿ ಕಚೇರಿಗೆ ಹಣ್ಣಿನ ಗಿಡಗಳನ್ನು ನೀಡುತ್ತಿದ್ದಾರೆ. ಪ್ರತಿಯೊಬ್ಬರು ಗಿಡಗಳನ್ನು ನೆಟ್ಟು ಪರಿಸರ ಉಳಿಸಿ ಬೆಳೆಸುವಲ್ಲಿ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಎನ್.ಆರ್.ಪುರದ ಉಪ ವಲಯ ಅರಣ್ಯಾಧಿಕಾರಿ ಗೌಸ್ ಮೊಹಿಯುದ್ದೀನ್, ಶಾಖೆ ಉಪವಲಯ ಅರಣ್ಯಾಧಿಕಾರಿ ಅರುಣ ಬಾರಂಗಿ, ಅರಣ್ಯ ಇಲಾಖೆಯ ನೌಕರರು, ಬಸ್ತಿಮಠದ ಸಿಬ್ಬಂದಿ ಇದ್ದರು.
ಕರಗಿದ ಮೇಣದಬತ್ತಿಯಿಂದ ಏನೆಲ್ಲಾ ಉಪಯೋಗ; ಬಿಸಾಡುವ ಬದಲು ಮರುಬಳಕೆ ಮಾಡಿ..
ಮನೆಯಲ್ಲಿ ಉಪಯೋಗಿಸುವ ಎಷ್ಟೋ ವಸ್ತುಗಳು ಕೆಲಕಾಲದ ನಂತರ ಹಳೆಯದಾಗುತ್ತದೆ. ಮತ್ತೆ ಕೆಲವು ಬಳಸಿದ ನಂತರ ನಾಶವಾಗುತ್ತದೆ.…
ಈರುಳ್ಳಿ ಸಿಪ್ಪೆಯನ್ನು ಎಸೆಯುವ ತಪ್ಪನ್ನು ಮಾಡಬೇಡಿ! ಸಿಪ್ಪೆ ವೇಸ್ಟ್ ಎಂದು ಬಿಸಾಡೋ ಬದಲು ಹೀಗೆ ಮಾಡಿ
ಯಾವುದೇ ಅಡುಗೆ ಮಾಡಿದ್ರು ಈರುಳ್ಳಿ ಬೇಕೆ... ಬೇಕು. ಈರುಳ್ಳಿಯು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ, ಆದರೆ…
ನಿಮ್ಮ ಅಂಗೈನಲ್ಲಿ ತ್ರಿಶೂಲ ಗುರುತು ಇದೆಯಾ ನೋಡಿ… ಇದರರ್ಥ ತಿಳಿದ್ರೆ ನಿಮ್ಮ ಹುಬ್ಬೇರೋದು ಖಚಿತ!
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…