More

    BBKS10: ‘ಫೇಕ್ ಅನಿಸಿಕೊಂಡು ಫ್ರೆಂಡ್‌ಶಿಪ್ ಮಾಡುವ ಬದಲು’….; ಅಸಲಿಗೆ ಭಾಗ್ಯಶ್ರೀ ಹೇಳಿದ್ದೇನು?

    ಬೆಂಗಳೂರು: ಈ ವಾರ ನಡೆದ ಡಬಲ್​ ಎಲಿಮಿನೇಷನ್​ ಪೈಕಿ ಮೊದಲು ಇಶಾನಿ ಹೊರಬಂದರು ತದನಂತರ ಸೂಪರ್​ ಸಂಡೆ ವಿತ್​ ಸುದೀಪ್​ ಸಂಚಿಕೆಯಲ್ಲಿ ಭಾಗ್ಯಶ್ರೀ ಎಲಿಮಿನೇಟ್​ ಆಗಿ ಹೊರನಡೆದರು. ಇದೀಗ ಆರನೇ ವಾರದಲ್ಲಿ ಮನೆಯಿಂದ ಔಟ್ ಆದ ಬಗ್ಗೆ ಹಾಗೂ ಒಂದಷ್ಟು ಅನುಭವಗಳ ಕುರಿತು ಭಾಗಶ್ರೀ ಮನಬಿಚ್ಚಿ ಮಾತನಾಡಿದ್ದಾರೆ.

    ಇದನ್ನೂ ಓದಿ: ತೇವಗೊಂಡ ಕಣ್ಣು, ಭಾರವಾದ ಹೃದಯ…ಟೀಂ ಇಂಡಿಯಾ ಡ್ರೆಸ್ಸಿಂಗ್ ರೂಂನಲ್ಲಿ ಕಂಡುಬಂದ ದೃಶ್ಯಗಳಿವು

    ಬಿಗ್‌ಬಾಸ್ ಪ್ರಯಾಣ ಭಾಗ್ಯಶ್ರೀ ಅವರಿಗೆ ಈ ವಾರ ಕೊನೆಗೊಂಡಿದೆ. ಕೆಲವೊಮ್ಮೆ ಪರಿಶ್ರಮದಿಂದ, ಇನ್ನು ಕೆಲವೊಮ್ಮೆ ಅದೃಷ್ಟದ ಬಲದಿಂದ ಮಿಂಚುತ್ತ ಉಳಿದುಕೊಂಡಿದ್ದ ಭಾಗ್ಯಶ್ರೀ ಮನೆಯಿಂದ ಹೊರಗೆ ಬಂದಿದ್ದಾರೆ. ಬಿಗ್‌ಬಾಸ್ ಮನೆಯಲ್ಲಿ ಇಷ್ಟು ವಾರಗಳ ಕಾಲ ಅವರ ಬದುಕು ಹೇಗಿತ್ತು? ಮನೆಯಿಂದ ಹೊರಗೆ ಬರಲು ಕಾರಣವಾದ ಸಂಗತಿಗಳು ಯಾವವು? ಅವರ ಪ್ರಕಾರ ಮನೆಯೊಳಗೆ ಯಾರು ಫೇಕ್‌? ಯಾರು ಜೆನ್ಯೂನ್? ಎಂಬುದನ್ನು ಸ್ಪಷ್ಟವಾಗಿ ತಿಳಿಸಿದ್ದಾರೆ.

    “ಇದು ಕೊನೆ ಅಂತ ಖಂಡಿತವಾಗಲೂ ಹೇಳೋದಿಲ್ಲ. ಅಲ್ಲಿ ತೆಗೆದುಕೊಂಡಿರುವ ಅನುಭವಗಳು ನನ್ನ ಜೀವನದಲ್ಲಿ ಹೊಸ ಪ್ರಾರಂಭ ಅಂತಲೇ ಹೇಳ್ತೀನಿ. ಇವತ್ತು ಮನೆಯಿಂದ ಹೊರಗಡೆ ಬರ್ತೀನಿ ಅಂತ ನಿರೀಕ್ಷೆ ಮಾಡಿದ್ದೆ. ಎಲ್ರೂ ನನ್ನ ನೋಡ್ತಿದ್ದ ರೀತಿ ಹೇಗಿತ್ತು ಅಂದ್ರೆ, ‘ಇವ್ರು ಟಾಸ್ಕ್‌ನಲ್ಲಿ ತುಂಬ ಹಿಂದೆ ಉಳಿಯುತ್ತಾರೆ’ ಎಂದೇ ನೋಡುತ್ತಿದ್ದರು. ಗ್ರೂಪ್‌ಗೆ ನನ್ನ ತೆಗೆದುಕೊಳ್ಳಬೇಕಾದರೆ, ನಾನು ಕೈಯೆತ್ತಿದರು ನನ್ನ ಸೆಲೆಕ್ಟ್ ಮಾಡ್ತಿರ್ಲಿಲ್ಲ. ಯಾಕೆಂದರೆ ಅವರಿಗೆ ಯಾರಿಗೂ ನಾನು ಟಾಸ್ಕ್ ಮಾಡಬಲ್ಲೆ ಎಂಬ ನಂಬಿಕೆಯೂ ಇರ್ತಿರ್ಲಿಲ್ಲ” ಎಂದರು.

    ಇದನ್ನೂ ಓದಿ: ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಂಭುಲಿಂಗನಗೌಡ ವಾಹನ ಕಳ್ಳತನ !?

    “ಸಿಕ್ಕಿದ ಅವಕಾಶಗಳಲ್ಲಿ ನಾನು ಖಂಡಿತವಾಗಲೂ ನನ್ನ ಎಫರ್ಟ್‌ ನೂರಕ್ಕೆ ನೂರು ಕೊಟ್ಟಿದ್ದೀನಿ. ಗುಂಪು ಅಂತ ಬಂದಾಗ, ಯಾರ ಗುಂಪಿನಲ್ಲಿಯೂ ಪರ್ಟಿಕ್ಯೂಲರ್ ಆಗಿ ಸೇರಿಕೊಳ್ಳಲು ನನಗೆ ಇಷ್ಟವಿರಲಿಲ್ಲ. ನಾನು ಸೀರೆ ಉಟ್ಕೊಂಡು ಆರಾಮಾಗಿ ದೇವರ ಪೂಜೆ ಮಾಡ್ಕೊಂಡು ಹಾಡು ಹಾಡ್ಕೊಂಡು ಇರ್ತೀನಿ ಅನ್ನೊ ಕಾರಣಕ್ಕೋ ಏನೋ ಗೊತ್ತಿಲ್ಲ. ಅಮ್ಮ ಅಂತ ಕರ್ಕೊಂಡು, ಬೇರೆ ಥರ ಮಾತುಕತೆಗೆ ಅಲ್ಲ ಎಂದು ಅವರೇ ಅವಾಯ್ಡ್ ಮಾಡ್ತಿದ್ರು. ನಾನು ಅವರ ಜತೆಗೆ ಸೇರಲು ಯತ್ನಿಸಿದಾಗಲೆಲ್ಲ, ‘ಇವ್ರು ಫೇಕಾ? ಸುಮ್ನೆ ನಮ್ ಜೊತೆ ಮಿಂಗಲ್ ಆಗೋಕೆ ಟ್ರೈ ಮಾಡ್ತಿದ್ದಾರಾ ಅಂತೆಲ್ಲ ಮಾತು ಬರ್ತಿತ್ತು” ಎಂದು ಹೇಳಿದರು.

    “ಫೇಕ್ ಅಂತ ಅನಿಸಿಕೊಂಡು ಫ್ರೆಂಡ್‌ಷಿಪ್ ಮಾಡುವ ಬದಲು, ಆಟವಾಡುವಾಗ ಎಲ್ಲರ ಜತೆಯಿದ್ದು, ಉಳಿದ ಟೈಮಲ್ಲಿ ನನ್ನ ಪಾಡಿಗೆ ನಾನು ಇದ್ರಾಯ್ತಲ್ವಾ ಅಂದ್ಕೊಳ್ತಿದ್ದೆ. ಆದರೆ ಗುಂಪಲ್ಲೇ ಇದ್ದು ಆಡಬೇಕು. ಆಗ ಇನ್ನೊಂದಿಷ್ಟು ವಾರ ಇರ್ತಿದ್ದೆ ಅನ್ನೋದು ಖಂಡಿತ ಸುಳ್ಳು. ಆ ಥರ ನನಗೆ ಯಾವಾಗಲೂ ಅನಿಸಿಲ್ಲ” ಎಂದರು.

    ವಿಶ್ವಕಪ್​ಗೆ ಧರ್ಮದ ಲೇಪನ: ಸರಣಿ ಪೋಸ್ಟ್​ ಮೂಲಕ ಭಾರತೀಯರ ಸ್ವಾಭಿಮಾನ ಕೆಣಕಿದ ಪಾಕ್​ ನಟಿ

    ರಾಜ್ಯೋತ್ಸವ ರಸಪ್ರಶ್ನೆ - 20

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts