ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ಕಿಂಗ್ಸ್ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಉಭಯ ತಂಡಗಳಿಗೂ ಇದು ನಾಕೌಟ್ ಪಂದ್ಯವಾಗಿದ್ದು, ಗೆದ್ದ ತಂಡ ಪ್ಲೇಆಫ್ ಪ್ರವೇಶಿಸಲಿದೆ.
ಇನ್ನೂ ಪಂದ್ಯ ಶುರುವಾಗುವುದಕ್ಕೂ ವಿರಾಟ್ ಕೊಹ್ಲಿ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಅವರಿಗೆ ನೀಡಿರುವ ಸಂದರ್ಶನದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಿಗೆ ನಿರಾಸೆಯನ್ನುಂಟು ಮಾಡಿದೆ.
ಇದನ್ನೂ ಓದಿ: ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ; ದೆಹಲಿ ಸಿಎಂ ಆಪ್ತ ಸಹಾಯಕ ಅರೆಸ್ಟ್
ವೈರಲ್ ಆಗಿರುವ ವಿಡಿಯೋ ನೋಡುವುದಾದರೆ, ವಿರಾಟ್ ಕೊಹ್ಲಿಗೆ ಸುರೇಶ್ ರೈನಾ ಅಭಿಮಾನಿಗಳು ಐಪಿಎಲ್ನಲ್ಲಿ ಬೌಲಿಂಗ್ ಮಾಡುವ ಬಗ್ಗೆ ನಿರಂತರವಾಗಿ ಕೇಳುತ್ತಿರುವ ಬಗ್ಗೆ ಪ್ರಶ್ನಿಸುತ್ತಾರೆ. ಇದಕ್ಕೆ ನಗುತ್ತಾ ಉತ್ತರಿಸುವ ವಿರಾಟ್ ನಾನು ಬೌಲಿಂಗ್ ಮಾಡಲು ಶುರು ಮಾಡಿದರೆ ಬ್ಯಾಟಿಂಗ್ ಮಾಡುವ ವೇಳೆ ಇರುವ ಆತ್ಮವಿಶ್ವಾಸವೂ ಹೊರಟಿ ಹೋಗುತ್ತದೆ. ಅನೇಕ ಬಾರಿ ಸಹ ಆಟಗಾರರು ಬೌಲಿಂಗ್ ಮಾಡುವಂತೆ ಹೇಳಿದ್ದಾರೆ. ಆದರೆ, ಐಪಿಎಲ್ ನಾನು ಹಾಗೆ ಮಾಡುವುದಿಲ್ಲ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.
2023ರಲ್ಲಿ ಭಾರತದ ಆತಿಥ್ಯದಲ್ಲಿ ನಡೆದ ಏಕದಿನ ವಿಶ್ವಕಪ್ನಲ್ಲಿ ವಿರಾಟ್ ಕೊಹ್ಲಿ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ ಬೌಲಿಂಗ್ ಮಾಡಿ ಒಂದು ವಿಕೆಟ್ ಪಡೆದಿದ್ದರು. ಇದಾದ ಬಳಿಕ ಅಭಿಮಾನಿಗಳು ಅವರನ್ನು ನಿರಂತರವಾಗಿ ಬೌಲಿಂಗ್ ಮಾಡುವಂತೆ ಆಗ್ರಹಿಸುತ್ತಿದ್ದಾರೆ. ಈ ಬೆನ್ನಲ್ಲೇ ಕೊಹ್ಲಿ ನೀಡಿರುವ ಪ್ರತಿಕ್ರಿಯೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.