BBKS10: ಅರ್ಧ ಶೇರ್​ಗೆ ಒಪ್ಪದ ತನಿಷಾ; ಲಕ್ಷುರಿಗಾಗಿ ಮನೆಯೊಳಗೆ ನಡೆದಿದ್ದು....?

ವಿಜಯವಾಣಿ - 2023-12-22T155959.737
Published on

ಬೆಂಗಳೂರು: ಈ ವಾರ ಬಿಗ್‌ಬಾಸ್ ಮನೆಯಲ್ಲಿ ವ್ಯವಹಾರದ್ದೇ ಮೇನಿಯಾ. ಖರೀದಿ ಮಾರಾಟದ ವ್ಯವಹಾರ ಈಗ ಹೊಸದೊಂದು ತಿರುವು ಪಡೆದುಕೊಂಡಿದ್ದು, ಇಷ್ಟು ದಿನ ವ್ಯಕ್ತಿಗಳನ್ನು ಖರೀದಿಸುವ ಟಾಸ್ಕ್‌ಗಳ ಮೂಲಕ ಹಣ ಸಂಪಾದಿಸುವ ಚಟುವಟಿಕೆಯಲ್ಲಿ ಮುಳುಗಿಹೋಗಿದ್ದ ಸದಸ್ಯರಿಗೆ ಬಿಗ್‌ಬಾಸ್‌ ಹೊಸದೊಂದು ಅವಕಾಶ ನೀಡಿದ್ದಾರೆ.

ಅದು ಲಕ್ಷುರಿ ಖರೀದಿಸುವ ಅವಕಾಶ. ಆದ್ರೆ, ಮನೆಯ ಸದಸ್ಯರು ಅವರ ಬಳಿ ಇರುವ ಹಣದಿಂದ ದಿನಸಿಗಳನ್ನು ಖರೀದಿಸಬೇಕು. ಯಾರ ಬಳಿ ಇರುವ ಹಣವನ್ನು ದಿನಸಿಗೆ ವ್ಯಯಿಸಬೇಕು ಎಂಬಲ್ಲಿ ಮನೆಯ ಸದಸ್ಯರಲ್ಲಿ ಭಿನ್ನಾಭಿಪ್ರಾಯ ಮೂಡಿದೆ. ‘ಲೀಡರ್‍ಗಳ ಬಳಿ ಜಾಸ್ತಿ ಹಣವಿದೆ’ ಎಂದು ವಿನಯ್‌ ಹೇಳಿದ್ದಾರೆ. ಇದಕ್ಕೆ ಸಂಗೀತಾ, ‘ಅರ್ಧ ಅರ್ಧ ಶೇರ್ ಮಾಡಿಕೊಳ್ಳೋಣ’ ಎಂದು ತನಿಷಾಗೆ ಹೇಳಿದ್ದಾರೆ.

ಸಂಗೀತಾ ಮಾತಿಗೆ ಒಪ್ಪದ ತನಿಷಾ, ಆಗುವುದಿಲ್ಲ ಎಂದು ನಿರಾಕರಿಸಿದ್ದಾರೆ. ‘ದಿನಸಿ ಬೇಕಾಗಿರುವುದು ಮನೆಯ ಎಲ್ಲ ಸದಸ್ಯರಿಗೆ. ಹಾಗಾಗಿ ಎಲ್ಲರೂ ಹಣ ವ್ಯಯಿಸಬೇಕು ಎಂಬುದು ಅವರ ವಾದ. ಈ ಹೊತ್ತಿನಲ್ಲಿ ಮಧ್ಯಪ್ರವೇಶಿಸಿದ ನಮ್ರತಾ ವಿರುದ್ಧವೂ ತನಿಷಾ ಹರಿಹಾಯ್ದಿದ್ದಾರೆ. ಇದರಿಂದ ಮಾತಿಗೆ ಮಾತು ಬೆಳೆದು ದೊಡ್ಡ ಜಟಾಪಟಿಯೇ ನಡೆದಿದೆ.

ಮನೆಯ ಸದಸ್ಯರ ಭಿನ್ನಾಭಿಪ್ರಾಯದಲ್ಲಿ ಲಕ್ಷುರಿ ಬಜೆಟ್ ಕಳೆದುಕೊಳ್ಳುತ್ತಾರಾ? ಯಾರ ಹಣದಲ್ಲಿ ಲಕ್ಷುರಿ ಮನೆಗೆ ಬರುತ್ತದೆ? ಎಂಬುದನ್ನು ಇಂದಿನ ಸಂಚಿಕೆಯಲ್ಲಿ ತಿಳಿಯಬೇಕಿದೆ. ದಿನದ 24 ಗಂಟೆಗಳ ಲೈವ್​ ಸ್ಟ್ರೀಮಿಂಗ್ ಜಿಯೋ ಸಿನಿಮಾದಲ್ಲಿ ಪ್ರಸಾರವಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net