BBKS10: ಸ್ಪರ್ಧಿಗಳ ಮುಂದೆ ಸಂಗೀತಾ ಶೃಂಗೇರಿ ಕಣ್ಣೀರು!

Untitled design (64)
Published on

ಬೆಂಗಳೂರು: ದೀಪಾವಳಿ ಹಬ್ಬದ ಖುಷಿಗಾಗಿ ಸ್ಪರ್ಧಿಗಳಿಗೆ ಬಿಗ್‌ಬಾಸ್‌ ಮನೆಯಡುಗೆ ಕೊಟ್ಟು ಕಳಿಸಿದ್ದರು. ಇದೀಗ ಮನೆಯವರಿಂದ ಬಂದ ಪತ್ರಗಳನ್ನೂ ಕೊಡುತ್ತಿದ್ದಾರೆ. ಆದರೆ ಒಂದು ವಿಭಿನ್ನ ಆಟದ ಮೂಲಕ ಈ ಪತ್ರಗಳನ್ನು ಪಡೆಯಬೇಕಿದೆ.

ತಮ್ಮ ಪ್ರೀತಿ ಪಾತ್ರರಿಂದ ಪತ್ರ ಪಡೆಯಲು ಭಾರೀ ಕಸರತ್ತು ನಡೆಸುತ್ತಿರುವ ಸದಸ್ಯರಿಗೆ ಮನೆಯಡುಗೆ ತಿಂದಷ್ಟು ಸುಲಭವಾಗಿ ಪತ್ರಗಳು ಕೈಗೆ ಸಿಗುತ್ತಿಲ್ಲ. ಒಂದೊಂದು ಪತ್ರಕ್ಕೂ ಒಂದಷ್ಟು ಟಾಸ್ಕ್‌ಗಳನ್ನು ಕೊಟ್ಟು ಅದರಲ್ಲಿ ಗೆದ್ದವರಿಗೆ ಮಾತ್ರವೇ ಪತ್ರ ಕೊಡುವುದಾಗಿ ತಿಳಿಸಲಾಗಿದೆ.

ಈಗಾಗಲೇ ವಿನಯ್ ಗೌಡ ಮತ್ತು ನಮ್ರತಾ ಮನೆಯಿಂದ ಬಂದ ಪತ್ರಗಳನ್ನು ಪಡದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆದ್ರೆ, ಕೆಲವು ಸದಸ್ಯರು ಪತ್ರಗಳನ್ನು ಪಡೆದುಕೊಳ್ಳಲು ವಿಫಲರಾಗಿದ್ದಾರೆ. ಇನ್ನುಳಿದ ಸದಸ್ಯರ ಅದೃಷ್ಟ ಪರೀಕ್ಷೆ ಇನ್ನಷ್ಟೇ ನಡೆಯಬೇಕಿದೆ.

ಇಂದು ಬಿಗ್‌ಬಾಸ್‌ ಮನೆಯಲ್ಲಿ ಇನ್ನಷ್ಟು ಜನರಿಗೆ ಪತ್ರ ಪಡೆದುಕೊಳ್ಳಲು ಟಾಸ್ಕ್ ನೀಡಿದ್ದಾರೆ. ಚಟುವಟಿಕೆ ಏನೋ ತುಂಬ ಸಿಂಪಲ್ ಆಗಿ ಕಾಣಿಸುತ್ತಿದೆ. ಕನ್‌ಫೆಷನ್ ರೂಂನಲ್ಲಿ ಕೂತ ಇಬ್ಬರು, ಬಿಗ್‌ಬಾಸ್‌ ಮನೆಯ ಕುರಿತಾಗಿಯೇ ಕೇಳುವ ಸರಳವಾದ ಪ್ರಶ್ನೆಗಳಿಗೆ ಉತ್ತರಿಸಬೇಕು. ಆ ಪ್ರಶ್ನೆಗಳು ಎಷ್ಟು ಸರಳವಾಗಿವೆಯೆಂದರೆ, ಪ್ರತಿದಿನವೂ ಅದನ್ನು ನೋಡುತ್ತ, ಬಳಸುತ್ತಲೇ ಇದ್ದರೂ ಅದು ಸ್ಪರ್ಧಿಗಳ ಗಮನಕ್ಕೆ ಬಂದಿಲ್ಲ. ಹಾಗಾಗಿಯೇ ಉತ್ತರ ಕೊಡುವುದೂ ಕಷ್ಟವಾಗಿದೆ.

ಈ ಪ್ರಶ್ನೋತ್ತರ ಕಾರ್ಯಕ್ರಮದಲ್ಲಿ ಯಾರು ಗೆಲ್ಲುತ್ತಾರೆ? ಯಾರ ಮನೆಯಿಂದ ಬಂದ ಪತ್ರ ಸ್ಪರ್ಧಿಗಳ ಕೈ ಸೇರುತ್ತದೆ? ಯಾರು ನಿರಾಸೆಯಲ್ಲಿ ಮುಳುಗಬೇಕಾಗುತ್ತದೆ? ಸಂಗೀತಾ ಕಣ್ಣೀರಿಡಲು ಕಾರಣವೇನು ಎಂಬುದನ್ನು ಇಂದಿನ ಸಂಚಿಕೆಯಲ್ಲಿ ತಿಳಿಯಬೇಕಿದೆ.

ದಿನದ 24 ಗಂಟೆಗಳ ಲೈವ್​ ಸ್ಟ್ರೀಮಿಂಗ್​ ಜಿಯೋ ಸಿನಿಮಾದಲ್ಲಿ ಪ್ರಸಾರವಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net