More

    ಬೆಂಗಳೂರಲ್ಲಿ ಮತ್ತೆ ಸೀಲ್​ಡೌನ್​, ಈ 5 ಏರಿಯಾಗಳು ಕಂಪ್ಲೀಟ್​ ಬಂದ್

    ಬೆಂಗಳೂರು: ರಾಜಧಾನಿಯಲ್ಲಿ ಕರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಇಂದು ಸಿಎಂ ಬಿ.ಎಸ್​. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

    ಕರೊನಾ ಸೋಂಕು ಉಲ್ಬಣ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಐದು ಏರಿಯಗಳನ್ನು 10 ದಿನಗಳವರೆಗೆ ಕಂಪ್ಲೀಟ್​ ಬಂದ್​ ಮಾಡಲಾಗುತ್ತಿದೆ. ಸಿದ್ದಾಪುರ, ವಿಶ್ವೇಶ್ವರಪುರ, ಕಲಾಸಿಪಾಳ್ಯ, ವಿದ್ಯಾರಣ್ಯಪುರ, ಧರ್ಮರಾಯಸ್ವಾಮಿ ದೇವಸ್ಥಾನ ಏರಿಯಾ ಫುಲ್​ ಬಂದ್​ ಆಗಲಿದೆ. ಇದನ್ನೂ ಓದಿರಿ video/ ಕರೊನಾ ವಾರ್ಡಿನಲ್ಲಿ ‘ನರಕ’ ದರ್ಶನ, ಶೌಚಗೃಹದ ನೀರನ್ನೇ ಕುಡಿದ ಸೋಂಕಿತರು!

    ಮಾರ್ಕೆಟ್ ಏರಿಯಾಗಳಲ್ಲಿ ಸೋಂಕು ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಮಾರ್ಕೆಟ್ ಏರಿಯಾಗಳಾದ ಕಲಾಸಿಪಾಳ್ಯ, ಕೆ.ಆರ್.ಮಾರ್ಕೆಟ್ ಅನ್ನು ಸಂಪೂರ್ಣವಾಗಿ ಬಂದ್​ ಮಾಡಲಾಗುತ್ತಿದೆ ಎಂದು ಸಭೆ ಬಳಿಕ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

    ಸೀಲ್‌ಡೌನ್ ಪ್ರದೇಶ ಮತ್ತು ಕಂಟೇನ್‌ಮೆಂಟ್ ಏರಿಯಾಗಳಲ್ಲಿ ಇರುವವರು ಮನೆಯಿಂದ ಹೊರಗೆ ಬರಬೇಕೆಂದರೆ ಸ್ಮಾರ್ಟ್‌ಫೋನ್ ತರುವುದು ಕಡ್ಡಾಯ ಎಂದು ಹೇಳಿದರು. ಅದರಲ್ಲಿ ಆರೋಗ್ಯ ಸೇತು ಆ್ಯಪ್ ಡೌನ್‌ಲೋಡ್ ಮಾಡಿಕೊಂಡಿರಬೇಕು. ಭದ್ರತೆಗೆ ನಿಯೋಜಿತರಾದವರು ಅದನ್ನು ಪರಿಶೀಲಿಸುತ್ತಾರೆ. ಸೋಂಕು ನಿಯಂತ್ರಣ ಮಾಡಲು ಎಚ್ಚರಿಕೆಯಿಂದ ಹೆಜ್ಜೆ ಇಡುವ ಬಗ್ಗೆ ಚರ್ಚಿಸಲಾಗಿದ್ದು, ಶ್ರಮವಹಿಸಿ ಕೆಲಸ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇನ್ನು ಕ್ವಾರಂಟೈನ್ ಉಲ್ಲಂಘಿಸುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗುತ್ತದೆ ಎಂದು ಹೇಳಿದರು.

    ಇದನ್ನೂ ಓದಿರಿ ಅವಳಿ ಮಕ್ಕಳಿಗೆ ಜನ್ಮ ನೀಡಿದ ಕರೊನಾ ಸೋಂಕಿತೆ!

    ಈ ಪ್ರದೇಶಗಳಲ್ಲಿ ಎಲ್ಲರ ಆರೋಗ್ಯ ತಪಾಸಣೆ ನಡೆಯಲಿದೆ. ಗಂಭೀರ ಸಮಸ್ಯೆ ಉಳ್ಳವರನ್ನು ಮಾತ್ರ ಕರೊನಾ ಆಸ್ಪತ್ರೆಗಳಿಗೆ ರವಾನಿಸಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

    ಸಭೆಯಲ್ಲಿ ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಮುಂತಾದವರು ಪಾಲ್ಗೊಂಡಿದ್ದರು.

    ಇದನ್ನೂ ಓದಿರಿ 

    video/ ಕರೊನಾ ವಾರ್ಡಿನಲ್ಲಿ ‘ನರಕ’ ದರ್ಶನ, ಶೌಚಗೃಹದ ನೀರನ್ನೇ ಕುಡಿದ ಸೋಂಕಿತರು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts