More

    BBKS10: ಏಳನೇ ವಾರಕ್ಕೆ ಮನೆಯಿಂದ ಹೊರಬಂದ ಸ್ಪರ್ಧಿ ನೀತು ವನಜಾಕ್ಷಿ​!; ಹಂಚಿಕೊಂಡ ವಿಷಯಗಳಿವು

    ಬೆಂಗಳೂರು: ಕನ್ನಡದ ಬಿಗ್‌ಬಾಸ್‌ ಸೀಸನ್​ 10 ಇದೀಗ 50 ದಿನಗಳನ್ನು ಯಶಸ್ವಿಯಾಗಿ ಪೂರೈಸಿದ್ದು, ಈ ಸಂಭ್ರವನ್ನು ಕೇಕ್​ ಕತ್ತರಿಸುವ ಮೂಲಕ ಸ್ಪರ್ಧಿಗಳು ಸಂಭ್ರಮಿಸಿದರು. ಈ ವಾರದ ‘ಸೂಪರ್ ಸಂಡೆ ವಿಥ್ ಸುದೀಪ್‌’ ಸಂಚಿಕೆಯಲ್ಲಿ ಐವತ್ತು ದಿನಗಳ ಪಯಣದ ವಿಟಿಯನ್ನೂ ಹಾಕಿ ತೋರಿಸಲಾಗಿದೆ. ಐವತ್ತು ದಿನಗಳ ಕಾಲದ ಏಳುಬೀಳಿನ ಹಾದಿಯನ್ನು ನೋಡಿ ಸ್ಪರ್ಧಿಗಳು ಭಾವುಕರಾದರು.

    ಇದನ್ನೂ ಓದಿ: ಖಾಕಿ ಕರ್ತವ್ಯಕ್ಕೆ ಕಣ್ಗಾವಲು! ಬಂಧನ ವೇಳೆ ಬಾಡಿವೋರ್ನ್ ಕ್ಯಾಮರಾ ಕಡ್ಡಾಯ, ಡಿಜಿ-ಐಜಿ ಆದೇಶ

    ನಂತರ ನಾಮಿನೇಷನ್‌ ಪಟ್ಟಿಯಲ್ಲಿದ್ದ ಸ್ಪರ್ಧಿಗಳಲ್ಲಿ ಮೊದಲು ನಮ್ರತಾ ಅವರು ಸೇಫ್‌ ಎಂದು ಸುದೀಪ್​ ತಿಳಿಸಿದರು. ನಂತರ ಸೇಫ್‌ ಆಗಿದ್ದು, ತುಕಾಲಿ ಸಂತೋಷ್. ಸ್ನೇಹಿತ್‌ ಕೂಡ ಸೇಫ್‌ ಆದರು. ಆ ಹಂತದಲ್ಲಿ ನಾಮಿನೇಷನ್ ಲೀಸ್ಟ್‌ನಲ್ಲಿ ಉಳಿದವರು ನೀತು ಮತ್ತು ಸಿರಿ. ಅವರಿಬ್ಬರಲ್ಲಿ ಸಿರಿ ಸೇಫ್ ಆಗಿದ್ದಾರೆ ಮತ್ತು ನೀತು ವನಜಾಕ್ಷಿ ಅವರ ಬಿಗ್‌ಬಾಸ್ ಪಯಣ ಈ ಎಪಿಸೋಡ್‌ನೊಂದಿಗೆ ಅಂತ್ಯಗೊಂಡಿದೆ.

    ಬಿಗ್‌ಬಾಸ್‌ ಕನ್ನಡ ಇತಿಹಾಸದಲ್ಲಿಯೇ, ಕ್ಯಾಪ್ಟನ್‌ಶಿಪ್‌ನಲ್ಲಿ ಇದ್ದು, ಎಲಿಮಿನೇಟ್‌ ಆದ ಮೊದಲ ಸ್ಪರ್ಧಿಯಾಗಿ ನೀತು ಹೊರಗೆ ಹೋಗಿದ್ದಾರೆ. ಟ್ರಾನ್ಸ್‌ಜೆಂಡರ್‍ ಸಮುದಾಯದಿಂದ ಬಂದಿರುವ ನೀತು, ‘ನಮ್ಮ ಸಮುದಾಯದವರ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಬಿಗ್‌ಬಾಸ್‌ ವೇದಿಕೆಯ ಮೂಲಕ ಮಾಡುತ್ತೇನೆ’ ಎಂದು ಆರಂಭದಲ್ಲಿಯೇ ಹೇಳಿದ್ದರು. ಹಾಗೆಂದು ಮನೆಯೊಳಗೆ ಹೋದಾಗ ಮೊದಲ ಕೆಲವು ದಿನಗಳನ್ನು ಬಿಟ್ಟರೆ ತಮ್ಮ ಸಮುದಾಯದವರ ಬಗ್ಗೆ ಅವರು ಮಾತನಾಡಿದ್ದು ಕಡಿಮೆಯೇ!

