More

    ಮೂರು ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಹೀನಾಯ ಸೋಲು: ರಾಹುಲ್​ ಗಾಂಧಿ ಹೇಳಿದ್ದಿಷ್ಟು…

    ನವದೆಹಲಿ: ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಜನರು ನೀಡಿದ ತೀರ್ಪನ್ನು ಸ್ವೀಕರಿಸುತ್ತೇನೆ ಮತ್ತು ನಮ್ಮ ಸಿದ್ಧಾಂತದ ಹೋರಾಟ ಮುಂದುವರಿಯಲಿದೆ ಎಂದು ಎಂದು ಕಾಂಗ್ರೆಸ್​ ನಾಯಕ ಹಾಗೂ ವಯನಾಡು ಕ್ಷೇತ್ರದ ಸಂಸದ ರಾಹುಲ್​ ಗಾಂಧಿ ಹೇಳಿದರು.

    ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್​ಗಢ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಹೀನಾಯ ಸೋಲು ಅನುಭವಿಸಿದ ಬೆನ್ನಲ್ಲೇ ರಾಹುಲ್​ ಗಾಂಧಿ ಅವರು ತಮ್ಮ ಎಕ್ಸ್​ ಖಾತೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ನಾವು ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನದ ಜನಾದೇಶವನ್ನು ನಮ್ರತೆಯಿಂದ ಸ್ವೀಕರಿಸುತ್ತೇವೆ. ನಮ್ಮ ಸಿದ್ಧಾಂತದ ಯುದ್ಧ ಮುಂದುವರಿಯುತ್ತದೆ ಎಂದಿರುವ ರಾಹುಲ್​ ಗಾಂಧಿ, ತೆಲಂಗಾಣದಲ್ಲಿ ಪಕ್ಷದ ಗೆಲುವಿನ ಕುರಿತು, ತೆಲಂಗಾಣ ಜನತೆಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ. ಪ್ರಜಾಲು ತೆಲಂಗಾಣ ಮಾಡುವ ಭರವಸೆಯನ್ನು ನಾವು ಖಂಡಿತವಾಗಿಯೂ ಈಡೇರಿಸುತ್ತೇವೆ ಎಂದಿದ್ದಾರೆ.

    ಚುನಾವಣೆಯಲ್ಲಿ ತಮ್ಮ ಶ್ರಮ ಮತ್ತು ಬೆಂಬಲಕ್ಕಾಗಿ ಎಲ್ಲ ಕಾರ್ಯಕರ್ತರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ರಾಹುಲ್​ ಗಾಂಧಿ ತಿಳಿಸಿದ್ದಾರೆ.

    ದೊರಲು (ಜಮೀನುದಾರರು) ಗಾಗಿ ಕೆಲಸ ಮಾಡುವವರ ವಿರುದ್ಧ ಹೋರಾಡುವುದು ಮತ್ತು ಪ್ರಜಾಲು (ಸಾಮಾನ್ಯ ಪ್ರಜೆಗಳು) ಪರ ಕೆಲಸ ಮಾಡುವುದು ಕಾಂಗ್ರೆಸ್​ನ ತೆಲಂಗಾಣ ಅಭಿಯಾನದ ಮುಖ್ಯ ವಿಷಯವಾಗಿತ್ತು. ಇದೀಗ ಗೆಲುವು ಸಾಧಿಸಿ, ಅಧಿಕಾರ ರಚನೆಯತ್ತ ದಾಪುಗಾಲು ಇಟ್ಟಿದೆ.

    ಕಾಂಗ್ರೆಸ್​ ಗೆಲುವಿಗೆ ಭಾರತ್​ ಜೋಡೋ ಯಾತ್ರೆ ಪ್ರಮುಖ ಕಾರಣ ಎನ್ನಲಾಗುತ್ತಿದೆ. ಆದರೆ, ಕರ್ನಾಟಕದ ಕಾಂಗ್ರೆಸ್​ ಗ್ಯಾರಂಟಿಗಳು ಸಹ ತೆಲಂಗಾಣದಲ್ಲಿ ಪ್ರಭಾವ ಬೀರಿದೆ ಎಂದು ಹೇಳಲಾಗುತ್ತಿದೆ.

    ಇನ್ನು ಫಲಿತಾಂಶದ ವಿಚಾರಕ್ಕೆ ಬಂದರೆ, ಹ್ಯಾಟ್ರಿಕ್​ ಗೆಲುವಿನ ನಿರೀಕ್ಷೆಯಲ್ಲಿದ್ದ ಕೆ. ಚಂದ್ರಶೇಖರ್​ ರಾವ್​ ನೇತೃತ್ವದ ಭಾರತ್​ ರಾಷ್ಟ್ರ ಸಮಿತಿ (ಬಿಆರ್​ಎಸ್​)ಗೆ ತೆಲಂಗಾಣ ಮತದಾರರು ಶಾಕ್​ ನೀಡಿದ್ದು, ಈ ಬಾರಿ ಕಾಂಗ್ರೆಸ್​ ಮೇಲೆ ತಮ್ಮ ಒಲವು ತೋರಿದ್ದಾರೆ. ಅಖಂಡ ಆಂಧ್ರಪ್ರದೇಶದಿಂದ ಇಬ್ಭಾಗವಾಗಿ ಸ್ವತಂತ್ರ ತೆಲಂಗಾಣ ರಾಜ್ಯ ರಚನೆಯಾದಾಗಿನಿಂದ ಕೆ. ಚಂದ್ರಶೇಖರ್​ ರಾವ್​ ಅವರ ಬಿಆರ್​ಎಸ್​ ಪಕ್ಷ ಆಡಳಿತದಕಲ್ಲಿತ್ತು. ಎರಡು ದಶಕಗಳ ಆಡಳಿತಕ್ಕೆ ಈ ಬಾರಿ ಬ್ರೇಕ್​ ಬಿದ್ದಿದೆ.

    ಒಟ್ಟು 119 ವಿಧಾನಸಭಾ ಸ್ಥಾನಗಳಲ್ಲಿ ಕಾಂಗ್ರೆಸ್​ 65 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ತೆಲಂಗಾಣದಲ್ಲಿ ಅಧಿಕಾರ ರಚನೆಯತ್ತ ದಾಪುಗಾಲು ಇಟ್ಟಿದೆ. ಆಡಳಿತರೂಢ ಬಿಆರ್​ಎಸ್​ ಕೇವಲ 39 ಸ್ಥಾನಗಳಿಗೆ ಕುಸಿದಿದೆ. ಬಿಜೆಪಿ 8 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ತಮ್ಮ ಖ್ಯಾತಿಯನ್ನು ಹೆಚ್ಚಿಸಿಕೊಳ್ಳುತ್ತಿದೆ. (ಏಜೆನ್ಸೀಸ್​)

    ಮೂರು ರಾಜ್ಯಗಳಲ್ಲಿ ಬಿಜೆಪಿಗೆ ಭರ್ಜರಿ ಗೆಲುವು​: ವಿಶೇಷ ಸಂದೇಶ ರವಾನಿಸಿದ ಪ್ರಧಾನಿ ಮೋದಿ

    ಮತಎಣಿಕೆ ನಡುವೆ ತೆಲಂಗಾಣ ಕಾಂಗ್ರೆಸ್​ ಮುಖ್ಯಸ್ಥರ ಭೇಟಿ: ಡಿಜಿಪಿ ಅಂಜನಿ ಕುಮಾರ್​ ಸಸ್ಪೆಂಡ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts