ಬೆಂಗಳೂರು: ಬಿಗ್‌ಬಾಸ್ ಮನೆಯಿಂದ ಶನಿವಾರ ನಡೆದ ವಾರದ ಕಥೆ ಕಿಚ್ಚನ ಜತೆ ಸಂಚಿಕೆಯಲ್ಲಿ ಡಬಲ್ ಎಲಿಮಿನೇಷನ್ಗೆ ಮೊದಲು ತುತ್ತಾಗಿದ್ದು ಇಶಾನಿ, ಬಿಗ್ ಮನೆಯಿಂದ ಹೊರಬಿದ್ದ ಕೂಡಲೇ ಸುದೀಪ್ ಎದುರು ಬಿಕ್ಕಿ ಬಿಕ್ಕಿ ಅತ್ತು, ಅವಕಾಶ ಕೊಟ್ಟರೆ ಒಳಗೆ ಹೋಗುವೆ ಎಂದರು. ಇದೀಗ ಬಿಗ್ ಬಾಸ್ ಮನೆಯೊಳಗೆ ಕಳೆದ ನೆನಪುಗಳು, ಸದಸ್ಯರ ಜತೆಗಿದ್ದ ಅನುಭವವನ್ನು ಜಿಯೋ ಸಿನಿಮಾ ನಡೆಸಿದ ಕಿರು ಸಂದರ್ಶನದಲ್ಲಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: 30 ದಿನ ಅನ್ನ ಸೇವಿಸೋದನ್ನ ನಿಲ್ಲಿಸಿದ್ರೆ, ದೇಹದಲ್ಲಿ ಈ ಎಲ್ಲಾ ಬದಲಾವಣೆಗಳು ಕಂಡು ಬರುತ್ತವೆ..!
“ನನಗೆ ಏನು ಹೇಳಬೇಕು ಗೊತ್ತಾಗ್ತಿಲ್ಲ. ಬಿಗ್‌ಬಾಸ್ ಮನೆಯಿಂದ ಆಚೆ ಬಂದಿದೀನಿ. 99 ಪರ್ಸೆಂಟ್ ನಾನು ಇರ್ತೀನಿ ಅಂತ ಆತ್ಮವಿಶ್ವಾಸವಿತ್ತು. ಉಳಿದ ಒಂದು ಪರ್ಸೆಂಟ್ ನನಗೆ ಆಗಲ್ಲ ಅನಿಸಿತ್ತು. ನನಗೆ ಹಟ ಜಾಸ್ತಿ ಇದೆ. ಗೇಮ್ ಆಡುವ ಅವಕಾಶ ಜಾಸ್ತಿ ಸಿಗಲಿಲ್ಲ. ಅದರಿಂದ ನನಗೆ ಬೇಜಾರಾಗಿತ್ತು. ನನ್ನನ್ನು ಯಾರೂ ಸೀರಿಯಸ್ ಆಗಿ ತಗೊಂಡಿರಲಿಲ್ಲ. ಹಾಗಾಗಿ ನನ್ನ ಸ್ಟ್ರೆಂಥ್ ತೋರಿಸಲಾಗಲಿಲ್ಲ” ಎಂದರು.
“ಮತ್ತೆ ಬಿಗ್‌ಬಾಸ್‌ಗೆ ಹೋಗುವುದು ಸಾಧ್ಯವಾದರೆ ನಾನು ನನ್ನದೇ ಲೆಕ್ಕಾಚಾರ ಇಟ್ಟುಕೊಂಡು ಆಟ ಆಡುತ್ತಿದ್ದೆ. ಯಾರು ಫೇಕ್, ಯಾರು ರಿಯಲ್ ಎಂದು ವಿಶ್ಲೇಷಿಸಿ ಮುಂದಡಿ ಇಡುತ್ತಿದ್ದೆ. ಟಾಸ್ಕ್ ವಿಷಯಲ್ಲಿಯೂ ನಾನು ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದ್ದೆ. ಏನಾದರೂ ಇರಲಿ, ನಾನು ನನಗೋಸ್ಕರ ಆಡುತ್ತಿದ್ದೆ. ಇನ್ಯಾರಿಗೋಸ್ಕರನೋ ಅಲ್ಲ. ಟೀಮ್‌ನಲ್ಲಿ ಆಡಬೇಕು ಅಂದರೆ ನಾನು ನನಗೋಸ್ಕರ ಆಟ ಆಡ್ತಿದ್ದೆ. ಟೀಮ್ ಗೆಲ್ಲಬೇಕು ಅಂತಲೇ ಆಟ ಆಡ್ತಿದ್ದೆ. ಇವೆರಡನ್ನೂ ಉಪಯೋಗಿಸಿಕೊಳ್ಳಲು ಫೋಕಸ್ ಮಾಡುತ್ತಿದ್ದೆ” ಎಂದರು.
ಇದನ್ನೂ ಓದಿ: ಮತ್ತೊಂದು ವಿವಾದ ಮೈಮೇಲೆ ಎಳೆದುಕೊಂಡ ಚಾಲೆಂಜಿಂಗ್ ಸ್ಟಾರ್ – ಸಾರ್ವಜನಿಕವಾಗಿ ಲಾಂಗ್ ಹಿಡಿದು ದರ್ಶನ್ ಪೋಸ್
ಯಾರು ಜೆನ್ಯೂನ್? ಯಾರು ಫೇಕ್? ಎಂಬ ವಿಷಯಕ್ಕೆ ಪ್ರತಿಕ್ರಿಯಿಸಿದ ಇಶಾನಿ, “ಮನೆಯೊಳಗೆ ವಿನಯ್, ನಮ್ರತಾ ಎಲ್ಲರೂ ಜೆನ್ಯೂನ್ ಆಗಿಯೇ ಇದ್ದರು. ನನ್ನ ಪ್ರಕಾರ ಮೈಕಲ್ ತುಂಬ ಜೆನ್ಯೂನ್ ಆಗಿದ್ದಾರೆ. ನ್ಯಾಯವಾಗಿದ್ದರು. ಅದು ಪ್ರಾರಂಭದಲ್ಲಿ ನನಗೆ ಕಾಣಿಸಲಿಲ್ಲ. ಕೊನೆಕೊನೆಗೆ ಕಾಣಿಸಿತು. ಈಗ ನಾನು ವಾಪಸ್ ಹೋಗಲು ಸಾಧ್ಯವಾದರೆ ಎಲ್ಲದಕ್ಕೂ ಮೈಕಲ್ ಸೈಡ್ ತಗೋತಿದ್ದೆ. ತುಕಾಲಿ ಸಂತೋಷ್ ಅವರನ್ನು ಊಸರವಳ್ಳಿ ಎಂದು ಕರೆದಿದ್ದೆ. ಅದಕ್ಕೆ ಕಾರಣವಿದೆ” ಎಂದು ಹೇಳಿದರು.
“ಯಾಕೆಂದರೆ ಅವರು ಒಂದು ಸಲ ನನ್ನ ಜೊತೆ ಸರಿಯಾಗಿ ಮಾತಾಡ್ತಿದ್ರು. ಮತ್ತೊಮ್ಮೆ ಇನ್ನೊಂದು ಗ್ರೂಪಲ್ಲಿ ಹೋಗಿ ಇನ್ನೇನಾದ್ರೂ ಹೇಳ್ತಿದ್ರು. ಉದ್ದೇಶಪೂರ್ವಕವಾಗಿ ಡ್ರಾಮಾ ಕ್ರಿಯೇಟ್ ಮಾಡಿ ಕಾಣೆಯಾಗ್ತಿದ್ರು. ಹಾಗಾಗಿ ಅವರು ನನಗೆ ಒಂಚೂರು ಇಷ್ಟವಾಗಲಿಲ್ಲ.
ಅವರು ನಂಬರ್ ಒನ್ ಫೇಕ್. ಎರಡನೇ ಫೇಕ್ ನೀತು. ಅವರಿಗೆ ಪರ್ಸನಾಲಿಟಿ ಇರಲೇ ಇಲ್ಲ” ಎಂದು ಹೇಳಿದ್ದಾರೆ.
ನಿರೀಕ್ಷೆ ಹೆಚ್ಚಿಸಿದ ‘ಅರವಿಂದ್-ದಿವ್ಯಾ’ ಜೋಡಿ!; ತೆರೆ ಮೇಲೆ ಮಾಡಲಿದ್ದಾರಾ ಮೋಡಿ?