    ಇದನ್ನೂ ಓದಿ:  ವಿದೇಶದಲ್ಲಿ ಮದುವೆ ಹೆಚ್ಚಿದ ಟ್ರೆಂಡ್: ಪ್ರತಿಷ್ಠಿತ ಕುಟುಂಬಗಳು, ಸೆಲೆಬ್ರಿಟಿಗಳ ಒಲವು ಹೊರದೇಶಗಳತ್ತ

    ಈಗ ಅವರು ಬಿಗ್‌ಬಾಸ್ ಮನೆಯಿಂದ ಹೊರ ನಡೆದಿದ್ದಾರೆ. ಹೊರಹೋಗುವ ಮೊದಲು ಅವರು ತಮ್ಮ ಬದುಕಿನ ಬಗ್ಗೆ, ಬಿಗ್‌ಬಾಸ್ ಮನೆಯಿಂದ ತಮ್ಮ ಬದುಕಿನಲ್ಲಾದ ಬದಲಾವಣೆಯ ಬಗ್ಗೆಯೂ ಒಂದಷ್ಟು ಅಭಿಪ್ರಾಯ ಹಂಚಿಕೊಂಡರು. ಕನ್ವರ್ಟ್‌ ಆಗುವ ಮೊದಲು ನನ್ನ ಬದುಕು ನರಕವೇ ಆಗಿತ್ತು. ಹೆಣ್ಣಾಗಿ ಫೀಲ್ ಮಾಡ್ತಿದ್ದೆ. ಹೊರಗಡೆ ಹುಡುಗನಾಗಿ ಹುಡುಗನಾಗಿ ಕಾಣಿಸ್ತಿದ್ದೆ. ಅದು ನಾನು ಅನಿಸ್ತಿರ್ಲಿಲ್ಲ. ಯಾವಾಗ ನನ್ನ ತಾಯಿ ನನ್ನನ್ನು ಒಪ್ಪಿಕೊಂಡ್ರೋ ಆಗ ನನ್ನ ಹೊಸ ಜೀವನ ಶುರುವಾಯ್ತು ಎಂದರು.

    ಈಗ ಪ್ರತಿ ಕ್ಷಣವನ್ನೂ ಎಂಜಾಯ್ ಮಾಡ್ತಿದ್ದೀನಿ. ಇಲ್ಲಿಯೂ ಪ್ರತಿಕ್ಷಣ ಎಂಜಾಯ್ ಮಾಡಿದ್ದೀನಿ. ಎಲ್ಲರಿಂದಲೂ ಪ್ರೀತಿ ಸಿಕ್ಕಿದೆ. ಟ್ರಾನ್ಸ್‌ಜೆಂಡರ್‍ ಆಗಿರುವ ನನಗೆ ವೇದಿಕೆ ಕೊಟ್ಟಿರುವುದಕ್ಕೆ ಧನ್ಯವಾದ. ಎಲ್ಲರ ಪ್ರೀತಿ ನನಗೆ ನೂರಕ್ಕೆ ನೂರು ಸಿಕ್ಕಿದೆ. ಆ ಪ್ರೀತಿಯನ್ನು ತೆಗೆದುಕೊಂಡು ಹೋಗುತ್ತಿದ್ದೇನೆ ಎಂಬ ಖಷಿಯಿದೆ. ಎಲ್ಲರಿಂದಲೂ ಒಂದೊಂದು ವಿಷಯ ಕಲಿತಿದ್ದೀನಿ. ಇಲ್ಲಿನ ಒಂದೊಂದು ಕ್ಷಣವನ್ನೂ ನಾನು ಸೆಲಬ್ರೇಟ್ ಮಾಡಿದ್ದೀನಿ ಎಂದು ನೀತು ಸಂತಸದಿಂದ ಹೇಳಿದರು.

    ಇದನ್ನೂ ಓದಿ:  ಬೆಂಗಳೂರು ಹಬ್ಬ ಹೆಸರಲ್ಲಿ ಭ್ರಷ್ಟೋತ್ಸವ! ಪ್ರಾಥಮಿಕ ಮಾಹಿತಿ ಸಂಗ್ರಹದಲ್ಲೇ ವ್ಯತ್ಯಾಸ ಬಹಿರಂಗ

    ದಿನದ 24 ಗಂಟೆಗಳ ಲೈವ್​ ಸ್ಟ್ರೀಮಿಂಗ್​ ಜಿಯೋ ಸಿನಿಮಾದಲ್ಲಿ ಪ್ರಸಾರವಾಗುತ್ತಿದೆ.

    ಆಲಿಕಲ್ಲು ಸಹಿತ ಭಾರೀ ಮಳೆ: 14 ಮಂದಿ ಮೃತ್ಯು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts