BBKS10: 'ಯಾರಿಂದನೂ ನಾನೇನು ಕಲಿಬೇಕಾಗಿಲ್ಲ'…; ಧ್ವನಿ ಏರಿಸಿದ ತುಕಾಲಿ ಸಂತೋಷ್​

Untitled design (74)
Published on

ಬೆಂಗಳೂರು: ಬಿಗ್​ ಬಾಸ್​ ಮನೆಯಲ್ಲಿ ಮತ್ತೆ ಶುರುವಾಯ್ತು ಕ್ಯಾಪ್ಟನ್ಸಿಗಾಗಿ ಕಚ್ಚಾಟ! ವೀಕೆಂಡ್ ಬಂತು ಅಂದ್ರೆ ಕ್ಯಾಪ್ಟನ್ಸಿ ಟಾಸ್ಕ್‌ನ ಬಿಸಿ ಬಿಗ್‌ಬಾಸ್‌ ಮನೆಯಲ್ಲಿ ಏರಲು ಶುರುವಾಗುತ್ತದೆ. ಕ್ಯಾಪ್ಟನ್ಸಿ ಟಾಸ್ಕ್‌ನಲ್ಲಿ ಯಾರು ಭಾಗವಹಿಸಬೇಕು? ಯಾರು ಯಾರನ್ನು ಬೆಂಬಲಿಸಬೇಕು? ಲೆಕ್ಕಾಚಾರ ಹೇಗಿರಬೇಕು ಇವೆಲ್ಲ ಚರ್ಚೆಗಳಲ್ಲಿಯೇ ಸ್ಫರ್ಧಿಗಳು ತಲ್ಲೀನರಾಗುತ್ತಿದ್ದರು.

ಆದರೆ, ಈ ಸಲ ಕ್ಯಾಪ್ಟನ್ಸಿ ಟಾಸ್ಕ್‌ಗೆ ಬಿಗ್‌ಬಾಸ್ ಒಂದು ಸಣ್ಣ ಟ್ವಿಸ್ಟ್ ಕೊಟ್ಟಿದ್ದಾರೆ. ಕ್ಯಾಪ್ಟನ್ಸಿ ಚಟುವಟಿಕೆಯನ್ನು ಯಾವ ಐದು ಸ್ಪರ್ಧಿಗಳು ಆಡಬೇಕು ಎಂದು ನೀವೇ ನಿರ್ಧರಿಸಿಕೊಳ್ಳಿ ಎಂದು ಅವರವರಿಗೆ ಬಿಟ್ಟಿದ್ದಾರೆ. ನಮ್ರತಾ, ಸಿರಿ, ಕಾರ್ತಿಕ್, ಪ್ರತಾಪ್, ವರ್ತೂರು ಸಂತೋಷ್​ ಈ ಐವರು ಕ್ಯಾಪ್ಟನ್ಸಿ ಆಟವನ್ನು ಆಡಬೇಕು ಎಂದು ಮನೆಯ ಸದಸ್ಯರು ವೋಟಿಂಗ್ ಮೂಲಕ ಆರಿಸಿದ್ದಾರೆ. ಆದ್ರೆ, ಇದಕ್ಕೆ ತುಕಾಲಿ ಸಂತೋಷ್ ಆಕ್ಷೇಪಿಸಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ವಿನಯ್​ ಜತೆಗೆ ವಾಗ್ವಾಕ್ಕಿಳಿದ ತುಕಾಲಿ ಸಂತೋಷ್, "ಕರೆಕ್ಟಾಗಿ ವೋಟಿಂಗ್ ಆಗಿಲ್ಲ. ನಾವೂ ಭಾಗವಹಿಸಬೇಕು ಎಂದು ನಮಗೆ ಅನಿಸುತ್ತದೆ" ಎಂದರು. ಈ ಮಾತಿಗೆ ವಿರೋಧ ವ್ಯಕ್ತಪಡಿಸಿದ ವಿನಯ್​, "ನೀವು ಆಡಿರುವುದು ಒಂದೇ ಟಾಸ್ಕ್‌" ಎಂದು ಹೇಳಿದರು. ಇದರಿಂದ ಸಿಟ್ಟಿಗೆದ್ದ ಸಂತು, "ಒಂದೇ ಟಾಸ್ಕ್‌ನಲ್ಲಿ ನನ್ನ ನಾನು ಪ್ರೂವ್ ಮಾಡಿಕೊಂಡಿದ್ದೀನಿ". ಇನ್ನು ಚುಚ್ಚುವ ಮಾತು ಬಂದಾಗ "ಯಾರಿಂದನೂ ನಾನೇನು ಕಲಿಬೇಕಾಗಿಲ್ಲ" ಎಂದು ಏರುಧ್ವನಿಯಲ್ಲಿ ಹೇಳಿದ್ದಾರೆ.

ಒಂದೆಡೆ ಮನೆಯವರ ಮತ ಪಡೆದು ಆಯ್ಕೆ ಮಾಡಿರುವುದು ಎಂದು ವಿನಯ್​ ಹೇಳಿದರೆ, ಇತ್ತ ತುಕಾಲಿ ಸಂತೋಷ್​ ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದು, ಮಾತಿಗೆ ಮಾತು ಬೆಳೆದು ಇಬ್ಬರ ಮಧ್ಯೆ ಜಟಾಪಟಿಯೂ ನಡೆದಿದೆ. ಹಾಗಾದ್ರೆ ಕ್ಯಾಪ್ಟನ್ಸಿ ಟಾಸ್ಕ್‌ಗೆ ಆಡುವ ಸ್ಪರ್ಧಿಗಳ ಲೀಸ್ಟ್ ಬದಲಾಗುತ್ತದೆಯೇ? ಸಂತೋಷ್ ಕ್ಯಾಪ್ಟನ್ಸಿ ಟಾಸ್ಕ್‌ನ ಕಣಕ್ಕೆ ಇಳಿಯುತ್ತಾರಾ? ಈ ಪ್ರಶ್ನೆಗೆ ಇಂದಿನ ಸಂಚಿಕೆಯಲ್ಲಿ ಉತ್ತರ ಸಿಗಲಿದೆ.

ದಿನದ 24 ಗಂಟೆಗಳ ಲೈವ್​ ಸ್ಟ್ರೀಮಿಂಗ್​ ಜಿಯೋ ಸಿನಿಮಾದಲ್ಲಿ ಪ್ರಸಾರವಾಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net